ಸರ್ಕಾರ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಚಿತ್ರದುರ್ಗ ಜನತೆ; ಚರ್ಚೆ ನಡೆಸುವುದಾಗಿ ಸಂಸದ ಭರವಸೆ

|

Updated on: Mar 26, 2021 | 1:58 PM

ಅನೇಕ ಪ್ರತಿಭಟನೆ, ಹೋರಾಟಗಳನ್ನು ಸಹ ಈ ಭಾಗದ ಜನರು ಮಾಡಿದ್ದಾರೆ. ಹೀಗಾಗಿ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಸ್ಥಳದಲ್ಲೇ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸರ್ಕಾರ ನಿರ್ಧರಿಸಿದೆ. ಅಂತೆಯೇ ಆರೋಗ್ಯ ಇಲಾಖೆ ಸಚಿವ ಡಾ.ಸುಧಾಕರ್​ರವರು ಈಗಾಗಲೇ ಜಿಲ್ಲೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಕೂಡಾ ಮಾಡಿದ್ದಾರೆ.

ಸರ್ಕಾರ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಚಿತ್ರದುರ್ಗ ಜನತೆ; ಚರ್ಚೆ ನಡೆಸುವುದಾಗಿ ಸಂಸದ ಭರವಸೆ
ಚಿತ್ರದುರ್ಗ ಜಿಲ್ಲೆಯ ಚಿತ್ರಣ
Follow us on

ಚಿತ್ರದುರ್ಗ: ಜನರ ಹೋರಾಟದ ಫಲವಾಗಿ ಕೋಟೆನಾಡಿಗೆ ಮೆಡಿಕಲ್ ಕಾಲೇಜು ಮಂಜೂರಾಗಿದೆ. ಆದರೆ ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜು ಎಂದು ಸರ್ಕಾರ ಘೋಷಣೆ ಮಾಡಿದ್ದು, ಜನರಲ್ಲಿ ಆಕ್ರೋಶ ಮೂಡಿಸಿದೆ. ಚಿತ್ರದುರ್ಗ ಜಿಲ್ಲೆಯೊಂದು ಹಿಂದುಳಿದ ಜಿಲ್ಲೆ. ಅಂತೆಯೇ ಹೆಚ್ಚು ಹೆದ್ದಾರಿಗಳು ಹೊಂದಿರುವ ಜಿಲ್ಲೆ. ಹೀಗಾಗಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಗತ್ಯತೆ ಇದೆ ಎಂಬುದು ಈ ಭಾಗದ ಜನರ ಬೇಡಿಕೆಯಾಗಿದೆ.

ಅನೇಕ ಪ್ರತಿಭಟನೆ, ಹೋರಾಟಗಳನ್ನು ಸಹ ಈ ಭಾಗದ ಜನರು ಮಾಡಿದ್ದಾರೆ. ಹೀಗಾಗಿ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಸ್ಥಳದಲ್ಲೇ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸರ್ಕಾರ ನಿರ್ಧರಿಸಿದೆ. ಅಂತೆಯೇ ಆರೋಗ್ಯ ಇಲಾಖೆ ಸಚಿವ ಡಾ.ಸುಧಾಕರ್​ರವರು ಈಗಾಗಲೇ ಜಿಲ್ಲೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಕೂಡಾ ಮಾಡಿದ್ದಾರೆ. ಕಳೆದ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಘೋಷಿಸಿ ಅನುದಾನ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜು ಎಂದು ಹೇಳಿದ್ದಾರೆ. ಆ ಮೂಲಕ ಹಿಂದುಳಿದ ಜಿಲ್ಲೆಯ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಚಿತ್ರದುರ್ಗ ಬಿಜೆಪಿ ಸಂಸದ ಎ.ನಾರಾಯಣಸ್ವಾಮಿ ಅವರನ್ನು ಕೇಳಿದರೆ 500-600 ಕೋಟಿ ವೆಚ್ಚದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಆಗಲಿದೆ. ಡಿಎಂಎಫ್ ಫಂಡ್ ಹಣ ನೀಡುವ ಮೂಲಕ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲು ಚಿಂತನೆ ಮಾಡಿದ್ದೇವೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲು ಸರ್ಕಾರಿ ಮೆಡಿಕಲ್ ಕಾಲೇಜು ನೀಡುವಂತೆ ಸಿಎಂ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿ ಕೇಂದ್ರದ ಅನುಮತಿಯನ್ನು ತರುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ

ಕೇಬಲ್ ಆಪರೇಟರ್ಸ್ ಕಚೇರಿ ಉದ್ಘಾಟನೆ; ಗ್ರಾಮೀಣ ಕೇಬಲ್ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ: ಅಧ್ಯಕ್ಷ ಪ್ಯಾಟ್ರಿಕ್ ರಾಜು

ಮಕ್ಕಳ ಮನೆ ಬಾಗಿಲಿಗೆ ಶಿಕ್ಷಕರು.. ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಸ ನಡೆ ಆರಂಭಿಸಿದ ಚಿಕ್ಕಮಗಳೂರು ಶಿಕ್ಷಕರು

Published On - 1:58 pm, Fri, 26 March 21