ರೇಣುಕಾಸ್ವಾಮಿ ಕೊಲೆ: ಸ್ವಲ್ಪ ನಿರ್ಲಕ್ಷ್ಯಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು; ಬಿ ದಯಾನಂದ್​​

ಚಂದನವನದ ಸ್ಟಾರ್​ ನಟ ದರ್ಶನ್ ಅವರನ್ನು ಮೈಸೂರಿನ ರ‍್ಯಾಡಿಸನ್​ ಹೋಟೆಲ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರು ಪೊಲೀಸ್​ ಆಯುಕ್ತ ಬಿ ದಯಾನಂದ್​ ​​ಸುದ್ದಿಗೋಷ್ಠಿ ನಡೆಸಿದ್ದಾರೆ.

Follow us
Jagadisha B
| Updated By: ವಿವೇಕ ಬಿರಾದಾರ

Updated on:Jun 18, 2024 | 12:39 PM

ಬೆಂಗಳೂರು, ಜೂನ್​ 18: ನಟ ದರ್ಶನ್ (Darshan) ಮತ್ತು ಗ್ಯಾಂಗ್​ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ (Chitradurga Renukaswamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 17 ಆರೋಪಿಗಳನ್ನ ಬಂಧಿಸಲಾಗಿದೆ. ಕೂಲಂಕಷವಾದ ತನಿಖೆ ಮಾಡಲಾಗುತ್ತಿದೆ. ಬೇರೆ ಬೇರೆ ಆಯಾಮಗಳಿಂದ ತನಿಖೆಯನ್ನ ನಡೆಸಲಾಗುತ್ತಿದೆ. ಸಮರ್ಪಕವಾದ ರೀತಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ವಿವರಗಳನ್ನ ನಾವು ಈಗಲೇ ಹೇಳಲು ಆಗುವುದಿಲ್ಲ. ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು ಎಂದು ಬೆಂಗಳೂರು ಪೊಲೀಸ್​ ಆಯುಕ್ತ​ ಬಿ. ದಯಾನಂದ್ (Police Commissioner B Dayanand) ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣದ ಗಂಭಿರತೆಯಿಂದ ಕೂಡಿರುವುದರಿಂದ ಎಸಿಪಿಗೆ ತನಿಖಾ ಹೊಣೆ ನೀಡಲಾಗಿದೆ. ಅಗತ್ಯ ಸಿಬ್ಬಂದಿಗಳನ್ನು ಒದಗಿಸಲಾಗಿದೆ. ಬೆಂಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಕಡೆ ತಂಡಗಳಿಂದ ತನಿಖೆ ನಡೆಯುತ್ತಿದೆ. ಇನ್ಸ್ಪೆಕ್ಟರ್​ಗಳು ತಂಡದಲ್ಲಿ ತನಿಖೆ ನಡೆಸುತಿದ್ದಾರೆ. ಸಮರ್ಪಕ ಹಾಗೂ ವಿಧಿವಿಜ್ಞಾನ, ತಾಂತ್ರಿಕ, ಕಾನೂನು ಸಲಹೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಜಯನಗರ ಪೊಲೀಸರು ಮನೆ ಕಳ್ಳತ ಆರೋಪಿಗಳನ್ನು ಬಂಧಿಸಿದ್ದಾರೆ. ಮನೆಯವರು ಬೀಗ ಹಾಕಿಕೊಂಡು ಊರಿಗೆ ಹೊಗಿದ್ದರು. ವಾಪಾಸ್ ಮನೆಗೆ ಬಂದು ನೋಡಿದಾಗ ಕಳ್ಳತನವಾಗಿತ್ತು. ಊರಿಗೆ ಹೊಗುವಾಗ ಮನೆಯ ಪಕ್ಕದ ಮನೆವರಿಗೆ ಕೀ ಕೊಟ್ಟಿದ್ದರು. ಪಕ್ಕದ ಮನೆಯವರ ಮೇಲೆ ಅನುಮಾನ ಮೂಡಿ, ಮನೆ ಮಾಲಿಕ ದೂರು ನೀಡಿದ್ದರು. ತನಿಖೆ ನಡೆಸಿದಾಗ ಪಕ್ಕದ ಮನೆಯ ವ್ಯಕ್ತಿ ಕಳ್ಳತನ ಮಾಡಿರುವುದು ಪತ್ತೆಯಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಕಳುವು ಮಾಡಿದ್ದ ಚಿನ್ನ ವಶಕ್ಕೆ ಪಡೆಯಲಾಗಿದೆ. ಈ ರೀತಿ ಕೃತ್ಯಗಳ ಎಸಗುವವರ ಬಗ್ಗೆ ಜನರು ಎಚ್ಚರವಿರಬೇಕು ಎಂದರು.

ಇದನ್ನೂ ಓದಿ: ದರ್ಶನ್ ಮತ್ತು ಗ್ಯಾಂಗ್​ನಿಂದ, ನಿರ್ಮಾಪಕ ಉಮಾಪತಿ ಮೇಲೆ ಹಲ್ಲೆಗೆ ನಡೆದಿತ್ತು ಯತ್ನ

ಕಿಡ್ನಾಪ್ ಮಾಡಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಇಬ್ಬರು ಬೈಕ್​ನಲ್ಲಿ ತೆರಳುವಾಗ ಅವರನ್ನು ಅಪಹರಿಸಲಾಗಿತ್ತು. ಬಳಿಕ ಅವರಿಂದ ಮೊಬೈಲ್, ಹಣ ಸುಲಿಗೆ ಮಾಡಲಾಗಿತ್ತು. ದೂರು ಬಂದ ಬಳಿಕ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ. ಕಳುವಾಗಿದ್ದ ಹಣ, ಬೈಕ್​ ಅನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಹೆಣ್ಣೂರು ಪೊಲೀಸರು ಮೊಬೈಲ್ ಕಳ್ಳರನ್ನು ಬಂಧಿಸಿದ್ದಾರೆ. ನಸುಕಿನ ಜಾವ 4 ಗಂಟೆ ಸುಮಾರಿಗೆ ಹೋಟೆಲ್ ಒಂದರ ಬಳಿ ಚಾಕು ತೋರಿಸಿ ಮೊಬೈಲ್​ ಕಳವು ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಲಾಗಿದೆ. ಬಂಧಿತರಿಂದ ಕಳುವಾದ ಮೊಬೈಲ್​ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಬಾಣಸವಾಡಿ ಪೊಲೀಸರು ಹೋಟೆಲ್ ಮೇಲೆ ದಾಳಿ ಮಾಡಲಾಗಿದ್ದು, ಇಬ್ಬರು ವಿದೇಶಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಹೋಟೆಲ್​ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:07 pm, Tue, 18 June 24