ಶಿಥಿಲಾವಸ್ಥೆ ತಲುಪಿದ ಶಾಲೆಯಲ್ಲೇ ವಿದ್ಯಾರ್ಥಿಗಳ ಪಾಠ

ಚಿತ್ರದುರ್ಗ: ಶಿಕ್ಷಣ ಕ್ಷೇತ್ರ ಅಭಿವೃದ್ಧಿಗಾಗಿ ಸರ್ಕಾರ ನಾನಾ ಯೋಜನೆಗಳನ್ನು ರೂಪಿಸ್ತಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡ್ತಿದೆ. ಆದ್ರೆ, ಕೋಟೆನಾಡಿನ ಸರ್ಕಾರಿ ಶಾಲೆಯೊಂದರ ಸ್ಥಿತಿ ಶೋಚನೀಯವಾಗಿದೆ. ಆಸೆಯಿಂದ ಶಾಲೆಗೆ ಹೋಗಬೇಕಾದ ಮಕ್ಕಳು ಆತಂಕದಲ್ಲೇ ಪಾಠ ಕಲೀತಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಗಳು ಶಿಥಿಲಗೊಂಡಿವೆ. ಮೇಲ್ಛಾವಣಿ ಹೆಂಚುಗಳು ಒಡೆದು ಹೋಗಿವೆ. ಶಾಲಾ ಕಟ್ಟಡ ಆಗ್ಲೋ.. ಈಗ್ಲೋ ಬೀಳುವಂತಿದೆ. ಕುಸಿದು ಬೀಳೋ ಆತಂಕದಲ್ಲೇ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮಾಡತ್ತಿದ್ದಾರೆ. ಇದು ಸ್ವತಂತ್ರ ಪೂರ್ವದಲ್ಲಿ ನಿರ್ಮಾಣವಾಗಿರೋ […]

ಶಿಥಿಲಾವಸ್ಥೆ ತಲುಪಿದ ಶಾಲೆಯಲ್ಲೇ ವಿದ್ಯಾರ್ಥಿಗಳ ಪಾಠ
ಸಾಧು ಶ್ರೀನಾಥ್​

Updated on: Dec 18, 2019 | 2:52 PM

ಚಿತ್ರದುರ್ಗ: ಶಿಕ್ಷಣ ಕ್ಷೇತ್ರ ಅಭಿವೃದ್ಧಿಗಾಗಿ ಸರ್ಕಾರ ನಾನಾ ಯೋಜನೆಗಳನ್ನು ರೂಪಿಸ್ತಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡ್ತಿದೆ. ಆದ್ರೆ, ಕೋಟೆನಾಡಿನ ಸರ್ಕಾರಿ ಶಾಲೆಯೊಂದರ ಸ್ಥಿತಿ ಶೋಚನೀಯವಾಗಿದೆ. ಆಸೆಯಿಂದ ಶಾಲೆಗೆ ಹೋಗಬೇಕಾದ ಮಕ್ಕಳು ಆತಂಕದಲ್ಲೇ ಪಾಠ ಕಲೀತಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಗಳು ಶಿಥಿಲಗೊಂಡಿವೆ. ಮೇಲ್ಛಾವಣಿ ಹೆಂಚುಗಳು ಒಡೆದು ಹೋಗಿವೆ. ಶಾಲಾ ಕಟ್ಟಡ ಆಗ್ಲೋ.. ಈಗ್ಲೋ ಬೀಳುವಂತಿದೆ. ಕುಸಿದು ಬೀಳೋ ಆತಂಕದಲ್ಲೇ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮಾಡತ್ತಿದ್ದಾರೆ.

ಇದು ಸ್ವತಂತ್ರ ಪೂರ್ವದಲ್ಲಿ ನಿರ್ಮಾಣವಾಗಿರೋ ಶಾಲೆ. ಸುಮಾರು ವರ್ಷಗಳಿಂದ ಶಿಥಿಲಾವಸ್ಥೆ ತಲುಪಿದ್ದು, ಗ್ರಾಮದ ಜನ ದೂರು ಸಲ್ಲಿಸಿದ್ರೂ ಅಧಿಕಾರಿಗಳು ಮಾತ್ರ ಕ್ಯಾರೆ ಅಂತಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಆತಂಕದಲ್ಲೇ ವಿದ್ಯಾಭ್ಯಾಸ ಮಾಡ್ತಿದ್ದಾರೆ. ಹೀಗಾಗಿ, ಶಾಲಾ ಕಟ್ಟಡವನ್ನ ನೆಲಸಮಗೊಳಿಸಿ ನೂತನ ಕಟ್ಟಡ ನಿರ್ಮಾಣ ಮಾಡಬೇಕು ಅನ್ನೋದು ಪೋಷಕರ ಆಗ್ರಹ.

ಶಾಲಾ ಕಟ್ಟಡ ಶಿಥಿಲಗೊಂಡಿರೋದ್ರಿಂದ ಶಾಲಾ ಆವರಣದ ಬಯಲಲ್ಲೇ ವಿದ್ಯಾಭ್ಯಾಸ ಮಾಡಿಸಲಾಗ್ತಿದೆ. ಇನ್ನು ಮಳೆ ಬಂದಾಗಲಂತೂ ಇಲ್ಲಿನ ಕಥೆ ಹೇಳತೀರದಾಗಿದೆ. ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕರನ್ನ ಕೇಳಿದ್ರೆ, ಈಗಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ ಎಂದು ಹೇಳುತ್ತಿದ್ದಾರೆ. ಒಟ್ನಲ್ಲಿ ಕೋಟೆನಾಡಿನ ಸರ್ಕಾರಿ ಶಾಲಾ ಕಟ್ಟಡ ಶಿಥಿಲಾವಸ್ಥೆ ತಲುಪಿದೆ. ವಿದ್ಯಾರ್ಥಿಗಳು ನಿತ್ಯ ಆತಂಕದಲ್ಲೇ ಪಾಠ ಕೇಳುವ ದುಸ್ಥಿತಿ ನಿರ್ಮಾಣ ಆಗಿದೆ.



ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us