ಚಿತ್ರದುರ್ಗ: 18 ಸಾವಿರ ಬಿಪಿಎಲ್ ಕಾರ್ಡ್ ರದ್ದು; ಸರ್ಕಾರದ ವಿರುದ್ಧ ನೊಂದ ರೈತರ ಆಕ್ರೋಶ

ಬಿಪಿಎಲ್ ಕಾರ್ಡ್ ರದ್ದುಗೊಳಿಸಿ ಬಡಜನರ ಹೊಟ್ಟೆ ಮೇಲೆ ಹೊಡೆದ ಸರ್ಕಾರದ ವಿರುದ್ಧ ಸಾವಿರಾರು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಸೌಲಭ್ಯ ಕಸಿದುಕೊಂಡಿದ್ದರ ಬಗ್ಗೆ ಕಿಡಿಕಾರಿದ್ದಾರೆ. ಅಲ್ಲದೇ ನವೆಂಬರ್ ಮೊದಲ ವಾರದೊಳಗೆ ಯಥಾಸ್ಥಿತಿ ಮುಂದುವರೆಸದಿದ್ದರೆ ಹೋರಾಟಕ್ಕೆ ಅಣಿಯಾಗುವ ಎಚ್ಚರಿಕೆ ನೀಡಿದ್ದಾರೆ.

ಚಿತ್ರದುರ್ಗ: 18 ಸಾವಿರ ಬಿಪಿಎಲ್ ಕಾರ್ಡ್ ರದ್ದು; ಸರ್ಕಾರದ ವಿರುದ್ಧ ನೊಂದ ರೈತರ ಆಕ್ರೋಶ
ಬಿಪಿಎಲ್ ಕಾರ್ಡ್
Follow us
TV9 Web
| Updated By: preethi shettigar

Updated on: Oct 25, 2021 | 8:48 AM

ಚಿತ್ರದುರ್ಗ: ಕೊರೊನಾ ಸಂಕಷ್ಟ ಕಾಲದಲ್ಲಿ ಎದುರಾದ ಆರ್ಥಿಕ ನಷ್ಟದಿಂದಲೇ ಜನರು ಇನ್ನು ಹೊರ ಬಂದಿಲ್ಲ. ಅದರಲ್ಲೂ ರೈತರು ಬೆಳೆದ ಬೆಳೆ ಮಾರಾಟ ಮಾಡಲಾಗದೆ, ಮಳೆಗೆ ಕೊಚ್ಚಿ ಹೋದ ಫಸಲನ್ನು ಉಳಿಸಿಕೊಳ್ಳಲಾರದೆ ಕಂಗಾಲಾಗಿದ್ದಾರೆ. ಆದರೆ ಸರ್ಕಾರ ಮಾತ್ರ ರೈತರ ಬೆಂಬಲಕ್ಕೆ ನಿಲ್ಲದೆ ಮತ್ತಷ್ಟು ಕಷ್ಟಕ್ಕೆ ನೂಕುತ್ತಿದೆ. ಇದಕ್ಕೆ ಕಾರಣ ಸರ್ಕಾರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಕೆಲಸ ಮಾಡುತ್ತಿದೆ. ಇದು ಸಹಜವಾಗಿಯೇ ರೈತರ ಆಕ್ರೋಶಕ್ಕೆ ಕಾರಣ ಆಗಿದೆ.

ಚಿತ್ರದುರ್ಗ ಜಿಲ್ಲೆಯೊಂದರಲ್ಲೇ ಸುಮಾರು 18000 ಕಾರ್ಡ್ ರದ್ದುಗೊಳಿಸಲಾಗಿದ್ದು, ಸುಮಾರು 15000 ರೈತರ ಕಾರ್ಡ್​ಗಳು ರದ್ದಾಗಿವೆ. ಸರ್ಕಾರದ ಮಾನದಂಡಗಳು ಸರಿಯಾದ ಕ್ರಮದಲ್ಲಿಲ್ಲ. ಹೀಗಾಗಿ, ಅನೇಕ ಬಡ ರೈತರು ಬಿಪಿಎಲ್ ಕಾರ್ಡ್ ಸೌಲಭ್ಯ ಕಳೆದುಕೊಂಡು ಕಂಗಾಲಾಗುವಂತಾಗಿದೆ. ಹೀಗಾಗಿ, ನವೆಂಬರ್ ಮೊದಲ ವಾರದೊಳಗೆ ಯಥಾಸ್ಥಿತಿ ಮುಂದುವರೆಸಬೇಕು. ಇಲ್ಲವಾದಲ್ಲಿ ರೈತ ಸಂಘ ಹೋರಾಟಕ್ಕಿಳಿಯಲಿದೆ ಎಂದು ರೈತ ಮುಖಂಡರಾದ ಈಚಘಟ್ಟ ಸಿದ್ಧವೀರಪ್ಪ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ರೈತಾಪಿ ವರ್ಗ ಸೇರಿದಂತೆ ಅನೇಕ ಬಡ ಜನರು ಸರ್ಕಾರದ ಈ ಧೋರಣೆಯಿಂದ ಕಂಗಾಲಾಗಿದ್ದಾರೆ. ಉಳ್ಳವರು ಬಿಪಿಎಲ್ ಕಾರ್ಡ್ ಪಡೆದು ವಂಚಿಸುತ್ತಿದ್ದಾರೆ. ಅಂತವರಿಗೆ ಸರ್ಕಾರಿ ಸೌಲಭ್ಯ ಸ್ಥಗಿತಗೊಳಿಸಲಿ. ಆದರೆ, ಕೆಲ ಮಾನದಂಡಗಳ ಪ್ರಕಾರ ಬಡ ಜನರಿಗೂ ಬಿಪಿಎಲ್ ಕಾರ್ಡ್ ರದ್ದಾಗಿ ತೊಂದರೆ ಎದುರಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಈ ಬಗ್ಗೆ ಚಿತ್ರದುರ್ಗದ ಹಿರಿಯ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ನನ್ನ ಬಳಿಯೂ ಕೆಲ ಜನರು ಇದೇ ದೂರು ನೀಡಿದ್ದಾರೆ. ಈ ಬಗ್ಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮಕ್ಕೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯೊಂದರಲ್ಲೇ ಸುಮಾರು 18000 ಕಾರ್ಡ್​ಗಳು ರದ್ದಾಗಿವೆ. ಆದರೆ ಆಧಾರ್ ಕಾರ್ಡ್ ಆಧರಿಸಿ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ವೇಳೆ ಕೆಲ ತಪ್ಪುಗಳು ಆಗಿದ್ದು, ಬಡ ಜನರಿಗೆ ತೊಂದರೆ ಆಗಿದೆ. ಹೀಗಾಗಿ, ಈ ಬಗ್ಗೆ ಮರುಪರಿಶೀಲಿಸಿ ಬಡಜನರು ಮತ್ತು ರೈತರಿಗೆ ಬಿಪಿಎಲ್ ಕಾರ್ಡ್ ಯಥಾಸ್ಥಿತಿ ಮುಂದುವರೆಸಬೇಕೆಂಬ ಆಗ್ರಹ ಕೇಳಿ ಬಂದಿದೆ. ಜಿಲ್ಲಾಡಳಿತ ಮತ್ತು ಸರ್ಕಾರ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುವುದನ್ನು ಕಾದು ನೋಡಬೇಕಿದೆ.

ವರದಿ: ಬಸವರಾಜ ಮುದನೂರ್

ಇದನ್ನೂ ಓದಿ: Big News: ಬೈಕ್, ಟಿವಿ, ಫ್ರಿಡ್ಜ್ ಇದ್ದವರ BPL ಕಾರ್ಡ್​ ರದ್ದು ಮಾಡಲ್ಲ: ಸ್ಪಷ್ಟನೆ ನೀಡಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತೆ

BPL Card Guidelines | ಬಿಪಿಎಲ್​ ಕಾರ್ಡ್​ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ: ಆಹಾರ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ