AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ವಿರಕ್ತ ಮಠದಲ್ಲಿ 20ಲಕ್ಷ ರೂ. ಅವ್ಯವಹಾರ ಆಗಿದೆ: ಹೆಚ್.ಏಕಾಂತಯ್ಯ ಗಂಭೀರ ಆರೋಪ

ದಾವಣಗೆರೆ ವಿರಕ್ತಮಠದಲ್ಲಿ 20ಲಕ್ಷ ರೂ. ಅವ್ಯವಹಾರ ಆಗಿದೆ ಎಂದು ಮಾಜಿ ಸಚಿವ ಹೆಚ್.ಏಕಾಂತಯ್ಯ ಗಂಭೀರ ಆರೋಪ ಮಾಡಿದ್ದಾರೆ.

ದಾವಣಗೆರೆ ವಿರಕ್ತ ಮಠದಲ್ಲಿ 20ಲಕ್ಷ ರೂ. ಅವ್ಯವಹಾರ ಆಗಿದೆ:  ಹೆಚ್.ಏಕಾಂತಯ್ಯ ಗಂಭೀರ ಆರೋಪ
ಮಾಜಿ ಸಚಿವ ಹೆಚ್.ಏಕಾಂತಯ್ಯ
TV9 Web
| Updated By: ವಿವೇಕ ಬಿರಾದಾರ|

Updated on:Dec 14, 2022 | 6:41 PM

Share

ಚಿತ್ರದುರ್ಗ: ದಾವಣಗೆರೆ (Davangere) ವಿರಕ್ತ ಮಠದಲ್ಲಿ (Viraktamath) 20ಲಕ್ಷ ರೂ. ಅವ್ಯವಹಾರ ಆಗಿದೆ ಎಂದು ಮಾಜಿ ಸಚಿವ ಹೆಚ್.ಏಕಾಂತಯ್ಯ (H. Ekanthaiah) ಗಂಭೀರ ಆರೋಪ ಮಾಡಿದ್ದಾರೆ. ಹಾಗೇ ಚಿತ್ರದುರ್ಗ ಮಠದಲ್ಲಿ ಕಳೆದ 3 ತಿಂಗಳಿಂದ ಅರಾಜಕತೆ ಸೃಷ್ಟಿಯಾಗಿದೆ. ಹಣದ ಅವ್ಯವಹಾರದ ಆರೋಪಗಳಿವೆ ಈ ಬಗ್ಗೆ ತನಿಖೆ ನಡೆಸಬೇಕು ಚಿತ್ರದುರ್ಗ ಮುರುಘಾಮಠದ ಉಸ್ತುವಾರಿ ಬಸವಪ್ರಭುಶ್ರೀ ವಿರುದ್ಧ ಆರೋಪ ಮಾಡಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಯವರೊಂದಿಗೆ ಮಾತನಾಡಿದ ಅವರು ಅಕ್ರಮದ ವಿರುದ್ಧ ಮುಲಾಜಿಲ್ಲದೆ ಸರ್ಕಾರ ಕ್ರಮಕೈಗೊಂಡಿದೆ. ಮಠ ಮಾನ್ಯಗಳು, ದೊಡ್ಡ ವ್ಯಕ್ತಿಗಳೆಂದು ನೋಡದೆ ಕ್ರಮದ ಭರವಸೆ ನೀಡಿದೆ. ಒತ್ತಡ, ಪ್ರಭಾವಕ್ಕೆ ಸರ್ಕಾರ ಮಣಿಯದೆ ಸೂಕ್ತ ತೀರ್ಮಾನ ಕೈಗೊಂಡಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಮುರುಘಾಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ IAS ಅಧಿಕಾರಿ ವಸ್ತ್ರದ್ ನೇಮಕ

ಸರ್ಕಾರ ಎಲ್ಲವನ್ನೂ ಪರಿಶೀಲಿಸಿ ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದೆ

ಸರ್ಕಾರ ಎಲ್ಲವನ್ನೂ ಪರಿಶೀಲಿಸಿ ಚಿತ್ರದುರ್ಗ ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದೆ. ಸಾರ್ವಜನಿಕ ಹಿತಾಸಕ್ತಿಯಿಂದ ಆಡಳಿತಾಧಿಕಾರಿ ನೇಮಿಸಲು ಕೇಳಿದ್ದೆವು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರಿಶೀಲಿಸಿ ಆಡಳಿತಾಧಿಕಾರಿ ನೇಮಿಸಿದ್ದಾರೆ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಜಿಲ್ಲಾಧಿಕಾರಿಯಾಗಿದ್ದಾ ಭ್ರಷ್ಟಾಚಾರದ ಆರೋಪ ವಿಚಾರವಾಗಿ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ಬೇಡ ಅನ್ನಲ್ಲ. ಆ ರೀತಿ ಆರೋಪಗಳಿದ್ದರೆ ಸಿಎಂ ಪರಿಗಣನೆಗೆ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಆದೇಶವನ್ನು ಸರ್ಕಾರ ಹಿಂಪಡೆಯಬೇಕು: ಬಸವಪ್ರಭು ಸ್ವಾಮೀಜಿ

3 ತಿಂಗಳಿಂದ ಮಠದ ಆಡಳಿತದಲ್ಲಿ ಪಾರದರ್ಶಕತೆ ಇರಲಿಲ್ಲ. ತಾತ್ಕಾಲಿಕ ವ್ಯಕ್ತಿಗಳಿಂದ ಆಡಳಿತ ನಡೆಯುತ್ತಿದೆ. ಮಠದ ಅಧೀನದಲ್ಲಿ ನೂರಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳಿವೆ. 20ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಭ್ಯಾಸ ಮಾಡುತ್ತಿದ್ದಾರೆ. 2ಸಾವಿರಕ್ಕೂ ಹೆಚ್ಚು ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ವರ್ಷಕ್ಕೆ ನೂರಾರು ಕೋಟಿ ವ್ಯವಹಾರ ನಡೆಯುತ್ತಿದೆ. ಸರ್ಕಾರ ಆಡಳಿತಾಧಿಕಾರಿ ನೇಮಿಸಿದ್ದು ಉತ್ತಮ ಬೆಳವಣಿಗೆ. ಪಾರದರ್ಶಕ ಆಡಳಿತ, ಲೆಕ್ಕ ಪತ್ರ ಸರಿಯಾಗಿರಲಿದೆ. ಪಾರದರ್ಶಕ ಆಡಳಿತ, ಲೆಕ್ಕ ಪತ್ರ ಸರಿಯಾಗಿರಲಿದೆ. ಎಲ್ಲರೂ ಸೇರಿ ಮಠದ ಗೌರವ, ಘನತೆ ಸರಿಪಡಿಸುವ ಕೆಲಸ ಮಾಡಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:28 pm, Wed, 14 December 22