AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹ: ಸಿಎಂ ಎದುರು ಪ್ರತಿಭಟನೆಗೆ ಮುಂದಾದ ನಾಲ್ವರ ಬಂಧನ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಎದುರು ಪ್ರತಿಭಟನೆಗೆ ಮುಂದಾದ ಪಂಚಮಸಾಲಿ ಸಮಾಜದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹ: ಸಿಎಂ ಎದುರು ಪ್ರತಿಭಟನೆಗೆ ಮುಂದಾದ ನಾಲ್ವರ ಬಂಧನ
ಸಿಎಂ ಬೊಮ್ಮಾಯಿImage Credit source: cnbctv18.com
ಗಂಗಾಧರ​ ಬ. ಸಾಬೋಜಿ
|

Updated on: Mar 04, 2023 | 2:54 PM

Share

ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ (Panchamasali community) 2ಎ ಮೀಸಲಾತಿಗೆ ಆಗ್ರಹ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಎದುರು ಪ್ರತಿಭಟನೆಗೆ ಮುಂದಾದ ಪಂಚಮಸಾಲಿ ಸಮಾಜದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ಮುರುಘಾಮಠದ ಹೆಲಿಪ್ಯಾಡ್​​ ಬಳಿ ಸಿಎಂ‌ ಬೊಮ್ಮಾಯಿ ಆಗಮನ ವೇಳೆ ಪ್ರತಿಭಟನೆಗೆ ಮುಂದಾದ ಹಿನ್ನೆಲೆ ಬಂಧಿಸಲಾಗಿದೆ. ಇನ್ನು ಇದೇ ಮಾ.4ರಂದು ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡುವಂತೆ ಬಸವ ಜಯಮೃತ್ಯುಂಜಯಶ್ರೀ (Basava Jaya Mrityunjaya swamiji) ಕರೆ ಕೊಟ್ಟಿದ್ದಾರೆ.

2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಧರಣಿ ಮುಂದುವರೆದಿದೆ. ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಬಸವ ಜಯಮೃತ್ಯುಂಜಯಶ್ರೀ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಆದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಆಕ್ರೋಶಗೊಂಡ ಜಯಮೃತ್ಯುಂಜಯಶ್ರೀ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: Jaya Mruthyunjaya Swami: ಪಂಚಮಸಾಲಿ ಸಮುದಾಯದ ಹೋರಾಟ ಶಿಗ್ಗಾಂವಿ ಸಿಎಂ ಮನೆಯಿಂದ ಬೆಂಗಳೂರಿಗೆ ಶಿಫ್ಟ್

ಈ ಹಿಂದೆ ಶಿಗ್ಗಾಂವಿಯಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಹೋರಾಟ ಈಗ ಬೆಂಗಳೂರಿಗೆ ಶಿಫ್ಟ್‌ ಆಗಿದ್ದು, ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ನಡೆಯುತ್ತಿರುವ ಧರಣಿ 48ನೇ ದಿನಕ್ಕೆ ಕಾಲಿಟ್ಟಿದೆ. ಇದೀಗ ಮತ್ತೊಂದು ಹಂತದ ಹೋರಾಟಕ್ಕೆ ಕರೆ ಕೊಟ್ಟಿದ್ದಾರೆ.

ಕಳೆದ ಎರಡು ವರ್ಷಗಳಿಂದ ಹೋರಾಟ

ರಾಜ್ಯದಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಕಳೆದ ಎರಡು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಈ ಸರ್ಕಾರದ ಅವಧಿಯಲ್ಲಿಯೇ ಮೀಸಲಾತಿ ಒಡೆಯುವ ನಿಟ್ಟಿನಲ್ಲಿ ದೊಡ್ಡ ಮಟ್ಟದ ಹೋರಾಟ ಆರಂಭಿಸಲಾಗಿತ್ತು. ಇದಕ್ಕೆ ಮಣಿದಿದ್ದ ಸರ್ಕಾರ ಬೆಳಗಾವಿ ಅಧಿವೇಶನದ ಕೊನೆಯ ದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಲಿಂಗಾಯತ, ಒಕ್ಕಲಿಗ ಮತ್ತು ಪಂಚಮಸಾಲಿ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗವನ್ನು ಸೃಷ್ಟಿಸಿ ಮೀಸಲಾತಿ ನೀಡಲು ಮುಂದಾಗಿತ್ತು. ಆದರೆ, ಈ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ.

ಇದನ್ನೂ ಓದಿ: ಪಂಚಮಸಾಲಿಗೆ 2ಎ ಮೀಸಲಾತಿ: ಮಾ.4ರಂದು ಬೆಂಗಳೂರು ವ್ಯಾಪ್ತಿಯ ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆಗೆ ಸ್ವಾಮೀಜಿ ಕರೆ

ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಹಲವಾರು ಗೊಂದಲ: ವಚನಾನಂದ ಸ್ವಾಮೀಜಿ 

2ಎ ಮೀಸಲಾತಿಗೆ ವಿಚಾರವಾಗಿ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿ ಬಳಿಯ ಮಠದಲ್ಲಿ ಮಾತನಾಡಿದ ಪಂಚಮಸಾಲಿ ಗುರುಪೀಠದಲ್ಲಿ ವಚನಾನಂದ ಸ್ವಾಮೀಜಿ, ಪಂಚಮಸಾಲಿ‌ ಮೀಸಲಾತಿ ವಿಚಾರ‌ ಹೀಗೆ ಆಗುತ್ತೆ ಎಂದು ಗೊತ್ತಿತ್ತು. ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಹಲವಾರು ಗೊಂದಲಗಳಿವೆ. ಈಗಾಗಲೇ ಕೇಂದ್ರ ಓಬಿಸಿ ಪಟ್ಟಿಗೆ ಸೇರ್ಪಡೆ ಬಗ್ಗೆ ದಾಖಲೆ ನೀಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಗಮನಕ್ಕೂ ತರಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ