AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದ ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣ: ಇಬ್ಬರ ಬಂಧನ

ಮುರುಘಾಮಠದಲ್ಲಿ 47 ಫೋಟೋಸ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ಬಂಧಿಸಿದ್ದಾರೆ.

ಚಿತ್ರದುರ್ಗದ ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣ: ಇಬ್ಬರ ಬಂಧನ
ಬಂಧಿತರು
TV9 Web
| Edited By: |

Updated on:Nov 07, 2022 | 8:08 PM

Share

ಚಿತ್ರದುರ್ಗ: ಮುರುಘಾಮಠದಲ್ಲಿ (Muruga Mutt) 47 ಫೋಟೋಸ್ (photos) ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ಬಂಧಿಸಲಾಗಿದೆ. ಹೊಸಹಳ್ಳಿ ಗ್ರಾ.ಪಂ ಸದಸ್ಯ ಮೋಹನಮೂರ್ತಿ ಅಲಿಯಾಸ್ ಸ್ವಾಮಿ, ಎಸ್​.ಜೆ.ಎಂ ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕ ಶಿವಾನಂದ ಸ್ವಾಮಿ ಬಂಧಿತರು. ಮಠದ ಸಿಸಿ ಕ್ಯಾಮರಾದಲ್ಲಿ ಕಳ್ಳತನ ದೃಶ್ಯ ಸೆರೆಯಾಗಿದೆ. ಚಿತ್ರದುರ್ಗ ನ್ಯಾಯಾಲಯಕ್ಕೆ ಆರೋಪಿಗಳನ್ನು ಪೊಲೀಸರು ಹಾಜರು ಪಡಿಸಿದ್ದಾರೆ. ಎ1 ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ 2ದಿನ ಪೊಲೀಸ್ ಕಸ್ಟಡಿಯಲ್ಲಿದ್ದು, ಎ2 ಶಿವಾನಂದಸ್ವಾಮಿ 14ದಿನ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸದ್ಯ ಅಪಘಾತಕ್ಕೀಡಾಗಿ ಶಿವಾನಂದಸ್ವಾಮಿ ಕಾಲು ಮುರಿದುಕೊಂಡಿದ್ದಾರೆ. ವಿವಿಧ ಗಣ್ಯರ ಜತೆ ಮುರುಘಾಶ್ರೀ ಇರುವ ಚಿತ್ರಗಳು ಅಕ್ಟೋಬರ್ 6ರಂದು ಕಳ್ಳತನವಾಗಿದ್ದವು.

ಶಿವಮೂರ್ತಿ ಮುರುಘಾ ಶರಣನ ವಿರುದ್ಧ ಮಾದಕ ವಸ್ತು ಬಳಕೆ, ಮಾನವ ಸಾಗಣೆ, ಅತ್ಯಾಚಾರ, ಕೊಲೆ ಆರೋಪ

ಮೈಸೂರು: ‘ಚಿತ್ರದುರ್ಗದ ಮುರುಘಾ ಮಠದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದದ್ದು ಅಷ್ಟೇ ಅಲ್ಲ, ಇತರ ಹಲವು ಅಪರಾಧ ಕೃತ್ಯಗಳು ನಡೆದಿವೆ. ವಿಸ್ತೃತ ತನಿಖೆ ನಡೆದರೆ ನಿಜ ಸಂಗತಿ ಬಹಿರಂಗವಾಗಲಿದೆ’ ಎಂದು ಒಡನಾಡಿ ಸಂಸ್ಥೆಯ ಸಂಸ್ಥಾಪಕ ಸ್ಟ್ಯಾನ್ಲಿ ಅವರು ಹೇಳಿದರು. ಮಕ್ಕಳನ್ನು ಅಕ್ರಮವಾಗಿ ದತ್ತು ನೀಡುವುದು, ಮಾನವ ಸಾಗಣೆ, ಅತ್ಯಾಚಾರ, ಕೊಲೆಯಂತಹ ಆರೋಪಗಳು ಕೇಳಿಬಂದಿವೆ. ಶಿವಮೂರ್ತಿ ಮುರುಘಾ ಶರಣ ಸಹ ಡ್ರಗ್ಸ್ ತೆಗೆದುಕೊಂಡಿರುವ ಅನುಮಾನ ಇದೆ ಎಂದು ಅವರು ತಿಳಿಸಿದರು.

ಮಠದಲ್ಲಿದ್ದ ಮಗುವಿನ ಮೇಲೆ ಅತ್ಯಾಚಾರ ನಡೆದು ನಂತರ ಕೊಲೆಯಾಗಿದೆ. ಆ ಮಗುವಿನ ಶವ ರೈಲ್ವೆ ಹಳಿಗಳ ಮೇಲೆ ಸಿಕ್ಕಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸರು ಏನು ಕ್ರಮ ತೆಗೆದುಕೊಂಡಿದ್ದಾರೆ ಎಂದು ಪ್ರಶ್ನಿಸಿದರು. ಮಠದ ಆವರಣದಲ್ಲಿ ಕಾಂಡೋಮ್ ಮತ್ತು ಸಿರಂಜ್​ಗಳು ಸಿಕ್ಕಿವೆ. ಈ ಬಗ್ಗೆಯೂ ತನಿಖೆ ನಡೆಯಬೇಕಿದೆ. ಮಾನವ ಸಾಗಣೆ, ಮಾದಕ ದ್ರವ್ಯ ಬಳಕೆಯ ಕಲಂಗಳನ್ನೂ ಲಗತ್ತಿಸಿ ಪ್ರಕರಣ ಮುನ್ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಸಾಮಾನ್ಯ ಪುರುಷನೊಬ್ಬ ಇಷ್ಟು ಕ್ರೂರವಾಗಿ, ಕೆಟ್ಟದಾಗಿ ವರ್ತಿಸಲು ಸಾಧ್ಯವಿಲ್ಲ. ವಿಕೃತಕಾಮಿಗಳನ್ನೂ ಮೀರಿಸುವ ರೀತಿಯಲ್ಲಿ ಶಿವಮೂರ್ತಿ ಮುರುಘಾ ವರ್ತನೆ ಇದೆ. ಆತ ಶಕ್ತಿವರ್ಧಕ ಅಥವಾ ಬೇರೆ ಯಾವುದಾದರೂ ಡ್ರಗ್ಸ್ ತೆಗೆದುಕೊಂಡಿರುವ ಬಗ್ಗೆಯೂ ನಮಗೆ ಅನುಮಾನಗಳಿವೆ ಎಂದರು. ಮಠದಲ್ಲಿರುವ ಪಿಟ್ ಬಗ್ಗೆಯೂ ಪರಿಶೀಲನೆ ಆಗಬೇಕಿದೆ. 15 ವರ್ಷಗಳ ಹಿಂದೆ ಪಿಟ್ ಅನ್ನು ಸ್ವಾಮೀಜಿ ಸ್ವತಃ ಸ್ವಚ್ಛಗೊಳಿಸಿದ್ದರು. ಈ ಸಂದರ್ಭದಲ್ಲಿ ಕಾಂಡೋಮ್, ಸಿರಿಂಜ್ ಸೇರಿ ಹಲವು ವಸ್ತುಗಳು ಸಿಕ್ಕಿದ್ದವು. ಇವು ಮಠದ ಅತಿಥಿಗಳ ಕೃತ್ಯ ಎಂದು ಆ ಸಂದರ್ಭದಲ್ಲಿ ಸ್ವಾಮೀಜಿ ಹೇಳಿದ್ದರಂತೆ. ಈಗಲೂ ಆ ಪಿಟ್ ಮಠದಲ್ಲಿಯೇ ಇದೆ. ಅದನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:50 pm, Mon, 7 November 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ