ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬರ ಪಟ್ಟಿಗೆ ಕರ್ನಾಟಕದ 62 ತಾಲೂಕುಗಳು ಸೇರ್ಪಡೆ: ಕೃಷ್ಣಭೈರೇಗೌಡ

ಸರಿಯಾಗಿ ಮಳೆ-ಬೆಳೆ ಇಲ್ಲದೇ ಕರ್ನಾಟಕದಲ್ಲಿ ಬರದ ಛಾಯೇ ಆವರಿಸಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಇತ್ತ ರಾಜ್ಯ ಸರ್ಕಾರವೂ ಸಹ ಬರ ತಾಲೂಕುಗಳನ್ನು ಆಯ್ಕೆ ಮಾಡಿ ಪರಿಹಾರ ಒದಗಿಸಲು ತೀರ್ಮಾನಿಸಿದೆ. ಅದರಂತೆ ಇದೀಗ ಮೊದಲ ಹಂತ ಪಟ್ಟಿಯಲ್ಲಿ 62 ತಾಲೂಕುಗಳನ್ನು ಬರ ಪೀಡತವೆಂದು ಸೇರಿಸಿಲಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದು, ಅದು ಈ ಕೆಳಗಿನಂತಿದೆ ನೊಡಿ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬರ ಪಟ್ಟಿಗೆ ಕರ್ನಾಟಕದ  62 ತಾಲೂಕುಗಳು ಸೇರ್ಪಡೆ: ಕೃಷ್ಣಭೈರೇಗೌಡ
ಸಚಿವ ಕೃಷ್ಣ ಭೈರೇಗೌಡ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ರಮೇಶ್ ಬಿ. ಜವಳಗೇರಾ

Updated on:Sep 06, 2023 | 3:14 PM

ಚಿತ್ರದುರ್ಗ, (ಸೆಪ್ಟೆಂಬರ್ 06): ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ(Rain) ಕೈಕೊಟ್ಟಿದ್ದರಿಂದ ಬೆಳೆ ಇಲ್ಲದೇ ರೈತರು(Farmers) ಕಂಗಾಲಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಬರ (drought) ಕಾಡುತ್ತಿದ್ದು, ಹಲವು ತಾಲೂಕುಗಳನ್ನು ಬರಪೀಡಿತ(drought hit taluks) ಎಂದು ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇನ್ನು ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ(Krishna Byre Gowda) ಇಂದು (ಸೆಪ್ಟೆಂಬರ್ 06) ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ್ದು, ಆಗಸ್ಟ್ 18ಕ್ಕೆ ಮಳೆ ಕೊರೆತೆ ಇರುವ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಿದ್ದೇವೆ. ಒಂದು ಸುತ್ತಿನ ಬೆಳೆ ಸಮೀಕ್ಷೆ ಪ್ರಕಾರ 62 ತಾಲೂಕು ಬರ ಪಟ್ಟಿಗೆ ಸೇರಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯಂತೆ ಬರ ಪಟ್ಟಿಗೆ ಆಯ್ಕೆಯಾಗಿದೆ ಎಂದು ಮಾಹಿತಿ ನೀಡಿದರು.

ಇನ್ನೊಂದು ಸುತ್ತು ಬೆಳೆ ಸಮೀಕ್ಷೆ ಮಾಡಬೇಕು ಎಂದಾಗ ಉಳಿದ 51 ತಾಲೂಕು ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಸೆಪ್ಟೆಂಬರ್ 2ಕ್ಕೆ 83 ತಾಲ್ಲೂಕು ಬರ ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇವೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಸಮೀಕ್ಷೆ ವರದಿ ಬರುತ್ತದೆ. ಕೇಂದ್ರದ ಮಾರ್ಗಸೂಚಿ ಪ್ರಕಾರ ಬರ ಘೋಷಣೆ ಮಾಡುತ್ತೇವೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ಕೂಡಾ ನಾವು ನೀಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಬರ ಸಂಕಷ್ಟ; 114 ತಾಲ್ಲೂಕುಗಳ ಬಿಪಿಎಲ್ ಕುಟುಂಬಗಳಿಗೆ ಅಕ್ಟೋಬರ್​ನಿಂದ ಹಣದ ಬದಲು ಹತ್ತತ್ತು ಕೇಜಿ ಅಕ್ಕಿ: ಕೆ ಹೆಚ್ ಮುನಿಯಪ್ಪ

ಎಲ್ಲಿ ಬರ ಇದೆ ಅಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚನೆ ಮಾಡುತ್ತೇವೆ. ಮೇವಿನ ಕೊರತೆ ಆಗಬಾರದು ಎಂದು ರೈತರಿಗೆ 20 ಕೋಟಿ ರೂ. ವೆಚ್ಚದಲ್ಲಿ ಉಚಿತ ಮೇವಿನ ಬೀಜ ನೀಡುತ್ತೇವೆ. ಬರ ಪ್ರದೇಶದಲ್ಲಿ ನರೇಗಾದಲ್ಲಿ 150 ಉದ್ಯೋಗ ಖಾತ್ರಿ ಕೆಲಸ ನೀಡಲು ಚಿಂತನೆ ಮಾಡಿದ್ದೇವೆ. ಜಿಲ್ಲಾಧಿಕಾರಿ ಖಾತೆಯಲ್ಲಿ 529 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ ಎಂದರು.

ಕೇಂದ್ರ ಸರ್ಕಾರದ ಮಾರ್ಗಸೂಚಿ ಬದಲಾವಣೆಗೆ ಮನವಿ ಮಾಡುತ್ತೇವೆ. ಜನರ ನಿರೀಕ್ಷೆಯಂತೆ ಬರ ಘೋಷಣೆ ಮಾಡಲು ಆಗಲ್ಲ. ನಮ್ಮ ಸರ್ಕಾರ ಬಂದ ಬಳಿಕ ಪತ್ರ ಬರೆದಿದ್ದೇವೆ. ಇನ್ನೊಂದು ಬಾರಿ ಮಾನದಂಡ ಬದಲಾವಣೆ ಮಾಡಿ ಎಂದು ಮನವಿ ಮಾಡುತ್ತೇವೆ. ಜನರಿಗೆ ನ್ಯಾಯ ಕೊಡಲು ಕೇಂದ್ರ ಸರ್ಕಾರದ ಮಾನದಂಡ ಕೈ ಕಟ್ಟಿ ಹಾಕಿದಂತಾಗಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ಅಸಮಾಧಾನ ಹೊರಹಾಕಿದರು.

ನಿಮ್ಮ ಜಿಲ್ಲೆಗಳ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:07 pm, Wed, 6 September 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ