ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್! ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

17 ವರ್ಷದ ಬಾಲಕಿ ಮೇಲೆ ನಾಲ್ವರು ಅತ್ಯಾಚಾರ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಒಂದು ವರ್ಷದ ಹಿಂದೆ ವ್ಯಕ್ತಿಯೊಬ್ಬ ಬಾಲಕಿಗೆ ಬೆದರಿಸಿ ಆಕೆಯ ಜತೆ ಮದುವೆಯಾಗಿದ್ದ.

ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್! ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಸಾಂದರ್ಭಿಕ ಚಿತ್ರ
Edited By: sandhya thejappa

Updated on: Jun 26, 2022 | 8:37 AM

ಚಿತ್ರದುರ್ಗ: ಅಪ್ರಾಪ್ತ ಬಾಲಕಿ (Minor Girl) ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು (Complaint) ದಾಖಲಾಗಿದೆ. 17 ವರ್ಷದ ಬಾಲಕಿ ಮೇಲೆ ನಾಲ್ವರು ಅತ್ಯಾಚಾರ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಒಂದು ವರ್ಷದ ಹಿಂದೆ ವ್ಯಕ್ತಿಯೊಬ್ಬ ಬಾಲಕಿಗೆ ಬೆದರಿಸಿ ಆಕೆಯ ಜತೆ ಮದುವೆಯಾಗಿದ್ದ. ಮದುವೆ ಬಳಿಕ ಹೆಂಡತಿ ಶೀಲ ಶಂಕಿಸಿ ವ್ಯಕ್ತಿ ಗಲಾಟೆ ಮಾಡುತ್ತಿದ್ದನಂತೆ. ಜೂನ್ 7ರಂದು ನಗರದ ಹೊರವಲಯಕ್ಕೆ ಕರೆದೊಯ್ದು ಮೂವರು ಸ್ನೇಹಿತರ ಜತೆಗೂಡಿ ಹಲ್ಲೆ ನಡೆಸಿ, ಗ್ಯಾಂಗ್ ರೇಪ್ ಮಾಡಿದ್ದಾರೆಂದು ಆರೋಪ ಬಾಲಕಿ ಆರೋಪಿಸಿದ್ದಾಳೆ.

ಮಹಿಳೆಯ ಮೇಲೆ ಅತ್ಯಾಚಾರ!
ದಾವಣಗೆರೆ: ಕುಡಿದ ಅಮಲಿನಲ್ಲಿ ಒಂಟಿ ಮಹಿಳೆ ಇರುವ ಮನೆಗೆ ನುಗ್ಗಿ‌ ಅತ್ಯಾಚಾರ ಎಸಗಿ‌ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ತಿಂಗಳು 24 ರಂದು ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿತ್ತು. ಘಟನೆಯಲ್ಲಿ 40 ವರ್ಷದ ಮಹಿಳೆ ಗೀತಮ್ಮ ಸಾವನ್ನಪ್ಪಿದ್ದರು. ಆರೋಪಿ ಹರೀಶ್​ನ​ ಹೊನ್ನಾಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೃತ್ಯ ಎಸಗಿದ್ದ ಆರೋಪಿ ತಲೆ ಮರೆಸಿಕೊಂಡಿದ್ದ. ಗ್ರಾಮದ ಮನೆಯೊಂದರಲ್ಲಿ ಬಚ್ಚಿಟ್ಟುಕೊಂಡಿದ್ದ ಎಂದು ತಿಳಿದುಬಂದಿದೆ.

Loading...

ಇದನ್ನೂ ಓದಿ: Traffic Jam: ಗುಂಡಿ ಮುಚ್ಚಿ, ಸಿಗ್ನಲ್ ಸರಿಪಡಿಸಿ; ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ಪರಿಹಾರಕ್ಕೆ ಸಿಎಂ ತಾಕೀತು

ಬೈಕ್​ ಕಳ್ಳತನ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್!
ಬೆಂಗಳೂರು ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನ ಬ್ಯಾಡರಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ದರ್ಶನ್, ಕೀರ್ತಿ, ಸಂಜಯ್ ಬಂಧಿತ ಆರೋಪಿಗಳು. ಬಂಧಿತರಿಂದ 4 ಲಕ್ಷ ರೂ. ಮೌಲ್ಯದ ದ್ವಿಚಕ್ರ ವಾಹನಗಳನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳು ರಾಜಗೋಪಾಲನಗರ, ಕೆಂಗೇರಿ, ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದರು. ಸದ್ಯ ಆರೋಪಿಗಳನ್ನ ಬಂಧಿಸಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Virat Kohli: ಕಿಂಗ್ ಕೊಹ್ಲಿ, ಅಯ್ಯರ್, ಜಡೇಜಾ ಅರ್ಧಶತಕ: ಅಭ್ಯಾಸ ಪಂದ್ಯದಲ್ಲಿ ಭಾರತ ಅಬ್ಬರ

Published On - 8:33 am, Sun, 26 June 22

TV9 Web

TV9 Kannada

Read More
Loading...
Unable to load recommendations.
Follow Us