Chitradurga News: 13 ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ; ಜಿಲ್ಲಾಸ್ಪತ್ರೆಗೆ ದಾಖಲು

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 16, 2023 | 9:00 AM

ಚಳ್ಳಕೆರೆ ತಾಲೂಕಿನ ತೊರೆಕೋಲಮ್ಮನಹಳ್ಳಿಯ ಮಂಜುಳಾ-ಸಿದ್ದೇಶ್ ದಂಪತಿಯ 13ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ ಮಾಡಿದೆ. ಈ ವೇಳೆ ಮಗುವಿನ ಹಣೆ, ತಲೆ ಭಾಗದಲ್ಲಿ ಗಾಯವಾಗಿದ್ದು, ಗಾಬರಿಗೊಂಡ ತಾಯಿ ಜೋರಾಗಿ ಕೂಗಿದಾಗ ಕೋತಿ ಓಡಿ ಹೋಗಿದೆ.

Chitradurga News: 13 ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ; ಜಿಲ್ಲಾಸ್ಪತ್ರೆಗೆ ದಾಖಲು
ದಾಳಿಗೊಳಗಾದ ಶಿಶು
Follow us on

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ(Challakere) ತಾಲೂಕಿನ ತೊರೆಕೋಲಮ್ಮನಹಳ್ಳಿಯ ಮಂಜುಳಾ-ಸಿದ್ದೇಶ್ ದಂಪತಿಯ 13ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ ಮಾಡಿದೆ. ಈ ವೇಳೆ ಮಗುವಿನ ಹಣೆ, ತಲೆ ಭಾಗದಲ್ಲಿ ಗಾಯವಾಗಿದ್ದು, ಗಾಬರಿಗೊಂಡ ತಾಯಿ ಜೋರಾಗಿ ಕೂಗಿದಾಗ ಕೋತಿ ಓಡಿ ಹೋಗಿದೆ. ಕೂಡಲೇ ಗಾಯಗೊಂಡ ಮಗುವನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಕಳೆದ ಒಂದು ವಾರದಿಂದ ಈ ಕೋತಿ ಗ್ರಾಮದಲ್ಲಿ ಕಾಣಿಸಿಕೊಂಡಿತ್ತು. ಇದೀಗ ಏಕಾಏಕಿ ಮನೆಗೆ ನುಗ್ಗಿ ಮಗುವಿನ ಮೇಲೆ ದಾಳಿ ಮಾಡಿದ್ದು, ಕೋತಿ ಸೆರೆಗೆ ತೊರೆಕೋಲಮ್ಮನಹಳ್ಳಿ ಗ್ರಾಮಸ್ಥರ ಆಗ್ರಹಿಸಿದ್ದಾರೆ.

ಬೇಕೆ ಬೇಕು, ನಮಗೆ ನಮ್ಮ ಟೀಚರ್ಸ್ ಬೇಕೆಂದು ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು

ತುಮಕೂರು: ಈಗಾಗಲೇ ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ಜೋರಾಗಿದೆ. ನಮ್ಮ ನೆಚ್ಚಿನ ಶಿಕ್ಷಕರನ್ನ ದಯವಿಟ್ಟು ವರ್ಗಾವಣೆ ಮಾಡಬೇಡಿ ಎಂದು ವಿದ್ಯಾರ್ಥಿಗಳು ಬೇಡಿಕೊಳ್ಳುತ್ತಿದ್ದಾರೆ. ಅದರಂತೆ ಜಿಲ್ಲೆಯ ಪಾವಗಡ ತಾಲ್ಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿಯೂ ಕೂಡ ವಿದ್ಯಾರ್ಥಿಗಳು ಕಂಬನಿ ಮಿಡಿದ ಘಟನೆ ನಡೆದಿದೆ. ಹೌದು ಪಾವಗಡದ ಚಿಕ್ಕನಾಯಕನಹಳ್ಳಿಯ ಸರ್ಕಾರಿ ಹಿರಿಯ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಮತ ಹಾಗೂ ಮಂಜುನಾಥ್ ಎಂಬ ಶಿಕ್ಷಕರನ್ನು ಬೇರೆ ಶಾಲೆಗೆ ವರ್ಗಾವಣೆಗೊಂಡ ಹಿನ್ನೆಲೆ ಪಾವಗಡದ ಬಿಇಒ ಕಚೇರಿ ಮುಂದೆ ನೆಚ್ಚಿನ ಶಿಕ್ಷಕರಿಗಾಗಿ ಮಕ್ಕಳು, ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೇರಿ ಪ್ರತಿಭಟನೆ ನಡೆಸಿ, ಕೂಡಲೇ ಇಬ್ಬರೂ ಶಿಕ್ಷಕರ ವರ್ಗವಣೆಯನ್ನು ರದ್ದು ಪಡಿಸುವಂತೆ ಬಿ.ಇ.ಒ.ಗೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ