ಸಾಹಿತಿ ಬಿ.ಎಲ್.ವೇಣುಗೆ ಸಹಿಷ್ಣು ಹಿಂದೂ ಹೆಸರಿನಲ್ಲಿ ಎಚ್ಚರಿಕೆ ಪತ್ರ

ಸಾಹಿತಿ ಬಿ.ಎಲ್.ವೇಣುಗೆ ಸಹಿಷ್ಣು ಹಿಂದೂ ಹೆಸರಿನಲ್ಲಿ 2 ಪುಟಗಳ ಕೈಬರಹದ ಎಚ್ಚರಿಕೆ ಪತ್ರ ಬರೆಯಲಾಗಿದ್ದು, ನಗರದ ಕೆಳಗೋಟೆ ಬಡಾವಣೆಯ ಮನೆಗೆ ಪತ್ರ ಬಂದಿದೆ.

ಸಾಹಿತಿ ಬಿ.ಎಲ್.ವೇಣುಗೆ ಸಹಿಷ್ಣು ಹಿಂದೂ ಹೆಸರಿನಲ್ಲಿ ಎಚ್ಚರಿಕೆ ಪತ್ರ
ಸಾಹಿತಿ ಬಿ.ಎಲ್.ವೇಣು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jun 11, 2022 | 9:01 AM

ಚಿತ್ರದುರ್ಗ: ಸಾಹಿತಿ ಬಿ.ಎಲ್.ವೇಣುಗೆ ಸಹಿಷ್ಣು ಹಿಂದೂ ಹೆಸರಿನಲ್ಲಿ 2 ಪುಟಗಳ ಕೈಬರಹದ ಎಚ್ಚರಿಕೆ ಪತ್ರ ಬರೆಯಲಾಗಿದ್ದು, ನಗರದ ಕೆಳಗೋಟೆ ಬಡಾವಣೆಯ ಮನೆಗೆ ಪತ್ರ ಬಂದಿದೆ. ಎಸ್​ಡಿಪಿಐ, ಪಿಎಫ್​ಐ, ಸಿಎಫ್​ಐ ಜತೆ ಸೇರಿಕೊಂಡಿದ್ದೀರಿ. ದೇಶದ್ರೋಹಿಗಳ ಗುಂಪನ್ನು ಬೆಂಬಲಿಸುತ್ತಿದ್ದೀರಿ ಎಂದು ಎಚ್ಚರಿಕೆ ನೀಡಲಾಗಿದೆ. ಸಿದ್ದರಾಮಯ್ಯ, ಹೆಚ್.​ಡಿ. ಕುಮಾರಸ್ವಾಮಿ ನೆರವಾಗುತ್ತಿದ್ದೀರಿ ಎಂದು ಉಲ್ಲೇಖ ಮಾಡಲಾಗಿದೆ. ಸಾವರ್ಕರ್ ಬಗ್ಗೆ ಹಗುರವಾಗಿ ಮಾತಾಡಿದ್ದಕ್ಕೆ ಕ್ಷಮೆ ಕೇಳಬೇಕು. ಪಠ್ಯ ಪರಿಷ್ಕರಣೆ ಬಗ್ಗೆ ಸಾಹಿತಿ ಬಿ.ಎಲ್.ವೇಣು ಟೀಕೆಗೆ ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಮಕ್ಕಳ ಮನಸ್ಸಲ್ಲಿ ವಿಷಬೀಜ ಬಿತ್ತಬೇಡಿ ಎಂಬ ಹೇಳಿಕೆ‌ಗೆ ಕಿಡಿಕಾರಲಾಗಿದ್ದು, 61 ಜನ ದುಷ್ಟಕೂಟದ ಸಾಹಿತಿಗಳಿಗೆ ತಿಳಿ ಹೇಳಿ ಎಂದು ಸಲಹೆ ಕೂಡ ನೀಡಲಾಗಿದೆ. ಎರಡು ಪುಟಗಳ ಕೈಬರಹದ ಪತ್ರದಲ್ಲಿ ಯಾವುದೇ ವಿಳಾಸವಿಲ್ಲ. ಎಳೆ ಮಕ್ಕಳ ಮನಸಿನಲ್ಲಿ ವಿಷಬೀಜ ಬಿತ್ತಬೇಡಿ ಎಂಬ ಹೇಳಿಕೆ ನೀಡಿದ್ದೀರಿ. ಪಾಳೆಗಾರರ ಇತಿಹಾಸಕ್ಕೆ ಸಂಬಂಧಿಸಿದಂತೆ ಕಾದಂಬರಿ ರಚಿಸಿದ ನಿಮ್ಮ ಬಗ್ಗೆ ಅಪಾರ ಗೌರವವಿದೆ. ಆದರೆ, ನೀವು 61 ಸಾಹಿತಿಗಳ ದುಷ್ಟಕೂಟ ಸೇರಿಕೊಂಡಿದ್ದೀರಿ. ಎಡಪಂಥೀಯರು, ನಕ್ಸಲ್‌ವಾದಿಗಳು, ಭಯೋತ್ಪಾದಕರ ಜೊತೆ ಸೇರಿ ಎಸ್‌ಡಿಪಿಐನಂತಹ ದೇಶದ್ರೋಹಿ ಗುಂಪು ಬೆಂಬಲಿಸುತ್ತಿದ್ದೀರಿ ಎಂದು ಪತ್ರದಲ್ಲಿ ಉಲ್ಲೇಖವಿದೆ.

ಇದನ್ನೂ ಓದಿ: Baramulla: ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ

ನೀವೊಬ್ಬ ಹಿಂದೂವಾಗಿ ಹಿಂದೂಗಳ ವಿರುದ್ಧ ಮಾತನಾಡುವುದನ್ನು ಬಿಡಿಬೇಕು. ದೇಶದ್ರೋಹಿಗಳಿಗೆ ಮೊದಲು ಬುದ್ದಿವಾದ ಹೇಳಿ, ರಾಜಕೀಯ ನಾಯಕರಿಗೆ, ಮುಸ್ಲಿಂ ಧರ್ಮದ ಗುರುಗಳಿಗೆ ನೀತಿಪಾಠ ಹೇಳಿ. ಸಾವರ್ಕರ್ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಪತ್ರದಲ್ಲಿ ಸೂಚನೆ ನೀಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?