ಚಿತ್ರದುರ್ಗ: ಸರ್ಕಾರಿ ಬಸ್​ ಮತ್ತು ಲಾರಿ ಮಧ್ಯೆ ಅಪಘಾತ: ಐವರ ಸಾವು

ಒಸರ್ಕಾರಿ ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ನಿಧರಾಗಿದ್ದಾರೆ.

ಚಿತ್ರದುರ್ಗ: ಸರ್ಕಾರಿ ಬಸ್​ ಮತ್ತು ಲಾರಿ ಮಧ್ಯೆ ಅಪಘಾತ: ಐವರ ಸಾವು
ಅಪಘಾತ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ವಿವೇಕ ಬಿರಾದಾರ

Updated on:Sep 11, 2023 | 8:17 AM

ಚಿತ್ರದುರ್ಗ: ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ಸರ್ಕಾರಿ ಬಸ್ (Government Bus) ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್​ (KKRTC) ರಾಯಚೂರಿನಿಂದ (Raichur) ಬೆಂಗಳೂರಿಗೆ (Bengaluru) ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ನಿಧರಾಗಿದ್ದಾರೆ. ಮತ್ತೊಬ್ಬರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವುಗೀಡಾಗಿದ್ದಾರೆ. ಐವರಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರಾಯಚೂರಿನ ಮಾಬಮ್ಮ(35), ಮಸ್ಕಿ ಮೂಲದ ರಮೇಶ್(40)‌, ಬೆಂಗಳೂರು ಮೂಲದ ಪಾರ್ವತಮ್ಮ(45) ಸೇರಿ ಐವರು ನಿಧನರಾಗಿದ್ದಾರೆ.  ಇನ್ನು ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಬೆಂಗಳೂರು: ಅಪಘಾತಕ್ಕೀಡಾದ ಆಟೋ ಚಾಲಕ ಚಿಕಿತ್ಸೆ ಪಡೆದು ಸ್ಥಳಕ್ಕೆ ಬರುವಷ್ಟರಲ್ಲಿ ಆಟೋ ಮಾಯ, ಸಹಾಯ ಪಡೆದವರೇ ಕದ್ದರು

 ಧಗ- ಧಗನೇ ಹೊತ್ತಿ ಉರಿದ ಖಾಸಗಿ ಬಸ್

ವಿಜಯನಗರ: ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಟೈರ್ ಬ್ಲಾಸ್ಟ್ ಆಗಿ ಖಾಸಗಿ ಬಸ್ ಹೊತ್ತಿ ಉರಿದಿದೆ. ಅದೃಷ್ಟವಷಾತ್ ಪ್ರಯಾಣಿಕರು ಪ್ರಾಣಾಪಯಾದಿಂದ ಪಾರಾಗಿದ್ದಾರೆ. ಇಂದು ಬೆಳಗಿನ ಜಾವ ಖಾಸಗಿ ಬಸ್ ಬೆಂಗಳೂರಿನಿಂದ ಹಟ್ಟಿ ಚಿನ್ನದಗಣಿಯ ಕಡೆ ಹೊರಟಿತ್ತು.  ಈ ವೇಳೆ ಟೈರ್ ಬ್ಲಾಸ್ಟ್ ಆಗಿ ಬೆಂಕಿ ಹೊತ್ತುಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿ ಇದ್ದ 30 ಜನ ಪ್ರಯಾಣಿಕರನ್ನು ಕೆಳಗಿ ಇಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅವಘಡ ಸಂಬವಿಸಿಲ್ಲ. ಕಾನಾಹೊಸಳ್ಳಿ ಪಿಎಸ್ಐ ಎರಿಯಪ್ಪ ನೇತೃತ್ವದಲ್ಲಿ ಎರಡು ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸಲಾಗಿದೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 am, Mon, 11 September 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ