ಚಿತ್ರದುರ್ಗ: ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ಸರ್ಕಾರಿ ಬಸ್ (Government Bus) ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ (KKRTC) ರಾಯಚೂರಿನಿಂದ (Raichur) ಬೆಂಗಳೂರಿಗೆ (Bengaluru) ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ನಿಧರಾಗಿದ್ದಾರೆ. ಮತ್ತೊಬ್ಬರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವುಗೀಡಾಗಿದ್ದಾರೆ. ಐವರಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ರಾಯಚೂರಿನ ಮಾಬಮ್ಮ(35), ಮಸ್ಕಿ ಮೂಲದ ರಮೇಶ್(40), ಬೆಂಗಳೂರು ಮೂಲದ ಪಾರ್ವತಮ್ಮ(45) ಸೇರಿ ಐವರು ನಿಧನರಾಗಿದ್ದಾರೆ. ಇನ್ನು ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಬೆಂಗಳೂರು: ಅಪಘಾತಕ್ಕೀಡಾದ ಆಟೋ ಚಾಲಕ ಚಿಕಿತ್ಸೆ ಪಡೆದು ಸ್ಥಳಕ್ಕೆ ಬರುವಷ್ಟರಲ್ಲಿ ಆಟೋ ಮಾಯ, ಸಹಾಯ ಪಡೆದವರೇ ಕದ್ದರು
ವಿಜಯನಗರ: ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಟೈರ್ ಬ್ಲಾಸ್ಟ್ ಆಗಿ ಖಾಸಗಿ ಬಸ್ ಹೊತ್ತಿ ಉರಿದಿದೆ. ಅದೃಷ್ಟವಷಾತ್ ಪ್ರಯಾಣಿಕರು ಪ್ರಾಣಾಪಯಾದಿಂದ ಪಾರಾಗಿದ್ದಾರೆ. ಇಂದು ಬೆಳಗಿನ ಜಾವ ಖಾಸಗಿ ಬಸ್ ಬೆಂಗಳೂರಿನಿಂದ ಹಟ್ಟಿ ಚಿನ್ನದಗಣಿಯ ಕಡೆ ಹೊರಟಿತ್ತು. ಈ ವೇಳೆ ಟೈರ್ ಬ್ಲಾಸ್ಟ್ ಆಗಿ ಬೆಂಕಿ ಹೊತ್ತುಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿ ಇದ್ದ 30 ಜನ ಪ್ರಯಾಣಿಕರನ್ನು ಕೆಳಗಿ ಇಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅವಘಡ ಸಂಬವಿಸಿಲ್ಲ. ಕಾನಾಹೊಸಳ್ಳಿ ಪಿಎಸ್ಐ ಎರಿಯಪ್ಪ ನೇತೃತ್ವದಲ್ಲಿ ಎರಡು ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸಲಾಗಿದೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:57 am, Mon, 11 September 23