AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಚಿಕ್ಕೆಬನ್ನೂರು ಬಳಿ ಭೀಕರ ಅಪಘಾತ, ನಾಲ್ವರ ಸಾವು

ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಬೆನ್ನೂರು ಬಳಿ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಲ್ಲಿದ್ದ ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ: ಚಿಕ್ಕೆಬನ್ನೂರು ಬಳಿ ಭೀಕರ ಅಪಘಾತ, ನಾಲ್ವರ ಸಾವು
ಅಪಘಾತದಲ್ಲಿ ಕಾರು ಜಖಂ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ವಿವೇಕ ಬಿರಾದಾರ|

Updated on:Jun 15, 2024 | 11:05 AM

Share

ಚಿತ್ರದುರ್ಗ, ಜೂನ್​ 15: ಚಿತ್ರದುರ್ಗ (Chitradurga) ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾರೆ. ಬೆಂಗಳೂರಿನ ತಣಸಂದ್ರ ಮೂಲದವರು ಪ್ರಜ್ವಲ್ ರೆಡ್ಡಿ(30), ಹರ್ಷಿತಾ(28), ನೋಹನ್ (2), ವಿಜಯರೆಡ್ಡಿ ಮೃತ ದುರ್ದೈವಿಗಳು. ಬೆಂಗಳೂರಿನಿಂದ ಗೋವಾಕ್ಕೆ ತೆರಳುವ ವೇಳೆ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರಿಗೆ  ಲಾರಿ ಡಿಕ್ಕಿ ಹೊಡೆದಿದೆ. ಕಾರಿಲ್ಲಿದ್ದ ಮೂವರು ಮೃತಪಟ್ಟಿದ್ದು, ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಸ್ತೆ ಅಪಘಾತ, ಬೈಕ್​ ಸವಾರ ಸಾವು

ಚಾಮರಾಜನಗರ: ರಸ್ತೆ ಅಪಘಾತದಲ್ಲಿ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಬಳಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ಗ್ರಾಮದ ಅರಣ್ (34) ಮೃತ ದುರ್ದೈವಿ. ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು,  ಬೈಕ್ ಸವಾರ ಸ್ಥಳದಲ್ಲೇ ಸಾವುಅರಣ್ ಗುಂಡ್ಲುಪೇಟೆಯಿಂದ ಮೈಸೂರಿನತ್ತ ತೆರಳುತ್ತಿದ್ದರು. ಲಾರಿ ತರಕಾರಿ ಲೋಡ್ ಹೊತ್ತುಕೊಂಡು ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿತ್ತು. ಓವರ್ ಟೇಕ್ ಮಾಡುವ ಬರದಲ್ಲಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಗುಂಡ್ಲುಪೇಟೆ ಪೊಲೀಸರು  ಸದ್ಯ ವಾಹನ ಜಪ್ತಿ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:29 am, Sat, 15 June 24

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More