AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರದ ಆರೋಪ; ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ 2 ಗುಂಪಿನ ಮಧ್ಯೆ ವಾಗ್ವಾದ

ಮತಾಂತರ ನಡೆಸುತ್ತಿದ್ದಾರೆ ಎಂದು 2 ಗುಂಪಿನ ಮಧ್ಯೆ ವಾಗ್ವಾದವಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಚಿತ್ರದುರ್ಗದ ಬಲ್ಲಾಳ‌ಸಮುದ್ರದಲ್ಲಿ ಮತಾಂತರ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕರೊಬ್ಬರು 2 ದಿನದ ಹಿಂದೆ ಧನಿ ಎತ್ತಿದ್ದರು.

ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರದ ಆರೋಪ; ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ 2 ಗುಂಪಿನ ಮಧ್ಯೆ ವಾಗ್ವಾದ
ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ ಆಕ್ರೋಶ
TV9 Web
| Edited By: |

Updated on:Oct 04, 2021 | 7:59 AM

Share

ಚಿತ್ರದುರ್ಗ: ಇತ್ತೀಚೆಗೆ ರಾಜ್ಯದ ಹಲವೆಡೆ ಮತಾಂತರದ ಆರೋಪ ಕೇಳಿಬರುತ್ತಿದೆ. ಅಂತೆಯೇ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಲವಂತವಾಗಿ ಮತಾಂತರ ಮಾಡಿ‌ ದೇಶದ್ರೋಹ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಸ್ಥಳೀಯ ಯುವಕರು, ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತಾಂತರ ನಡೆಸುತ್ತಿದ್ದಾರೆ ಎಂದು 2 ಗುಂಪಿನ ಮಧ್ಯೆ ವಾಗ್ವಾದವಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಚಿತ್ರದುರ್ಗದ ಬಲ್ಲಾಳ‌ಸಮುದ್ರದಲ್ಲಿ ಮತಾಂತರ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕರೊಬ್ಬರು 2 ದಿನದ ಹಿಂದೆ ಧನಿ ಎತ್ತಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ವಿರೋಧ ವ್ಯಕ್ತಪಡಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿ ದೂರಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅಕ್ಟೋಬರ್ 1  ರಂದು ಚಿತ್ರದುರ್ಗದಲ್ಲಿಯೂ ಮತಾಂತರದ ಆರೋಪಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಇದಕ್ಕೆ ಮುಖ್ಯ ಕಾರಣ ಚಿತ್ರದುರ್ಗ ಜಿಲ್ಲೆಯ ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರ ನಡೆದಿರುವ ಬಗ್ಗೆ ಶಾಸಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಆರೋಪಿಸಿರುವುದೇ ಆಗಿದೆ.

ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಮತಾಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸುಡುಗಾಡು ಸಿದ್ಧ ಸಮುದಾಯದ ಜನರನ್ನು ಮತಾಂತರ ಮಾಡಲಾಗುತ್ತಿದೆ. ಕ್ರಿಶ್ಚಿಯನ್ ಧರ್ಮಕ್ಕೆ 40-50 ಕುಟುಂಬಗಳನ್ನು ಮತಾಂತರ ಮಾಡಲಾಗಿದೆ. ಜನರಿಂದ ಈ ಬಗ್ಗೆ ದೂರು ಕೂಡ ಬಂದಿದೆ ಎಂದು ಶಾಸಕ ಗೂಳಿಹಟ್ಟಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ಚಿತ್ರದುರ್ಗ: ಮತಾಂತರ ಆರೋಪ; ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿ ದೂರಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್

ಮತಾಂತರಕ್ಕೆ ಯತ್ನಿಸಿದ್ದ ನಾಲ್ವರ ವಿರುದ್ಧ ಎಫ್ಐಆರ್ ಪ್ರಕರಣ; ಪ್ರತಿದೂರು ನೀಡಲು ಮುಂದಾದ ಕ್ರೈಸ್ತ ಪಾದ್ರಿಗಳು

Published On - 7:54 am, Mon, 4 October 21

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ