ಹಣ ದ್ವಿಗುಣಗೊಳಿಸಿ ಕೊಡುವುದಾಗಿ ವಂಚನೆ! ಚಿತ್ರದುರ್ಗ ನಗರಸಭೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲು
ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್, ಮೂರ್ತಿ, ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ. ಚಂದ್ರಶೇಖರ್ ಹಲವು ವಂಚನೆ ಕೇಸ್ನಲ್ಲಿ ಭಾಗಿಯಾಗಿದ್ದಾರಂತೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚಿತ್ರದುರ್ಗ: ಹಣ ದ್ವಿಗುಣಗೊಳಿಸಿ ಕೊಡುವುದಾಗಿ ಆಮಿಷವೊಡ್ಡಿ ವಂಚನೆ ಮಾಡಿದ ಆರೋಪದಡಿಯಲ್ಲಿ ಚಿತ್ರದುರ್ಗ ನಗರಸಭೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಗರಸಭೆ ಜೆಡಿಎಸ್ ಸದಸ್ಯ ಚಂದ್ರಶೇಖರ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. 6 ಲಕ್ಷ ಹಣ ಪಡೆದು 18 ಲಕ್ಷ ನೀಡುವುದಾಗಿ ನಂಬಿಸಿ ವಂಚನೆ ಮಾಡಿದ್ದಾರಂತೆ. ದೊಡ್ಡಬಳ್ಳಾಪುರದ ನಾಗರಾಜ್ಗೆ ನಗರಸಭೆ ಜೆಡಿಎಸ್ ಸದಸ್ಯ ಚಂದ್ರಶೇಖರ್ 18 ಲಕ್ಷ ಇದೆ ಎಂದು ಹೇಳಿ ಬ್ಯಾಗ್ ನೀಡಿ ವಂಚನೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್, ಮೂರ್ತಿ, ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ. ಚಂದ್ರಶೇಖರ್ ಹಲವು ವಂಚನೆ ಕೇಸ್ನಲ್ಲಿ ಭಾಗಿಯಾಗಿದ್ದಾರಂತೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆನ್ಲೈನ್ ಮೂಲಕ ಲಕ್ಷಾಂತರ ರೂಪಾಯಿ ವಂಚನೆ ಆನ್ಲೈನ್ ಮೂಲಕ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ವಿಜಯಪುರ ಸಿಇಎನ್ ಪೊಲೀಸರು ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ. ಆಂಥೋನಿ ಎಂಬ ನೈಜೀರಿಯಾ ಪ್ರಜೆ ಬಂಧನಕ್ಕೊಳಗಾಗಿದ್ದಾನೆ. ಈತ ಆನ್ಲೈನ್ ಮೂಲಕ ಕೊಲ್ಹಾರ ಪಟ್ಟಣದ ಕಿರಣ ಕಲ್ಲಪ್ಪ ದೇಸಾಯಿಗೆ ವಂಚನೆ ಮಾಡಿದ್ದಾನಂತೆ. ಸುಮಾರು 16 ಲಕ್ಷ ರೂ. ಹಣ ವಂಚನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಔಷಧ ನೀಡುವ ವಿಚಾರದಲ್ಲಿ ವಂಚನೆ ಮಾಡಿದ್ದಾಗಿ ಕಿರಣ ದೇಸಾಯಿ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆಂಥೋನಿ ಗುಜರಾತಿನಲ್ಲಿ ಕೆಲಸದ ನಿಮಿತ್ಯ ವಾಸವಿದ್ದ. ಔಷಧ ನೀಡುವ ವಿಚಾರದಲ್ಲಿ ನಂಬಿಸಿ ಮೋಸ ಮಾಡಿದ್ದಾನಂತೆ. ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗುಜರಾತಿನಲ್ಲಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿ ತಂದಿದ್ದಾರೆ.
ಇದನ್ನೂ ಓದಿ
ಮ್ಯಾನ್ ಹೋಲ್ನಲ್ಲಿ ಕಾರ್ಮಿಕನನ್ನ ಇಳಿಸಿ ಚರಂಡಿ ಸ್ವಚ್ಛಗೊಳಿಸಲು ಮುಂದಾದ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ
72 ಗಂಟೆ ಮೊದಲು ಮಾಡಿಸಿದ ಟೆಸ್ಟ್ಗೆ ಮಾನ್ಯತೆ ಇಲ್ಲ; ಕೆಲ ವಿದೇಶಿಗರ ಫ್ಲೈಟ್ ಟಿಕೆಟ್ ಕ್ಯಾನ್ಸಲ್
Published On - 10:49 am, Tue, 7 December 21