Anna Bhagya Scheme Rice: ಪೊದೆಯಲ್ಲಿ ಬಚ್ಚಿಟ್ಟಿದ್ದ 146 ಚೀಲ ಅನ್ನಭಾಗ್ಯ ಅಕ್ಕಿ ವಶ

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದ ಬಳಿ ಅಕ್ಕಿ ಜಪ್ತಿ ಮಾಡಲಾಗಿದ್ದು, ಆರೋಪಿ ರಾಮು ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Anna Bhagya Scheme Rice: ಪೊದೆಯಲ್ಲಿ ಬಚ್ಚಿಟ್ಟಿದ್ದ 146 ಚೀಲ ಅನ್ನಭಾಗ್ಯ ಅಕ್ಕಿ ವಶ
ಪೊದೆಯಲ್ಲಿ ಬಚ್ಚಿಟ್ಟಿದ್ದ 146 ಚೀಲ ಅನ್ನಭಾಗ್ಯ ಅಕ್ಕಿ ವಶ
Follow us
TV9 Web
| Updated By: ಆಯೇಷಾ ಬಾನು

Updated on:Aug 06, 2021 | 1:29 PM

ಚಿತ್ರದುರ್ಗ: ರಾಂಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಪೊದೆಯಲ್ಲಿ ಬಚ್ಚಿಟ್ಟಿದ್ದ 146 ಚೀಲ ಅನ್ನಭಾಗ್ಯದ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದ ಬಳಿ ಅಕ್ಕಿ ಜಪ್ತಿ ಮಾಡಲಾಗಿದ್ದು, ಆರೋಪಿ ರಾಮು ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಂಪುರ ಪಿಎಸ್ಐ ಗಾದಿಲಿಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಲಕ್ಷಾಂತರ ಬೆಲೆ ಬಾಳುವ ಚಿನ್ನ, ನಗದು ಕಳವು ಇನ್ನು ಬೆಂಗಳೂರಿನ ಬಾಗಲಗುಂಟೆ ಬಳಿಯ ಕಲ್ಯಾಣನಗರದಲ್ಲಿ ಕಳ್ಳತನ ನಡೆದಿದೆ. ಸೈಕಲ್ ಶಾಪ್ ರಂಗಪ್ಪ ಅವರ ಮನೆಯಲ್ಲಿ ಹಾಡುಹಗಲೇ ಲಕ್ಷಾಂತರ ಬೆಲೆ ಬಾಳುವ ಚಿನ್ನ, ನಗದು ಕಳವು ಮಾಡಲಾಗಿದೆ. ರಂಗಪ್ಪರ ಮಗ ವಿನಯ್ ಮನೆಯಿಂದ ಹೊರ ಹಾಗುವಾಗ ತಂದೆಗೆ ಸುಲಭವಾಗಿ ಕೀ ಸಿಗಲೆಂದು ಮನೆ ಟೆರಸ್ನ ಬಾತ್ ರೂಂನಲ್ಲಿ ಬಚ್ಚಿಟ್ಟಿದ್ದರು.

nlm theft

ಮಗನ ಮದುವೆಗೆಂದು ಇಟ್ಟಿದ್ದ ಹಣ, ಒಡವೆ ಕಳೆದುಕೊಂಡು ಕಣ್ಣೀರಾಕುತ್ತಿರುವ ತಾಯಿ

ಇದನ್ನು ಗಮನಿಸಿದ ದುಷ್ಕರ್ಮಿಗಳು ಮನೆ ಕೀ ಕದ್ದು 2ಲಕ್ಷದ 30ಸಾವಿರ ಬೆಲೆ ಬಾಳುವ 75ಗ್ರಾ ಚಿನ್ನ,90ಸಾವಿರ ನಗದು ದೋಚಿದ್ದಾರೆ. ಸೆಪ್ಟೆಂಬರ್‌ ತಿಂಗಳಲ್ಲಿ ಮಗ ವಿನಯ್ ಮದುವೆ ನಿಶ್ಚಿಯವಾಗಿತ್ತು. ಮಗನ ಮದುವೆಗೆಂದು ರಂಗಪ್ಪ ಚಿನ್ನ ಖರೀದಿಸಿದ್ದರು. ಪರಿಚಯಸ್ಥರಿಂದಲೇ ಮನೆಗಳ್ಳತನ ಆಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬಾಗಲಗುಂಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದೇವಸ್ಥಾನ ಬಾಗಿಲು ಮುರಿದು ಕಳ್ಳತನ ಇನ್ನು ಮತ್ತೊಂದು ಕಡೆ ಗದಗ ಜಿಲ್ಲೆ ರೋಣ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಬಾಗಿಲು ಮುರಿದು ಖದೀಮರು ಕಳ್ಳತನ ಮಾಡಿದ್ದಾರೆ. ಮಧ್ಯರಾತ್ರಿ ದೇವಸ್ಥಾನಕ್ಕೆ ನುಗ್ಗಿದ್ದ ಖದೀಮರು ದೇವಸ್ಥಾನದಲ್ಲಿದ್ದ 2 ಕೆ.ಜಿ ಬೆಳ್ಳಿ ಕಿರೀಟ, 2 ಬೆಳ್ಳಿ ಬೆತ್ತ, 1 ಬಂಗಾರ ಲೇಪಿತ ಕಳಸ ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ರೋಣ ಪೊಲೀಸರು, ಬೆರಳಚ್ಚು ತಜ್ಞರು, ಶ್ವಾನದಳ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸುದ್ದಿ ತಿಳಿದು ಅಪಾರ ಭಕ್ತರು ದೇಗುಲ ಬಳಿ ಜಮಾಯಿಸಿದ್ದಾರೆ. ಇದೇ ಮಾದರಿಯಲ್ಲಿ ಗದಗ ಜಿಲ್ಲೆ ರೊಣ ತಾಲೂಕಿನ ಬೆಳವಣಕಿ ಗ್ರಾಮದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿಯೂ ಕಳ್ಳತನ ನಡೆದಿದೆ. ಅಲ್ಲಿ ಕಳ್ಳತನವಾಗಿರುವ ವಸ್ತುಗಳ ಕುರಿತು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಸರಣಿ ಕಳ್ಳತನ ಪ್ರಕರಣದಿಂದಾಗಿ ಜನ ಆತಂಕಗೊಂಡಿದ್ದಾರೆ.

temple theft

ದೇವಸ್ಥಾನದಲ್ಲಿ ಕಳ್ಳತನ, ಸುಳಿವು ಪತ್ತೆ ಹಚ್ಚುತ್ತಿರುವ ಬೆರಳಚ್ಚು ತಜ್ಞರು

ಇದನ್ನೂ ಓದಿ: LPG Cashback Offer: ಪೇಟಿಎಂ ಮೂಲಕ ಎಲ್​ಪಿಜಿ ಸಿಲಿಂಡರ್​ ಬುಕ್​ ಮಾಡಿ 2700 ರೂ. ತನಕ ಕ್ಯಾಶ್​ಬ್ಯಾಕ್ ಪಡೆಯಿರಿ

Published On - 11:44 am, Fri, 6 August 21

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್