ಜೈಲಿನಲ್ಲಿರುವ ಮುರುಘಾ ಶ್ರೀ: ಮರುಘಾ ಮಠದ ವಿದ್ಯಾಸಂಸ್ಥೆಯ ಸಿಬ್ಬಂದಿಗೆ ಸಂಬಳ ಇಲ್ಲದೆ ಪೀಕಲಾಟ!

| Updated By: ಸಾಧು ಶ್ರೀನಾಥ್​

Updated on: Sep 20, 2022 | 6:59 PM

ಮುರುಘಾಶ್ರೀ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಹಾಗಾಗಿ ಎಸ್ ಜೆ ಎಮ್ ವಿದ್ಯಾಸಂಸ್ಥೆಯ ಸಿಬ್ಬಂದಿಗೆ ಸಂಬಳ ಇಲ್ಲದೆ ಸಂಕಷ್ಟ ಎದುರಾಗಿದೆ. ಎಸ್ ಜೆ ಎಂ‌ ವಿದ್ಯಾ ಸಂಸ್ಥೆಯಲ್ಲಿ ಸುಮಾರು 3 ಸಾವಿರ ಸಿಬ್ಬಂದಿಯಿದ್ದಾರೆ.

ಜೈಲಿನಲ್ಲಿರುವ ಮುರುಘಾ ಶ್ರೀ: ಮರುಘಾ ಮಠದ ವಿದ್ಯಾಸಂಸ್ಥೆಯ ಸಿಬ್ಬಂದಿಗೆ ಸಂಬಳ ಇಲ್ಲದೆ ಪೀಕಲಾಟ!
ಜೈಲಿನಲ್ಲಿರುವ ಮುರುಘಾ ಶ್ರೀ: ಮರುಘಾ ಮಠದ ವಿದ್ಯಾಸಂಸ್ಥೆಯ ಸಿಬ್ಬಂದಿಗೆ ಸಂಬಳ ಇಲ್ಲದೆ ಪೀಕಲಾಟ!
Follow us on

ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಫೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾಶ್ರೀ (Shivamurthy Murugha Sharanaru) ಜೈಲುಪಾಲಾಗಿದ್ದಾರೆ. ಮುರುಘಾಶ್ರೀಗೆ ಸದ್ಯಕ್ಕೆ ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದು ಎಸ್ ಜೆ ಎಂ ವಿದ್ಯಾಸಂಸ್ಥೆಯ ಸಿಬ್ಬಂದಿಯನ್ನು ಸಂಕಷ್ಟಕ್ಕೆ ದೂಡಿದೆ. ಏಕೆಂದರೆ ಈ ವಿದ್ಯಾಸಂಸ್ಥೆಯ ಸಿಬ್ಬಂದಿಗೆ ಸಂಬಳ ನೀಡಲು ಸಂಸ್ಥೆಯ ಅಧ್ಯಕ್ಷರಾಗಿರುವ ಮುರುಘಾ ಶ್ರೀ ಸಹಿ ಅಗತ್ಯವಾಗಿದೆ. ಮುರುಘಾ ಶ್ರೀ ಪ್ರಸ್ತುತ, ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಇದ್ದಾರೆ.

ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲೇ ಸಹಿ ಮಾಡಲು ಅವಕಾಶ ಕೇಳಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಮುರುಘಾಶ್ರೀ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಈ ಆದೇಶ ನೀಡಿದೆ. ಹಾಗಾಗಿ ಎಸ್ ಜೆ ಎಮ್ ವಿದ್ಯಾಸಂಸ್ಥೆಯ ಸಿಬ್ಬಂದಿಗೆ ಸಂಬಳ ಇಲ್ಲದೆ ಸಂಕಷ್ಟ ಎದುರಾಗಿದೆ. ಎಸ್ ಜೆ ಎಂ‌ ವಿದ್ಯಾ ಸಂಸ್ಥೆಯಲ್ಲಿ ಸುಮಾರು 3 ಸಾವಿರ ಸಿಬ್ಬಂದಿಯಿದ್ದಾರೆ.

ಮುರುಘಾ ಮಠದ ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ವಿಸ್ತರಣೆ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಪ್ರಸಿದ್ಧ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಸ್ವಾಮೀಜಿಯ (Shivamurthy Murugha Sharana Swamiji) ನ್ಯಾಯಾಂಗ ಬಂಧನ ಸೆಪ್ಟೆಂಬರ್ 14ರಿಂದ ವಿಸ್ತರಣೆಯಾಗಿದೆ. ಮುರುಘಾ ಸ್ವಾಮೀಜಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಆದೇಶ ಹೊರಡಿಸಿದೆ.

ಚಿತ್ರದುರ್ಗ: ಪ್ರೀತಿಸಿ ಮದುವೆಯಾದ ಪತ್ನಿಯನ್ನೆ ಕತ್ತು ಹಿಸುಕಿ ಕೊಲೆ ಮಾಡಿದ ಪತಿ ಹಾಗೂ ಕುಟುಂಬಸ್ಥರು:

ವಿಜಯನಗರ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿ ಹಾಗೂ ಆತನ ಕುಟುಂಬಸ್ಥರು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಕೂಡ್ಲಿಗಿ ತಾಲೂಕಿನ ಬಣವಿಕಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಹೀನಾ ಬಾನು (23) ಕೊಲೆಯಾದ ಗೃಹಿಣಿ. ಜಾಫರ್ ಸಾದಿಕ್, ಚಿತ್ರದುರ್ಗದ ಮಲ್ಲಾಪುರದ ಹೀನಾಬಾನುಳನ್ನ 2 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಹೀನಾಬಾನು 7 ತಿಂಗಳ ಹಿಂದೆಯಷ್ಠೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ಹೀನಾಬಾನು ಪತಿ ಜಾಫರ್ ಸಾದಿಕ್, ಮಾವ ರಾಜಾಸಾಬ್, ಬಾವ ದಾದಾಪೀರ್, ನಾದಿನಿ ಹೀನಾಳನ್ನು ಪೊಲೀಸರು ಬಂಧಿಸಿದ್ದಾರೆ. ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:40 pm, Tue, 20 September 22