ಇಸ್ರೋ ಮಾಜಿ ಮುಖ್ಯಸ್ಥ ಕಸ್ತೂರಿ ರಂಗನ್​ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ

ಮುರುಘಾ ಮಠದ ಶರಣ ಸಂಸ್ಕ್ರತಿ ಉತ್ಸವದಲ್ಲಿ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಪ್ರಶಸ್ತಿ ಪ್ರದಾನ ಮಾಡಿದರು

ಇಸ್ರೋ ಮಾಜಿ ಮುಖ್ಯಸ್ಥ ಕಸ್ತೂರಿ ರಂಗನ್​ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ
ಚಿತ್ರದುರ್ಗದ ಮುರುಘಾಮಠದಲ್ಲಿ ಇಸ್ರೋ ಮಾಜಿ ಮುಖ್ಯಸ್ಥ ಕಸ್ತೂರಿ ರಂಗನ್ ಅವರಿಗೆ ಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 17, 2021 | 11:25 PM

ಚಿತ್ರದುರ್ಗ: ಮುರುಘಾ ಮಠದದ ಅನುಭವ ಮಂಟಪದಲ್ಲಿ ಭಾನುವಾರ ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಮಾಜಿ ಮುಖ್ಯಸ್ಥ, ಬಾಹ್ಯಾಕಾಶ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುರುಘಾ ಮಠದ ಶರಣ ಸಂಸ್ಕ್ರತಿ ಉತ್ಸವದಲ್ಲಿ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ₹ 5 ಲಕ್ಷ ಮೊತ್ತದ ಚೆಕ್‌, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕಬೀರಾನಂದ ಆಶ್ರಮದ ಶಿವಲಿಂಗಾನಂದ ಶ್ರೀ, ಶಿವಶರಣ ಮಾದಾರ ಗುರುಪೀಠದ ಮಾದಾರಚನ್ನಯ್ಯ ಉಪಸ್ಥಿತರಿದ್ದರು.

ಕಸ್ತೂರಿ ರಂಗನ್ ಅವರು ಇಸ್ರೋ ಮುಖ್ಯಸ್ಥರಾಗಿ 9ಕ್ಕೂ ಹೆಚ್ಚು ವರ್ಷ ಸೇವೆ ಸಲ್ಲಿಸಿದ್ದರು. ಇಸ್ರೋ ಸಂಸ್ಥೆಯ ಹಲವು ಮಹತ್ವದ ಯೋಜನೆಗಳು ಕಾರ್ಯರೂಪಕ್ಕೆ ಬರಲು ಶ್ರಮಿಸಿದ್ದರು. 2003ರವರೆಗೆ ಸುಮಾರು 9 ವರ್ಷಗಳವರೆಗೆ ಇಸ್ರೋ ಮುಖ್ಯಸ್ಥರಾಗಿದ್ದರು. ನಂತರ ರಾಜ್ಯಸಭೆ ಸದಸ್ಯರಾಗಿದ್ದರು. ಯೋಜನಾ ಆಯೋಗದ ಸದಸ್ಯರಾಗಿಯೂ ಹಲವು ಯೋಜನೆಗಳನ್ನು ರೂಪಿಸಲು ಶ್ರಮಿಸಿದ್ದರು. ಭಾರತ ಸರ್ಕಾರದಿಂದ ಮೂರು ನಾಗರಿಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಪದ್ಮಶ್ರೀ (1982), ಪದ್ಮಭೂಷಣ (1992) ಮತ್ತು ಪದ್ಮವಿಭೂಷಣ (2000) ಪುರಸ್ಕಾರ ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ: ಅಕ್ಟೋಬರ್ 8ರಿಂದ 18ರವರೆಗೆ ಮುರುಘಾ ಮಠದಲ್ಲಿ ಶರಣ ಸಂಸ್ಕೃತಿ ಉತ್ಸವ ಇದನ್ನೂ ಓದಿ: ಕಸ್ತೂರಿ ರಂಗನ್ ವರದಿ ನಿರ್ಲಕ್ಷಿಸಿ ದೊಡ್ಡ ಅಪಾಯವನ್ನೇ ಆಹ್ವಾನಿಸಿತಾ ಕರ್ನಾಟಕ.. ಒಳಸುಳಿ ಏನು?

Published On - 11:24 pm, Sun, 17 October 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ