AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa: ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಯಾರೆಂಬ ತೀರ್ಮಾನ; ಯಡಿಯೂರಪ್ಪ

ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಮರಳಿದ ಬಳಿಕವಷ್ಟೇ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ನಿರ್ಧರಿಸಲಾಗುವುದು ಎಂದು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದರು.

ಗಣಪತಿ ಶರ್ಮಾ
|

Updated on: Mar 20, 2023 | 5:32 PM

Share

ಹಿರಿಯೂರು: ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಮರಳಿದ ಬಳಿಕವಷ್ಟೇ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ನಿರ್ಧರಿಸಲಾಗುವುದು ಎಂದು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದರು. ಚುನಾವಣಾ ಪ್ರಚಾರ ಮತ್ತು ರೋಡ್​ಶೋದಲ್ಲಿ ಭಾಗವಹಿಸುವ ಸಲುವಾಗಿ ಚಿತ್ರದುರ್ಗದ ಹಿರಿಯೂರಿಗೆ (Hiriyur) ಆಗಮಿಸಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಬಿಜೆಪಿ ಪರ ಉತ್ತಮ ವಾತಾವರಣ ಇದೆ. 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ (BJP) ಗೆಲ್ಲಲಿದೆ. ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ನಂತರವಷ್ಟೇ ಮುಖ್ಯಮಂತ್ರಿ ಯಾರೆಂಬ ತೀರ್ಮಾನ ಆಗಲಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್​​ನಲ್ಲಿ ‘ನಾನೇ ಸಿಎಂ’ ಎಂಬುದಾಗಿ ಕೆಲವರು ಬೊಬ್ಬೆ ಹೊಡೆಯುತ್ತಿದ್ದಾರೆ. ಕೆಲವರು ಮುಂದಿನ ಸಿಎಂ ನಾವೇ ಎನ್ನುವುದರಲ್ಲಿ ಅರ್ಥವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯಗೆ ಬಿಎಸ್​​ವೈವೈ ಪರೋಕ್ಷ ಟಾಂಗ್ ಕೊಟ್ಟರು.

ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಬರಲಿದ್ದು ಅದ್ಭುತ ಕಾರ್ಯಕ್ರಮ ಆಗಲಿದೆ. ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ ಸರಿಸಮ ಅಲ್ಲ ಎಂದು ಅವರು ಹೇಳಿದ್ದಾರೆ. ಹಿರಿಯೂರು ಶಾಸಕಿ ಬಿಜೆಪಿ ತೊರೆಯುವ ವದಂತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಶಾಸಕಿ ಪೂರ್ಣಿಮಾ ನಮ್ಮ ಜತೆಗಿದ್ದಾರೆ ಎಂದರು. ಜತೆಗೆ ಪೂರ್ಣಿಮಾ ಹೆಗಲ ಮೇಲೆ ಕೈಹಾಕಿ‌ ಭರವಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ:  Belagavi: ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ 3,000 ರೂ. ನಿರುದ್ಯೋಗ ಭತ್ಯೆ; ರಾಹುಲ್ ಗಾಂಧಿ ಘೋಷಣೆ

ಹಿರಿಯೂರಿಗೆ ತೆರಳುವುದಕ್ಕೂ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನರೇಂದ್ರ ಮೋದಿ ಅವರಿಗೆ ಹೋಲಿಸಿದ್ದು ಸರಿಯಲ್ಲ ಎಂದು ಹೇಳಿದ್ದಾರೆ. ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಬಗ್ಗೆ ಲೇವಡಿ ಮಾಡಿರುವ ಬಿಎಸ್​​ವೈ, ಕಾಂಗ್ರೆಸ್​ಗೆ ಸರಿಯಾದ ನಾಯಕತ್ವವಿಲ್ಲದೆ 3 ರಾಜ್ಯಗಳಲ್ಲಿ ಸೋತಿದೆ. ಕರ್ನಾಟದಲ್ಲಿಯೂ ಅದೇ ಗತಿ ಆಗಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ಸಿಗೆ ಭವಿಷ್ಯವಿದೆ ಅಂತ ನನಗೆ ಅನಿಸುವುದಿಲ್ಲ. ಚುನಾವಣೆಯಲ್ಲಿ ಬಿಜೆಪಿ 140 ಸೀಟು ಗೆದ್ದರೆ ಕಾಂಗ್ರೆಸ್‌ನವರು ಎಲ್ಲಿದ್ದಾರೆ ಅಂತ ಹುಡುಕವ ಪರಿಸ್ಥಿತಿ ಬರಲಿದೆ. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ನೀರಿಕ್ಷೆಗೂ ಮೀರಿ ಜನ ಬೆಂಬಲ ನಮಗೆ ವ್ಯಕ್ತವಾಗುತ್ತಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More