ಬಿಎಸ್ ಯಡಿಯೂರಪ್ಪ ‘ಶರಣಶ್ರೀ’, ಬಸವರಾಜ ಬೊಮ್ಮಾಯಿ ‘ಬಸವಭೂಷಣ’ ಪ್ರಶಸ್ತಿಗೆ ಆಯ್ಕೆ; ಡಾ.ಶಿವಮೂರ್ತಿ ಮುರುಘಾ ಶರಣರು ಮಾಹಿತಿ

ಮುರುಘಾಮಠದಿಂದ ಆಯೋಜಿಸುವ ಶರಣ ಸಂಸ್ಕೃತಿ ಉತ್ಸವ ‌ಅಕ್ಟೋಬರ್ 8ರಿಂದ 18ರವರೆಗೆ ನಡೆಯಲಿದ್ದು‌, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆ, ಗೋಷ್ಠಿಗಳು ನಡೆಯಲಿವೆ.

ಬಿಎಸ್ ಯಡಿಯೂರಪ್ಪ ‘ಶರಣಶ್ರೀ’, ಬಸವರಾಜ ಬೊಮ್ಮಾಯಿ ‘ಬಸವಭೂಷಣ’ ಪ್ರಶಸ್ತಿಗೆ ಆಯ್ಕೆ; ಡಾ.ಶಿವಮೂರ್ತಿ ಮುರುಘಾ ಶರಣರು ಮಾಹಿತಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಚಿತ್ರದುರ್ಗ: ಜಿಲ್ಲೆಯಲ್ಲಿ 11 ದಿನಗಳ ಕಾಲ ಶರಣ ಸಂಸ್ಕೃತಿ ಉತ್ಸವ ನಡೆಯಲಿದೆ. ಈ ಹಿನ್ನೆಲೆ ನಿನ್ನೆ (ಅ.1) ಮುರುಘಾಮಠದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು ಸುದ್ದಿಗೋಷ್ಠಿ ನಡೆಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಶರಣರು, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ‘ಬಸವಭೂಷಣ’ ಪ್ರಶಸ್ತಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ‘ಶರಣಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ತಿಳಿಸಿದರು. ಈ ವೇಳೆ ಮಾದಾರ ಚನ್ನಯ್ಯ ಮಠದ ಬಸವಮೂರ್ತಿ ಮಾದಾರ ಚನ್ನಯ್ಯಶ್ರೀ ಉಪಸ್ಥಿತರಿದ್ದರು.

ಮುರುಘಾಮಠದಿಂದ ಆಯೋಜಿಸುವ ಶರಣ ಸಂಸ್ಕೃತಿ ಉತ್ಸವ ‌ಅಕ್ಟೋಬರ್ 8ರಿಂದ 18ರವರೆಗೆ ನಡೆಯಲಿದ್ದು‌, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆ, ಗೋಷ್ಠಿಗಳು ನಡೆಯಲಿವೆ. ಅಕ್ಟೋಬರ್ 17 ರಂದು ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು, ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್,‌ ಬಾಹ್ಯಾಕಾಶ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ಗೆ ಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಅಕ್ಟೋಬರ್ 18 ರಂದು ಸರ್ವಜನಾಂಗದ ಮಠಾಧೀಶರ ಸಮಾವೇಶ ನಡೆಯಲಿದೆ. ನಾಡಿನಲ್ಲಿರುವ ಸಾವಿರಕ್ಕೂ ಹೆಚ್ಚು ಮಠಾಧೀಶರು ಭಾಗಿ ಆಗಲಿದ್ದಾರೆ. ಅದೇ ದಿನ ಸಂಜೆ ಮುರುಘಾಶ್ರೀಗೆ ಗುರುವಂದನೆ ಕಾರ್ಯಕ್ರಮ ನಡೆಯಲಿದೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಇನ್ನು ಅದೇ ವೇದಿಕೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬಸವಭೂಷಣ ಪ್ರಶಸ್ತಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಶರಣಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಇದನ್ನೂ ಓದಿ

ಕರ್ನಾಟಕದ 31ನೇ ಜಿಲ್ಲೆಯಾಗಿ ಉದಯಿಸಲಿದೆ ವಿಜಯನಗರ; ಹಂಪಿ ಪರಿಕಲ್ಪನೆಯಲ್ಲಿ ವೇದಿಕೆ ಸಿದ್ಧ

ಯಲಹಂಕ: ಶಿವರಾಮ ಕಾರಂತ ಬಡಾವಣೆ ಭೂಸ್ವಾಧೀನಕ್ಕೆ ರೈತರ ವಿರೋಧ; ಪ್ರತಿಭಟಿಸುತ್ತಿದ್ದ ರೈತರು ಪೊಲೀಸರ ವಶಕ್ಕೆ

Read Full Article

Click on your DTH Provider to Add TV9 Kannada