ಮುರುಘಾ ಮಠ ಅಧೀನ ಸಂಸ್ಥೆ ಎಸ್ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಉದ್ಯಮಿ ಭರತ್ ನೇಮಕ
ವಿದೇಶದಲ್ಲಿ ಕಾರ್ಯ ನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.
ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ(Murugha Mutt) ಅಧೀನ ಸಂಸ್ಥೆಯಾಗಿರುವ ಎಸ್ಜೆಎಂ ವಿದ್ಯಾಪೀಠದ(SJM Vidyapeeth) ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್ ಅವರನ್ನು ನೇಮಕ ಮಾಡಲಾಗಿದೆ. ವಿದೇಶದಲ್ಲಿ ಕಾರ್ಯ ನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿ ಬಸವಪ್ರಭು ಶ್ರೀಗಳು, ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಬಿ.ವಸ್ತ್ರದಮಠ ಉಪಸ್ಥಿತರಿದ್ದರು.
ಮುರುಘಾಶ್ರೀ ವಜಾಕ್ಕೆ ಹೆಚ್ಚಿದ ಒತ್ತಡ
ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾಶ್ರೀಯನ್ನು ಚಿತ್ರದುರ್ಗ ಮುರುಘಾಮಠದ ಪೀಠಾದ್ಯಕ್ಷ ಸ್ಥಾನದಿಂದ ವಜಾ ಮಾಡಲು ಒತ್ತಡ ಹೆಚ್ಚಾಗಿದೆ. ಹೀಗಾಗಿ ಇಂದು ಚಿತ್ರದುರ್ಗದಲ್ಲಿ ವೀರಶೈವ ಲಿಂಗಾಯತ ಸಮಾಜದ ಸಭೆ ನಡೆಯಲಿದೆ. ಮಾಜಿ ಸಚಿವ ಎಚ್.ಏಕಾಂತಯ್ಯ ನೇತೃತ್ವದಲ್ಲಿ ಚಿತ್ರದುರ್ಗ ತಾಲೂಕಿನ ಸಿಬಾರ ಬಳಿಯ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಸಭೆ ನಡೆಯಲಿದೆ.
ಇದನ್ನೂ ಓದಿ: ಚಿತ್ರದುರ್ಗ: ಮುರುಘಾ ಮಠದಲ್ಲಿದ್ದ 22 ಮಕ್ಕಳು ನಾಪತ್ತೆ, ಈ ಮಕ್ಕಳು ಮಠದ ಪಾಲಾಗಿದ್ದು ಹೇಗೆಂಬುದೇ ಪ್ರಶ್ನೆ
ಇಂದು ಬೆಳಗ್ಗೆ 10:30ಕ್ಕೆ ಮಾಜಿ ಸಚಿವ ಏಕಾಂತಯ್ಯ ಸಭೆ ಕರೆದಿದ್ದಾರೆ. ಸೆಪ್ಟೆಂಬರ್ 29ರಂದು ಎಚ್.ಏಕಾಂತಯ್ಯ ನೇತೃತ್ವದಲ್ಲಿ ಸಭೆ ನಡೆದಿತ್ತು. ಅಕ್ಟೋಬರ್ 14ರಂದು ಸಿಎಂ ಭೇಟಿಯಾಗಿ ಮಠಕ್ಕೆ ಆಡಳಿತಾಧಿಕಾರಿ ನೇಮಿಸುವಂತೆ ಮನವಿ ಸಲ್ಲಿಸಿದ್ದರು. ಪೀಠಾದ್ಯಕ್ಷ ಸ್ಥಾನದಿಂದ ಮುರುಘಾಶ್ರೀ ವಜಾಗೊಳಿಸಲು ಆಗ್ರಹಿಸಿದ್ದರು. ಮಠದ ಪೂಜಾ ಕೈಂಕರ್ಯ, ಎಸ್ ಜೆ ಎಂ ವಿದ್ಯಾಸಂಸ್ಥೆಯ ಆಡಳಿತಾತ್ಮಕ ದೃಷ್ಠಿಯಿಂದ ಕ್ರಮಕ್ಕೆ ಮನವಿ ಮಾಡಿದ್ದರು. ಈವರೆಗೆ ಸರ್ಕಾರದಿಂದ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಇಂದು ವೀರಶೈವ ಲಿಂಗಾಯತ ಸಮಾಜದ ಸಭೆ ಕರೆಯಲಾಗಿದೆ. ಸರ್ಕಾರ ಈವರೆಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಮಠ, ವಿದ್ಯಾಪೀಠದ ಹಣ, ಸ್ವತ್ತು ದುರುಪಯೋಗ ಸಾಧ್ಯತೆ ಆರೋಪ ಸಂಬಂಧ ಸಭೆಯಲ್ಲಿ ಚರ್ಚಿಸಿ ಮುಂದಿನ ನಡೆಯ ಬಗ್ಗೆ ನಿರ್ಣಯ ಕೈಗೊಳ್ಳಲಾಗುತ್ತೆ.
3ನೇ ಆರೋಪಿ ಫೋಟೋಗ್ರಾಫರ್ ಮಯೂರ್ ಬಂಧನ
ಮುರುಘಾಶ್ರೀ ವಿರುದ್ಧ ಸುಳ್ಳು ದೂರು ದಾಖಲಿಸಲು ಪಿತೂರಿ ಕೇಸ್ಗೆ ಸಂಬಂಧಿಸಿ ಚಿತ್ರದುರ್ಗ ಗ್ರಾಮಾಂತರ ಪೊಲೀಸರು 3ನೇ ಆರೋಪಿ ಫೋಟೋಗ್ರಾಫರ್ ಮಯೂರ್ ಎಂಬುವವರನ್ನು ಬಂಧಿಸಿದ್ದಾರೆ. ಪಿತೂರಿ ಕೇಸ್ನಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಈಗಾಗಲೇ ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಬಸವರಾಜನ್ ಮತ್ತು ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಸೇರಿ ಇಬ್ಬರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:38 am, Sat, 3 December 22