ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಅಪಘಾತ; ನಿವೃತ್ತ ಡಿವೈಎಸ್ಪಿ ಜಯರಾಂ ನಾಯ್ಕ್ ನಿಧನ
ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ: ಚಿತ್ರದುರ್ಗ (Chitradurga) ತಾಲೂಕಿನ ಭರಮಸಾಗರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಬಕಾರಿ ಇಲಾಖೆಯ (Excise Department) ನಿವೃತ್ತ ಡಿವೈಎಸ್ಪಿ ಜಯರಾಂ ನಾಯ್ಕ್ ಮತ್ತು ಕಾರಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈವರೆಗೆ ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ, ಚಾಲಕ ಸಾವು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕ ಜೋಸೆಪ್ ಕುಟ್ಟಿ(46) ಮೃತದುರ್ದೈವಿ. ಬಾಲಕಿ ಅನು ಮರಿಯಾ(16) ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಟ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ಮಗಳು ಅನು ಮರಿಯಾಳ ಪರೀಕ್ಷೆ ಇರುವ ಹಿನ್ನೆಲೆ ಕಾರಿನಲ್ಲಿ ಅಪ್ಪ ಜೋಸೆಪ್ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಾರಿನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿ ಜೋಸೆಪ್ ಸಾವನ್ನಪ್ಪಿದ್ದಾರೆ. ಮಗಳು ಅನು ಮರಿಯಾಳರಿಗೆ ಸಣ್ಣಪುಟ್ಟಗಾಯಗಳಾಗಿವೆ.
Published On - 3:34 pm, Mon, 18 July 22