AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ಗೋಡ್ಸೆ ಚಿತ್ರ ಪ್ರದರ್ಶನ: ಕೇಸ್​ ಬುಕ್​

ಕೋಟೆನಾಡು ಚಿತ್ರದುರ್ಗದಲ್ಲಿ ನಡೆದಿದ್ದ ಹಿಂದೂ ಮಹಾಗಣಪತಿ ಬೃಹತ್ ವಿಸರ್ಜನಾ ಶೋಭಾಯಾತ್ರೆ ಮೆರವಣಿಗೆಯಲ್ಲಿ ನಾಥೂರಾಮ್ ಗೋಡ್ಸೆ ಚಿತ್ರ ಪ್ರದರ್ಶನ ಮಾಡಿರುವುದು ಭಾರಿ ವಿವಾದದಕ್ಕೆ ಕಾರಣವಾಗಿದ್ದು, ಇದೀಗ ದೂರು ದಾಖಲಾಗಿದೆ.

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ಗೋಡ್ಸೆ ಚಿತ್ರ ಪ್ರದರ್ಶನ: ಕೇಸ್​ ಬುಕ್​
ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ಗೋಡ್ಸೆ ಚಿತ್ರ ಪ್ರದರ್ಶನ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Oct 11, 2023 | 9:45 AM

Share

ಚಿತ್ರದುರ್ಗ, (ಅಕ್ಟೋಬರ್ 11): ಚಿತ್ರದುರ್ಗದಲ್ಲಿ (Chitradurga) ಹಿಂದೂ ಮಹಾಗಣಪತಿ (Hindu Maha Ganapati) ಶೋಭಯಾತ್ರೆ ವೇಳೆ ಗೋಡ್ಸೆ ಚಿತ್ರ ಪ್ರದರ್ಶನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೂರು ದಾಖಲಾಗಿದೆ. ಅಕ್ಟೋಬರ್ 8ರಂದು ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ಗೋಡ್ಸೆ ಚಿತ್ರ ಪ್ರದರ್ಶನ ಮಾಡಲಾಗಿತ್ತು. ಇದು ಕೆಲವರ ಆಕ್ರೋಶಕ್ಕೆ ಕಾರಣವಾಗಿತ್ತು. ಅದಂತೆ ಚಿತ್ರದುರ್ಗದ ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಎಂಬುವರು ದೂರು ನೀಡಿದ್ದು, ಈ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 505/1(C), 505/1(B) ಅಡಿಯಲ್ಲಿ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಂತಿ ಭಂಗ, ಕೋಮು ಸೌಹಾರ್ದತೆಗೆ ಧಕ್ಕೆ ತರಲು ಫೋಟೋ ಪ್ರದರ್ಶನ ಮಾಡಲಾಗಿದ್ದು, ಗೋಡ್ಸೆ ಚಿತ್ರ‌ ಪ್ರದರ್ಶಿಸಿದವರ ಪತ್ತೆ ಮಾಡಿ ಕಾನೂನು ಕ್ರಮಕ್ಕೆ ಒತ್ತಾಯಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಗಂಗಾವತಿ: ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ, ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್‌

ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದೂ‌ ಮಹಾಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಕರ್ನಾಟಕದಾದ್ಯಂತ ಜನಸಾಗರವೇ ಹರಿದುಬಂದಿತ್ತು. ಶೋಭಾಯಾತ್ರೆಯ ವೇಳೆ ಯುವ ಸಮೂಹ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿತ್ತು. ಆದರೆ, ಮೆರವಣಿಗೆಯಲ್ಲಿ ಕೆಲವರು ವೀರ ಸಾವರ್ಕರ್ ಚಿತ್ರ ಪ್ರದರ್ಶಿಸಿದರೆ, ಮತ್ತೆ ಕೆಲವರು ಜೊತೆಗೆ ಕೋಮು ಘರ್ಷಣೆಯಲ್ಲಿ ಹತ್ಯೆಯಾದ ಶರತ್ ಮಡಿವಾಳ್ ಶಿವಮೊಗ್ಗದ ಮೃತ ಹರ್ಷನ ಭಾವಚಿತ್ರ ಪ್ರದರ್ಶಿಸಿದ್ದರು.ಹಾಗೇ ನಾಥೂರಾಮ್ ಗೋಡ್ಸೆ ಭಾವಚಿತ್ರ ಹಿಡಿದು ಕುಪ್ಪಳಿಸಿದ್ದರು. ಇದೀಗ ಇದು ವಿವಾದಕ್ಕೀಡಾಗಿತ್ತು. ಈ ಬಗ್ಗೆ ಇದೀಗ ದೂರು ದಾಖಲಾಗಿದ್ದು, ಚಿತ್ರ ಪ್ರದರ್ಶಿಸಿದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:43 am, Wed, 11 October 23

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More