ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರ: ಚಿತ್ರದುರ್ಗ ಎಸ್ಪಿ ಪರಶುರಾಮ್ಗೆ NCPCR ನೋಟಿಸ್ ಜಾರಿ
ಪ್ರಕರಣದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ 9 ಪ್ರಶ್ನೆ ಕೇಳಿ 7 ದಿನದಲ್ಲಿ ಉತ್ತರಿಸಲು NCPCR ನೋಟಿಸ್ ನೀಡಿದೆ.
ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರ ಸಂಬಂಧ ಚಿತ್ರದುರ್ಗ ಎಸ್ಪಿ ಪರಶುರಾಮ್ಗೆ ಎನ್ಸಿಪಿಸಿಆರ್ (NCPCR) ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ 9 ಪ್ರಶ್ನೆ ಕೇಳಿ 7 ದಿನದಲ್ಲಿ ಉತ್ತರಿಸಲು NCPCR ನೋಟಿಸ್ ನೀಡಿದೆ. ಸುಮೊಟೊ ಕೇಸ್ ದಾಖಲಿಸಿಕೊಂಡು NCPCR ನೋಟಿಸ್ ಹಿನ್ನೆಲೆ ಪೊಲೀಸ್ ಇಲಾಖೆ ಹೈಅಲರ್ಟ್ ಆಗಿದೆ. ಇಂದು ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಇಂದು ಸಂತ್ರಸ್ತೆಯರು ನೀಡಿರುವ ಹೇಳಿಕೆಯ ವರದಿಯನ್ನು ತನಿಖಾಧಿಕಾರಿಗೆ ಸಲ್ಲಿಸಲಾಗುತ್ತದೆ. ಸಿಆರ್ಪಿಸಿ 164ರಡಿ ಹೇಳಿಕೆ ದಾಖಲಿಸಿಕೊಂಡಿರುವ ವರದಿಯನ್ನು ಪೊಲೀಸರು ಜಡ್ಜ್ಗೆ ಸಲ್ಲಿಸಲಿದ್ದಾರೆ. ಮುರುಘಾಶ್ರೀಗೆ ನೋಟಿಸ್ ನೀಡಿ ವಿಚಾರಣೆ ಸಾಧ್ಯತೆಯಿದ್ದು, ತನಿಖಾಧಿಕಾರಿ DySP ಅನಿಲ್ ನೇತೃತ್ವದಲ್ಲಿ ಬಂಧಿಸಿ ಕಾನೂನು ಕ್ರಮ ಸಾಧ್ಯತೆ ಎನ್ನಲಾಗುತ್ತಿದೆ.
ಮುರುಘಾಮಠದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್
ಆ.29 ರಂದು ಬಾಲ ಮಂದಿರ ಬಳಿ ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಮಕ್ಕೂ ನೋಟಿಸ್ ನೀಡಿದ್ದು, ಮಕ್ಕಳ ಆಯೋಗದ ಅಧ್ಯಕ್ಷೆ ಜಯಶ್ರೀ ಆಗಮಿಸಿದ್ದ ವೇಳೆ ಪ್ರತಿಭಟನೆ ನಡೆಸಿದ ಹಿನ್ನೆಲೆ ರಾಜ್ಯ ಮಕ್ಕಳ ಆಯೋಗದಿಂದ ಎಸ್ಪಿ ಕೆ.ಪರಶುರಾಮ್ಗೆ ನೋಟಿಸ್ ನೀಡಲಾಗಿದೆ. ಹಾಗಾಗಿ ಮುರುಘಾಮಠದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಇದನ್ನೂ ಓದಿ: ಮುರುಘಾ ಶರಣರ ವಿರುದ್ಧ ಷಡ್ಯಂತ್ರ ನಡೀತಿದೆ: ಮುರುಘಾ ಶರಣರ ಆಪ್ತ ಕೆಸಿ ವೀರೇಂದ್ರ
ಮಾಜಿ ಶಾಸಕ ಎಸ್ ಕೆ ಬಸವರಾಜನ್ ವಿರುದ್ಧದ ರೇಪ್ ಕೇಸ್ ದಾಖಲು:
ಮಾಜಿ ಶಾಸಕ ಎಸ್.ಕೆ.ಬಸವರಾಜನ್ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪೊಲೀಸರಿಂದ ಹಾಸ್ಟೆಲ್ನಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಹಾಸ್ಟೆಲ್ನ ಮಹಿಳಾ ವಾರ್ಡನ್, ಎಸ್.ಕೆ.ಬಸವರಾಜನ್ ವಿರುದ್ಧ ಅತ್ಯಾಚಾರಕ್ಕೆ ಯತ್ನ, ಹಿಂಸೆ ನೀಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ. ಆ. 26 ರಂದು ಎಸ್.ಕೆ.ಬಸವರಾಜನ್ ವಿರುದ್ಧ ಸೆಕ್ಷನ್ 354ರಡಿ ಪ್ರಕರಣ ದಾಖಲಾಗಿದೆ.
ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಬಸವರಾಜನ್ ವಿರುದ್ಧ IPC ಸೆಕ್ಷನ್ 341, 342, 504, 506ರಡಿ ಪ್ರಕರಣ ದಾಖಲಾಗಿತ್ತು. ಈಗ ಮುರುಘಾಮಠದ ಹಾಸ್ಟೆಲ್ಗೆ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶರಾದ ಗಿರೀಶ್ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮುಂಜಾಗ್ರತೆ ಕ್ರಮವಾಗಿ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಬೇರೆಡೆ ಶಿಫ್ಟ್ ಮಾಡಲಾಗಿದೆ. ಪ್ರಕರಣದಿಂದ ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರದಂತೆ ನ್ಯಾಯಾಧೀಶರ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:43 am, Thu, 1 September 22