AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂತಹ ನೀಚ ಮಕ್ಕಳು ಯಾರಿಗೂ ಬೇಡ : ತಂದೆಯನ್ನೇ ಮನೆಯಿಂದ ಹೊರ ಹಾಕಿದ ಪುತ್ರರು

ಚಿತ್ರದುರ್ಗ ತಾಲೂಕಿನ ಮಾಳಪ್ಪನಹಟ್ಟಿ ಗ್ರಾಮದ ಸುಮಾರು 85ವರ್ಷದ ವೃದ್ಧ ಬಸಪ್ಪ ಮಕ್ಕಳು, ಮೊಮ್ಮಕ್ಕಳ ಆರೈಕೆಯಲ್ಲಿ ಹಾಯಾಗಿರಬೇಕಿತ್ತು. ಆದರೆ, ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಬಸಪ್ಪ ಅವರನ್ನು ಮಕ್ಕಳು ಮನೆಯಿಂದ ಹೊರಹಾಕಿದ್ದಾರೆ. ಚಿತ್ರದುರ್ಗ ತಾಲೂಕಿನ ಮಾಳಪ್ಪನಹಟ್ಟಿ ಗ್ರಾಮದಲ್ಲಿ ನಡೆದಿದೆ. ಮುಂದೇನಾಯ್ತು? ಈ ಸುದ್ದಿ ಓದಿ

ಇಂತಹ ನೀಚ ಮಕ್ಕಳು ಯಾರಿಗೂ ಬೇಡ : ತಂದೆಯನ್ನೇ ಮನೆಯಿಂದ ಹೊರ ಹಾಕಿದ ಪುತ್ರರು
ವೃದ್ಧ ಬಸಪ್ಪನನ್ನು ಹೊರ ಹಾಕಿದ ಮಕ್ಕಳು
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ವಿವೇಕ ಬಿರಾದಾರ|

Updated on: Jun 22, 2025 | 8:38 PM

Share

ಚಿತ್ರದುರ್ಗ, ಜೂನ್​ 22: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಕ್ಕಳು 85 ವರ್ಷದ ತಂದೆಯನ್ನು ಮನೆಯಿಂದ ಹೊರ ಹಾಕಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಾಳಪ್ಪನಹಟ್ಟಿ ಗ್ರಾಮದಲ್ಲಿ ನಡೆದಿದೆ. ಮಾಳಪ್ಪನಹಟ್ಟಿ ಗ್ರಾಮದ ಬಸಪ್ಪ (85) ಅವರ ಹೆಸರಿನಲ್ಲಿ ನಾಲ್ಕು ಎಕರೆ ಭೂಮಿ ಇದೆ. ಬಸಪ್ಪ ಅವರಿಗೆ ಇಬ್ಬರು ಗಂಡು, ಓರ್ವ ಹೆಣ್ಣು ಮಗಳು ಇದ್ದು, ಸ್ಥಿತಿವಂತರಾಗಿದ್ದಾರೆ. ಆದರೆ, ಆಸ್ತಿ ವಿವಾದ ಹಾಗೂ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಕ್ಕಳು ತಂದೆಯನ್ನು ಮನೆಯಿಂದ ಹೊರ ಹಾಕಿದ್ದಾರೆ.

ಹೀಗಾಗಿ, ಬಸಪ್ಪ ಅವರು ಸುಮಾರು ವರ್ಷಗಳಿಂದ ವೃದ್ಧಾಶ್ರಮದಲ್ಲಿದ್ದಾರೆ. ಮಕ್ಕಳು ಮನೆಯಿಂದ ಹೊರ ಹಾಕಿದ ಹಿನ್ನೆಲೆಯಲ್ಲಿ ಬಸಪ್ಪ ಅವರು ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದಾರೆ. ವಾಪಸ್​ ಕರೆದುಕೊಳ್ಳುವಂತೆ ವೃದ್ಧ ಬಸಪ್ಪ ಅವರು ಮಕ್ಕಳ ಮನೆ ಬಳಿಗೆ ಹೋದರೇ, ಸುಪುತ್ರರು ಲೈಟ್ ಆಫ್ ಮಾಡಿಬಿಡುತ್ತಾರೆ. ಈ ಬಗ್ಗೆ ಮಾಹಿತ ತಿಳಿದ ಉಪ ವಿಭಾಗಧಿಕಾರಿ ಮಹೆಬೂಬ್ ಜಿಲಾನಿ ನೇತೃತ್ವದ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಮಕ್ಕಳಾದ ಜಯಣ್ಣ, ಹನುಮಂತಪ್ಪಗೆ ತರಾಟೆಗೆ ತೆಗೆದುಕೊಂಡು ಬುದ್ಧಿವಾದ ಹೇಳಿದ್ದಾರೆ.

ಅಧಿಕಾರಿಗಳು ಬುದ್ಧಿವಾದ ಹೇಳಿದ ಬಳಿಕ ಮಕ್ಕಳು ತಂದೆಯನ್ನು ನೋಡಿಕೊಳ್ಳಲು ಒಪ್ಪಿದ್ದಾರೆ. ಸದ್ಯ, ಬಸಪ್ಪ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ನಿರ್ಧರಿಸಿದ್ದಾರೆ. ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ನೀಡುವಂತೆ ಮಕ್ಕಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಸಂಭ್ರಮಾಚರಣೆ ವೇಳೆ ಕ್ರೌರ್ಯ, ಯುವಕನಿಗೆ ಚಾಕು ಇರಿತ
Image
ವಿಜಯಪುರ ಕೆನರಾ ಬ್ಯಾಂಕ್​ನಲ್ಲಿದ್ದ 58 ಕೆಜಿ ಚಿನ್ನ ಕಳ್ಳತನ!
Image
4 ವರ್ಷಗಳಿಂದ ಯುವತಿಗೆ ಕಿರುಕುಳ: ಹಿಂದೂ ಮುಖಂಡನ ವಿರುದ್ಧ ಎಫ್​ಐಆರ್
Image
ಬೆಂಗಳೂರಿನ ಉದ್ಯಮಿ ಮನೆಯಲ್ಲಿ ನೇಪಾಳ ಮೂಲದ ದಂಪತಿ ಸೇರಿ ಐವರಿಂದ ಕಳ್ಳತನ

ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಬಸ್ಸಪ್ಪ ಅವರ ಪುತ್ರ ಹನಮಂತಪ್ಪ, “ನಮ್ಮ ತಂದೆ, ನಮ್ಮ ತಾಯಿಯನ್ನು ಕೊನೆಗಾಲದಲ್ಲಿ ಉಪವಾಸ ಇರಿಸಿ ಸಾಯಿಸಿದ್ದಾರೆ. ನಮಗೂ ಶಿಕ್ಷಣ ಕೊಡಿಸಲಿಲ್ಲ. ಮದುವೆ ಮಾಡಲಿಲ್ಲ. ಹೀಗಾಗಿ, ಮನೆಯಿಂದ ಹೊರಹಾಕಿದ್ದೇವೆ” ಎಂದು ಸಬೂಬು ಹೇಳಿದರು.

ಇದನ್ನೂ ಓದಿ: ಮಗಳ ಅಡ್ಮಿಷನ್​ಗಾಗಿ ಊರಿಗೆ ತೆರಳುತ್ತಿದ್ದ ತಂದೆಯನ್ನ ಮಾರ್ಗ ಮಧ್ಯೆ ಕೊಂದ ಅಪರಿಚಿತರು

ಒಟ್ಟಾರೆಯಾಗಿ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ವಯೋವೃದ್ಧ ತಂದೆಯನ್ನು ಮಕ್ಕಳು ಮನೆಯಿಂದ ಹೊರಹಾಕಿದ ಅಮಾನವೀಯ ಘಟನೆ ನಡೆದಿದೆ. ಉಪ ವಿಭಾಗಧಿಕಾರಿ ಮಹೆಬೂಬ್ ಜಿಲಾನಿ ನೇತೃತ್ವದ ಅಧಿಕಾರಿಗಳ ತಂಡ ಮುತುವರ್ಜಿ ವಹಿಸಿ ಬಸಪ್ಪ ಅವರನ್ನು ರಕ್ಷಿಸಿ, ಮರಳಿ ಮಕ್ಕಳ ಮನೆಗೆ ಕಳುಹಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು