AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಸೈಕಲ್ ಕೊಡಲಿಲ್ಲವೆಂಬ ಕಾರಣಕ್ಕೆ 11 ವರ್ಷದ ಬಾಲಕಿ ನೇಣಿಗೆ ಶರಣು

ಪಕ್ಕದ ಮನೆ ಗೆಳತಿ ಸೈಕಲ್​ ಕೊಟ್ಟಿಲ್ಲವೆಂಬ ಕಾರಣಕ್ಕೆ 11 ವರ್ಷದ ಬಾಲಕಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ದುರ್ಘಟನೆಯಿಂದ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿತ್ರದುರ್ಗ: ಸೈಕಲ್ ಕೊಡಲಿಲ್ಲವೆಂಬ ಕಾರಣಕ್ಕೆ 11 ವರ್ಷದ ಬಾಲಕಿ ನೇಣಿಗೆ ಶರಣು
ಸ್ಪಂದನಾ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Apr 25, 2025 | 6:12 PM

Share

ಚಿತ್ರದುರ್ಗ, ಏಪ್ರಿಲ್ 25: ಪಕ್ಕದ ಮನೆ ಗೆಳತಿ ಸೈಕಲ್​ ಕೊಟ್ಟಿಲ್ಲ ಎಂದು ಬಾಲಕಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋಪಾಲ ಮತ್ತು ರುದ್ರಮ್ಮ ದಂಪತಿ ಪುತ್ರಿ ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ (girl). ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಸ್ಪಂದನಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಕ್ಕದ ಮನೆಯ ಸ್ನೇಹಿತೆ ಜತೆ ಬಾಲಕಿ ನಿತ್ಯ ಸೈಕಲ್​ ಆಡುತ್ತಿದ್ದಳು. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ತಲ್ವಾರ್​ನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಬಳಿ ತಲ್ವಾರ್​ನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ತೋಟದಲ್ಲಿದ್ದ 26 ವರ್ಷದ ಚನ್ನವೀರ ಹೀರಾನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಸ್ಥಳಕ್ಕೆ ಎಸ್​ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವೈದ್ಯರ ನಿರ್ಲಕ್ಷ್ಯ ಆರೋಪ: ಮೂರು ದಿನದ ಬಾಣಂತಿ ಸಾವು

ಸಿಸೇರಿಯನ್​ ಮೂಲಕ ಹೆಣ್ಣು ಶಿಶುಗೆ ಜನ್ಮ ನೀಡಿದ್ದ ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಗೆ ದಾಖಲಾಗಿದ್ದ ಶಾಂತಾ (26) ಮೃತ ಬಾಣಂತಿ. ಸದ್ಯ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಎಂದು ಪೋಷಕರು ಆರೋಪಿಸಿದ್ದಾರೆ. ಆಸ್ಪತ್ರೆಗೆ ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ
Image
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
Image
ಬೆಂಗಳೂರಿನಲ್ಲಿ ವಿಂಗ್ ಕಮಾಂಡರ್​ ರೌಡಿ ವರ್ತನೆ: ಅಸಲಿಗೆ ಆಗಿದ್ದೇನು?
Image
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
Image
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ

ಇದನ್ನೂ ಓದಿ: ಇನ್ಸ್ಟಾಗ್ರಾಮ್​ನಲ್ಲಿ ರಾಯಚೂರು-ಚಾಮರಾಜನಗರ ನಂಟು: ಯುವತಿ ಕೊರಳಿಗೆ 3 ಗಂಟು, ಪತಿ ಅರೆಸ್ಟ್

ಮೃತ ಬಾಣಂತಿ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ ನಿವಾಸಿ. ಏ.20ರಂದು ಹೆರಿಗೆ ನೋವು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಶಾಂತಾಗೆ ಸಿಸೇರಿಯನ್ ಮೂಲಕ ಡಾ.ಸಿಂಧು ಹೆರಿಗೆ ಮಾಡಿಸಿದ್ದು, ಹೆಣ್ಣು ಮಗುವಿಗೆ ಜನ್ಮ ಕೂಡ ನೀಡಿದ್ದರು. ಆದರೆ ಹೆರಿಗೆ ಬಳಿಕ ಬಾಣಂತಿ ಆರೋಗ್ಯದ ಮೇಲೆ ನಿಗಾ‌ ವಹಿಸದೇ ನಿರ್ಲಕ್ಷ್ಯ ವಹಿಸಲಾಗಿದ್ದು, ಆರೋಗ್ಯದಲ್ಲಿ ಏರುಪೇರಾಗಿ ಬಾಣಂತಿ‌ ಸಾವು ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಆಸ್ಪತ್ರೆಯಲ್ಲಿ ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.

ಎತ್ತು‌‌ ತಿವಿದು ರೈತ ಸಾವು

ಕೋಲಾರ ತಾಲೂಕಿನ ಈಕಂಬಳ್ಳಿ ಗ್ರಾಮದಲ್ಲಿ ಎತ್ತು ತಿವಿದು ಗಾಯಗೊಂಡಿದ್ದ ರೈತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ರೈತ ನಾರಾಯಣಪ್ಪ ಮೃತಪಟ್ಟಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.