
ಚಿತ್ರದುರ್ಗ, ಏಪ್ರಿಲ್ 25: ಪಕ್ಕದ ಮನೆ ಗೆಳತಿ ಸೈಕಲ್ ಕೊಟ್ಟಿಲ್ಲ ಎಂದು ಬಾಲಕಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋಪಾಲ ಮತ್ತು ರುದ್ರಮ್ಮ ದಂಪತಿ ಪುತ್ರಿ ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ (girl). ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಸ್ಪಂದನಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಕ್ಕದ ಮನೆಯ ಸ್ನೇಹಿತೆ ಜತೆ ಬಾಲಕಿ ನಿತ್ಯ ಸೈಕಲ್ ಆಡುತ್ತಿದ್ದಳು. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಬಳಿ ತಲ್ವಾರ್ನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ತೋಟದಲ್ಲಿದ್ದ 26 ವರ್ಷದ ಚನ್ನವೀರ ಹೀರಾನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಿಸೇರಿಯನ್ ಮೂಲಕ ಹೆಣ್ಣು ಶಿಶುಗೆ ಜನ್ಮ ನೀಡಿದ್ದ ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಗೆ ದಾಖಲಾಗಿದ್ದ ಶಾಂತಾ (26) ಮೃತ ಬಾಣಂತಿ. ಸದ್ಯ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಎಂದು ಪೋಷಕರು ಆರೋಪಿಸಿದ್ದಾರೆ. ಆಸ್ಪತ್ರೆಗೆ ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇದನ್ನೂ ಓದಿ: ಇನ್ಸ್ಟಾಗ್ರಾಮ್ನಲ್ಲಿ ರಾಯಚೂರು-ಚಾಮರಾಜನಗರ ನಂಟು: ಯುವತಿ ಕೊರಳಿಗೆ 3 ಗಂಟು, ಪತಿ ಅರೆಸ್ಟ್
ಮೃತ ಬಾಣಂತಿ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ ನಿವಾಸಿ. ಏ.20ರಂದು ಹೆರಿಗೆ ನೋವು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಶಾಂತಾಗೆ ಸಿಸೇರಿಯನ್ ಮೂಲಕ ಡಾ.ಸಿಂಧು ಹೆರಿಗೆ ಮಾಡಿಸಿದ್ದು, ಹೆಣ್ಣು ಮಗುವಿಗೆ ಜನ್ಮ ಕೂಡ ನೀಡಿದ್ದರು. ಆದರೆ ಹೆರಿಗೆ ಬಳಿಕ ಬಾಣಂತಿ ಆರೋಗ್ಯದ ಮೇಲೆ ನಿಗಾ ವಹಿಸದೇ ನಿರ್ಲಕ್ಷ್ಯ ವಹಿಸಲಾಗಿದ್ದು, ಆರೋಗ್ಯದಲ್ಲಿ ಏರುಪೇರಾಗಿ ಬಾಣಂತಿ ಸಾವು ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಆಸ್ಪತ್ರೆಯಲ್ಲಿ ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.
ಕೋಲಾರ ತಾಲೂಕಿನ ಈಕಂಬಳ್ಳಿ ಗ್ರಾಮದಲ್ಲಿ ಎತ್ತು ತಿವಿದು ಗಾಯಗೊಂಡಿದ್ದ ರೈತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ರೈತ ನಾರಾಯಣಪ್ಪ ಮೃತಪಟ್ಟಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.