ಚಿತ್ರದುರ್ಗ: ಟಿಟಿ ವಾಹನ ಪಲ್ಟಿಯಾಗಿ ಮೂವರು ದುರ್ಮರಣ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಟಿಪ್ಪರ್ ವಾಹನ ಒಂದು ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಕೆರೆಯಲ್ಲಿ ಹಸು ತೊಳೆಯಲು ಹೋಗಿದ್ದ ಮೂವರು ನೀರುಪಾಲಾಗಿರುವಂತಹ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ಘಟನೆ ನಡೆದಿದೆ.

ಚಿತ್ರದುರ್ಗ, ಮಾರ್ಚ್ 29: ಟಿಟಿ ವಾಹನ ಪಲ್ಟಿಯಾಗಿ ಮೂವರು ಜನರು ದುರ್ಮರಣ (death) ಹೊಂದಿರುವಂತಹ ಘಟನೆ ಜಿಲ್ಲೆಯ ಚಳ್ಳಕೆರೆ (Challakere) ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಶಂಕರಿಬಾಯಿ(65), ಕುಮಾರ ನಾಯ್ಕ್(46) ಮತ್ತು ಶ್ವೇತಾ(38) ಮೃತರು. ಐವರಿಗೆ ಗಂಭೀರ ಗಾಯಗಳಾಗಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕೆರೆಯಲ್ಲಿ ಹಸು ತೊಳೆಯಲು ಹೋಗಿದ್ದ ಮೂವರು ನೀರುಪಾಲು
ಕೆರೆಯಲ್ಲಿ ಹಸು ತೊಳೆಯಲು ಹೋಗಿದ್ದ ಮೂವರು ನೀರುಪಾಲಾಗಿರುವಂತಹ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ನಡೆದಿದೆ. ಮುದ್ದೇಗೌಡ(48), ಬಸವೇಗೌಡ(45), ವಿನೋದ್(17) ಮೃತರು. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು, ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ಕಿಮ್ಸ್
ಹಬ್ಬ ಹಿನ್ನೆಲೆ ಹಸುಗಳನ್ನು ತೊಳೆಯಲು ವಿನೋದ್ ಕೆರೆಗೆ ಹೋಗಿದ್ದರು. ಈ ವೇಳೆ ವಿನೋದ್‌ನನ್ನು ಹಸು ಕೆರೆಗೆ ಎಳೆದೊಯ್ದಿದೆ. ಆತನ ರಕ್ಷಣೆಗೆ ಮುದ್ದೇಗೌಡ ಮತ್ತು ಬಸವೇಗೌಡ ಕೆರೆಗೆ ಇಳಿದಿದ್ದಾರೆ. ಆದರೆ ಈಜು ಬಾರದೆ ನೀರಿನಲ್ಲಿ ಮುಳುಗಿ ಮೂವರೂ ಸಾವನ್ನಪ್ಪಿದ್ದಾರೆ.
ಸರ್ಜಾಪುರ ತ್ರಿಬಲ್ ಮರ್ಡರ್ ಆರೋಪಿಗಳು ಅರೆಸ್ಟ್
ತ್ರಿಬಲ್ ಮರ್ಡರ್ ಆರೋಪಿಗಳನ್ನು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಸೋನು(24) ಮತ್ತು ಸುಧೀರ್(23) ಬಂಧಿತರು. ಮಾರ್ಚ್ 15 ರಂದು ತ್ರಿಬಲ್ ಮರ್ಡರ್ ಮಾಡಲಾಗಿತ್ತು.
ಅನ್ಷು, ರಾಧೆಶ್ಯಾಮ್ ಮತ್ತು ದೀಪು ಎಂಬುವವರನ್ನು ಕೊಲೆ ಮಾಡಲಾಗಿತ್ತು. ಸರ್ಜಾಪುರ ಸಮೀಪದ ನಿರ್ಮಾಣ ಹಂತದ ಅಪಾರ್ಟ್ಮೆಂಟ್ನಲ್ಲಿ ಘಟನೆ ನಡೆದಿತ್ತು. ಕೊಲೆ ಮಾಡಲೆಂದೇ ಎಣ್ಣೆ ಪಾರ್ಟಿಗೆ ಆರೋಪಿಗಳು ಕರೆಸಿಕೊಂಡಿದ್ದರು. ಕಂಠಪೂರ್ತಿ ಕುಡಿಸಿ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಲಾಗಿತ್ತು.
ಕುಖ್ಯಾತ ಕಳ್ಳ ನವೀನ್ ಕುಮಾರ್ ಅಲಿಯಾಸ್ ಅಣ್ಣಾಬಾಂಡ್ ಬಂಧನ
ಕುಖ್ಯಾತ ಕಳ್ಳ ನವೀನ್ ಕುಮಾರ್ ಅಲಿಯಾಸ್ ಅಣ್ಣಾಬಾಂಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿಸಿಕೊಂಡು ಓಡಾಡ್ತಿದ್ದ ಆರೋಪಿ ನವೀನ್ ಕುಮಾರ್@ ಅಣ್ಣಾಬಾಂಡ್ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಅತ್ಯಾಚಾರ, ಕೊಲೆ, ಸುಲಿಗೆ ಸೇರಿ 54 ಪ್ರಕರಣದಲ್ಲಿ ಭಾಗಿಯಾಗಿದ್ದ.
ಇದನ್ನೂ ಓದಿ: ಕೊಲೆ ಮಾಡಿ ಸೂಟ್ಕೇಸ್ನಲ್ಲಿ ತುಂಬಿಟ್ಟ ಪ್ರಕರಣ: ಆರೋಪಿ ಸಿಕ್ಕಿಬಿದ್ದಿದ್ಹೇಗೆ? ಬೆಂಗಳೂರು ಪೊಲೀಸರು ಹೇಳಿದ್ದಿಷ್ಟು
ದಾವಣಗೆರೆ ನಗರದ ಡಿಆರ್ ಮೈದಾನದಲ್ಲಿ ನಡೆದಿದ್ದ ಪೊಲೀಸ್ ಪರೇಡ್ ವೇಳೆ ದಾವಣಗೆರೆ ನಗರ DySP ಶರಣಬಸವೇಶ್ವರ, ವಿದ್ಯಾನಗರ ಇನ್ಸ್ಪೆಕ್ಟರ್ ಶಿಲ್ಪಾ, ಸಿಬ್ಬಂದಿ ಚಂದ್ರು ಸೇರಿ ಹಲವರಿಗೆ ಐಜಿಪಿ ಡಾ.BR ರವಿಕಾಂತೇಗೌಡ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:47 am, Sat, 29 March 25