AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಐವರ ಮೇಲೆ ಆ್ಯಸಿಡ್ ದಾಳಿ; ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಪರಾರಿ

ಚಿತ್ರದುರ್ಗ ಹೊರವಲಯದ ಮಾಳಪ್ಪನಹಟ್ಟಿಯಲ್ಲೊಂದು ದುಷ್ಕೃತ್ಯ ನಡೆದಿದೆ. ಮಹಿಳೆ ಸೇರಿದಂತೆ ಕುಟುಂಬ ಸದಸ್ಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ನಂತರ ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿಯೋರ್ವ ಪರಾರಿ ಆಗಿರುವಂತಹ ಘಟನೆ ನಡೆದಿದೆ. ಸದ್ಯ ಚಿತ್ರದುರ್ಗದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗದಲ್ಲಿ ಐವರ ಮೇಲೆ ಆ್ಯಸಿಡ್ ದಾಳಿ; ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಪರಾರಿ
ಸುಹೇಲ್ ಭಾಷಾImage Credit source: tv9 kannada
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Mar 19, 2026 | 8:20 PM

Share

ಚಿತ್ರದುರ್ಗ, ಮಾರ್ಚ್​ 19: ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ (Attack) ಮಾಡಿ ಬಳಿಕ ಮನೆ ಮಂದಿಯ ಮೇಲೆ ಆ್ಯಸಿಡ್ ದಾಳಿ (Acid Attack) ಮಾಡಿ ವ್ಯಕ್ತಿಯೋರ್ವ ಪರಾರಿ ಆಗಿರುವಂತಹ ಘಟನೆ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಸುಹೈಲ್ ಭಾಷಾನಿಂದ ದುಷ್ಕೃತ್ಯ ಎಸಗಲಾಗಿದೆ. ಘಟನೆಯಲ್ಲಿ ಮಹಿಳೆ ತಾಸಿನಾ ಬಾನು ಸೇರಿದಂತೆ ಆಕೆಯ ಸಹೋದರಿ ನೇಹಾ, ಪುತ್ರಿ ಇಕ್ರಾ, ನಗ್ಮಾ ನಾಯ್ಕ್ ಮೇಲೆ ಆ್ಯಸಿಡ್ ದಾಳಿ ಮಾಡಲಾಗಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು? 

ತಾಸಿನಾ ಬಾನು ಮತ್ತು ಸುಹೈಲ್ ಭಾಷಾ ಪ್ರೀತಿಸಿ ಮದುವೆಯಾಗಿದ್ದರು. ಚಿತ್ರದುರ್ಗದ ನೆಹರು ನಗರದ ನಿವಾಸಿ ಸುಹೈಲ್ ಭಾಷಾ ಆಟೋ ಚಾಲಕ. ಆದರೆ ಪತಿಯ ಕಿರುಕುಳದಿಂದ ಬೇಸತ್ತು ತಾಸಿನಾ ಕೆಲವು ತಿಂಗಳ ಹಿಂದೆ ಪತಿಯನ್ನ ತೊರೆದು ಬೆಂಗಳೂರಿಗೆ ಬಂದಿದ್ದರು.

ಇದನ್ನೂ ಓದಿ: ಯುವಕನ ಪ್ರಾಣವನ್ನೇ ಬಲಿ ಪಡೆದ ಸ್ನೇಹಿತನ ಸಹೋದರಿ ಜೊತೆಗಿನ ಅಕ್ರಮ ಸಂಬಂಧ: ಗೆಳೆಯನಿಂದಲೇ ನಡೀತು ಭೀಕರ ಹತ್ಯೆ

ರಂಜಾನ್​​ ಹಬ್ಬಕ್ಕೆಂದು ಇತ್ತ ಚಿತ್ರದುರ್ಗದಲ್ಲಿರುವ ತನ್ನ ಸಹೋದರಿಯ ಮನೆಗೆ ಬಂದಿದ್ದರು. ಈ ವೇಳೆ ಸುಹೈಲ್ ಭಾಷಾ ದುಷ್ಕೃತ್ಯ ಮೆರೆದಿದ್ದಾರೆ. ತನ್ನೊಂದಿಗಿನ ಸಂಬಂಧ ಕಡಿದುಕೊಂಡಿದ್ದಕ್ಕೆ ಕೃತ್ಯವೆಸಗಲಾಗಿದೆ ಎನ್ನಲಾಗುತ್ತಿದೆ.

ಎಸ್​ಪಿ ರಂಜಿತ್ ಹೇಳಿದ್ದಿಷ್ಟು 

ಇನ್ನು ಸ್ಥಳಕ್ಕೆ ಎಸ್​ಪಿ ರಂಜಿತ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಆಟೋ ಚಾಲಕ ಸುಹೇಲ್ ಬಾಷಾನಿಂದ ವಿಚ್ಛೇದಿತ ಪತ್ನಿ ತಾಸಿನಾ ಬಾನು ಸೇರಿ ನಾಲ್ವರ ಮೇಲೆ ಆ್ಯಸಿಡ್ ದಾಳಿ ಮಾಡಲಾಗಿದೆ. ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ನಾಲ್ವರು ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದರು.

ಇದನ್ನೂ ಓದಿ: ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಭೀಕರವಾಗಿ ಕೊಲೆ: ಭಾವಿ ಪತಿ ಅನುಮಾಕ್ಕೆ ಅಪ್ರಾಪ್ತೆ ಬಲಿ

ತಾಸಿನಾ ಬಾನು ಅಕ್ಕ ನಗ್ಮಾ ನಾಯ್ಕ್ ಮನೆಗೆ ಬಂದಿದ್ದರು. ನಗ್ಮಾ ನಾಯ್ಕ್ ಮನೆಗೆ ಬಂದು ಸುಹೇಲ್ ಬಾಷಾ, ತಾಸಿನಾ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಆ್ಯಸಿಡ್ ದಾಳಿ ಮಾಡಿದ್ದಾನೆ. ಆರೋಪಿ ಸುಹೇಲ್ ಬಾಷಾ ಬಂಧನಕ್ಕೆ ತಂಡ ರಚಿಸಿದ್ದೇವೆ. ಆತನ ವಿರುದ್ಧ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ಎಸ್​ಪಿ ರಂಜಿತ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:26 pm, Thu, 19 March 26

Follow Us
ಬಸವರಾಜ ಮುದನೂರ್, ಚಿತ್ರದುರ್ಗ
ಬಸವರಾಜ ಮುದನೂರ್, ಚಿತ್ರದುರ್ಗ

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ