AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಪ್ರದೇಶದಲ್ಲಿ ಮರ ಕಳ್ಳತನಕ್ಕೆ ಯತ್ನ: ಆರೋಪಿಗಳಿಗೆ ವಿಚಿತ್ರ ಶಿಕ್ಷೆ ವಿಧಿಸಿದ ಕೋರ್ಟ್​

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಮುತ್ತಿಗಾರಹಳ್ಳಿ ಅರಣ್ಯದಲ್ಲಿ 2016ರಲ್ಲಿ ನಡೆದ ಮರದ ದಿಮ್ಮಿ ಕಳ್ಳತನ ಪ್ರಯತ್ನ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಜೆಎಂಎಫ್‌ಸಿ ನ್ಯಾಯಾಲಯ ವಿಶಿಷ್ಟ ಶಿಕ್ಷೆ ವಿಧಿಸಿದೆ. ಆರೋಪಿಗಳು ತಲಾ 15 ಸಸಿಗಳನ್ನು ನೆಟ್ಟು ಪೋಷಿಸಬೇಕು ಮತ್ತು 4500 ರೂ. ದಂಡ ಕಟ್ಟಬೇಕು ಎಂದು ಆದೇಶಿಸಲಾಗಿದೆ.

ಅರಣ್ಯ ಪ್ರದೇಶದಲ್ಲಿ ಮರ ಕಳ್ಳತನಕ್ಕೆ ಯತ್ನ: ಆರೋಪಿಗಳಿಗೆ ವಿಚಿತ್ರ ಶಿಕ್ಷೆ ವಿಧಿಸಿದ ಕೋರ್ಟ್​
ಪ್ರಾತಿನಿಧಿಕ ಚಿತ್ರ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Apr 05, 2025 | 11:05 AM

Share

ಚಿತ್ರದುರ್ಗ, ಏಪ್ರಿಲ್​ 05: ಅರಣ್ಯ ಪ್ರದೇಶದಲ್ಲಿ ಮರದ ದಿಮ್ಮಿ (Tree) ಕಳ್ಳತನಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಸಿ ನೆಟ್ಟು ಪೋಷಿಸುವ ಶಿಕ್ಷೆಯನ್ನು ವಿಧಿಸಿ ಜಿಲ್ಲೆಯ ಮೊಳಕಾಲ್ಮೂರು ಜೆಎಂಎಫ್​​​ಸಿ ಕೋರ್ಟ್ (jmfc Court) ಆದೇಶ ಹೊರಡಿಸಿದೆ. ದೋಷಿಗಳಾದ ವಸಂತ, ಮಲ್ಲೇಶ, ಮಲ್ಲಿಕಾರ್ಜುನ ಮತ್ತು ಸಣ್ಣಪಾಲಯ್ಯಗೆ ತಲಾ 4500 ರೂ ದಂಡ ವಿಧಿಸಬೇಕು. ಒಂದು ವೇಳೆ ದಂಡ ಕಟ್ಟದಿದ್ದಲ್ಲಿ ನಾಲ್ವರಿಗೆ 35 ದಿನ ಸಾದಾ ಶಿಕ್ಷೆ ಪ್ರಕಟಿಸಲಾಗಿದೆ. ಅರಣ್ಯದಲ್ಲಿ ನಾಲ್ವರು ತಲಾ 15 ಸಸಿ ನೆಟ್ಟು ಪೋಷಿಸಲು ಆದೇಶಿಸಲಾಗಿದೆ.

ಮುತ್ತಿಗಾರಹಳ್ಳಿ ಅರಣ್ಯದಲ್ಲಿ 2016 ಏ.14ರಂದು ಮರದದಿಮ್ಮಿ ಕಳ್ಳತನಕ್ಕೆ ನಾಲ್ವರು ಯತ್ನಿಸಿದ್ದರು. ಎತ್ತಿನಗಾಡಿಯಲ್ಲಿ ಮರದದಿಮ್ಮಿ ಸಾಗಣೆ ವೇಳೆ ಅರಣ್ಯ ಸಿಬ್ಬಂದಿ ತಡೆದಿದ್ದರು. ಈ ವೇಳೆ ಅರಣ್ಯ ಅಧಿಕಾರಿಗಳ ಮೇಲೆ ಎತ್ತಿನಗಾಡಿ ಹತ್ತಿಸುವ ಯತ್ನಿಸಿದ್ದರು. ಬಳಿಕ ಮರದ ದಿಮ್ಮಿ ಎಸೆದು ಆರೋಪಿಗಳು ಎಸ್ಕೇಪ್ ಆಗಿದ್ದರು. ಈ ಬಗ್ಗೆ ಮೊಳಕಾಲ್ಮೂರು ಠಾಣೆಗೆ ಅರಣ್ಯಾಧಿಕಾರಿ ದೂರು ನೀಡಿದ್ದರು.

ಚಿತ್ರದುರ್ಗದಲ್ಲಿ ಮನೆಗಳ್ಳತನಕ್ಕೆ ವಿಫಲ ಯತ್ನ

ಚಿತ್ರದುರ್ಗದ ಐಯುಡಿಪಿ ಬಡಾವಣೆಯಲ್ಲಿ ಮನೆಗಳ್ಳತನಕ್ಕೆ ಯತ್ನಿಸಿರುವಂತಹ ಘಟನೆ ನಡೆದಿದೆ. ಕಾರಲ್ಲಿ ಬಂದಿದ್ದ ಕಳ್ಳರು ಮನೆ ಆವರಣದಲ್ಲಿದ್ದ ಬಲ್ಬ್ ಹೊಡೆದು ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನಪಟ್ಟಿದ್ದಾರೆ.

ಇದನ್ನೂ ಓದಿ: ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ..!

ಉದ್ಯಮಿ ರವಿಶಂಕರ್ ಎಂಬುವರಿಗೆ ಸೇರಿದ ಮನೆಗಳ್ಳತನ ಯತ್ನಿಸಲಾಗಿದೆ. ಕಳ್ಳರು ಮನೆಗಳ್ಳತನ ಯತ್ನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗಳ್ಳತನಕ್ಕೆ ವಿಫಲ ಯತ್ನ ಮಾಡಿದ್ದಾರೆ. ಚಿತ್ರದುರ್ಗ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

50ಕ್ಕೂ ಹೆಚ್ಚು ಸಿಲ್ವರ್ ಮರಗಳ ಕಳ್ಳತನ

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆ ಗ್ರಾಮದ  ಅತ್ತೂರು ನಲ್ಲೂರು ವ್ಯಾಪ್ತಿಯಲ್ಲಿ ಇತ್ತೀಚೆಗೆ ಸ್ಥಳೀಯ ಹೊಸಕೋಟೆ ಪಂಚಾಯಿತಿಗೆ ಸೇರಿದ ಆರು ಎಕರೆ ಭೂಮಿಯಿಂದ ಇಲ್ಲಿ 50ಕ್ಕೂ ಹೆಚ್ಚು ಸಿಲ್ವರ್ ಮರಗಳನ್ನ ಮರಗಳ್ಳರು ಹಾಡಹಗಲೇ ಕದ್ದೊಯ್ದಿ ಘಟನೆ ನಡೆದಿತ್ತು.

ಇದನ್ನೂ ಓದಿ: ಬೇಸಿಗೆ ರಜೆ: ಬೆಂಗಳೂರು, ಮೈಸೂರಿನಿಂದ ಕಲಬುರಗಿ, ಹುಬ್ಬಳ್ಳಿ, ಬೆಳಗಾವಿಗೆ ವಿಶೇಷ ರೈಲು

ಮರ ಕಡಿಯುತ್ತಿರುವ ಕುರಿತು ಮಾಹಿತಿ ಪಡೆದ ಟಿವಿ9 ಸ್ಥಳಕ್ಕೆ ಧಾವಿಸಿತ್ತು. ಈ ಸಂದರ್ಭ ಟಿವಿ9 ಬರ್ತಾ ಇದೆ ಅನ್ನೋ ಮಾಹಿತಿ ಪಡೆದ ಮರಗಳ್ಳರು ಲಾರಿ ಸಮೇತ ಅಲ್ಲಿಂದ ಕಾಲ್ಕಿತ್ತಿದ್ದರು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಬೆನ್ನಟ್ಟಿ ಹಿಡಿದು ಎರಡು ಲಾರಿ ಹಾಗೂ ಕ್ರೇನ್ ಅನ್ನ ವಶಪಡಿಸಿಕೊಂಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:02 am, Sat, 5 April 25

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More