ಚಿತ್ರದುರ್ಗ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬೆಳಗಟ್ಟ ಗ್ರಾಮ ಪಂಚಾಯಿತಿ ಪಿಡಿಒ

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 28, 2023 | 7:31 PM

ಇ-ಸ್ವತ್ತು ಮಾಡಿಕೊಡಲು 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಳಗಟ್ಟ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚಿತ್ರದುರ್ಗ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬೆಳಗಟ್ಟ ಗ್ರಾಮ ಪಂಚಾಯಿತಿ ಪಿಡಿಒ
ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯತ್​ ಪಿಡಿಓ
Follow us on

ಚಿತ್ರದುರ್ಗ: 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಳಗಟ್ಟ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇ-ಸ್ವತ್ತು ಮಾಡಿಕೊಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಸುರೇಶ್, ತಿಪ್ಪೇಸ್ವಾಮಿ ಎಂಬುವವರ ಬಳಿ‌ ಲಂಚ ತೆಗೆದುಕೊಳ್ಳುವ ವೇಳೆ ಸಿಕ್ಕಿಬಿದ್ದಿದ್ದಾನೆ. ಲೋಕಾಯುಕ್ತ ಡಿವೈಎಸ್​ಪಿ ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿತ್ತು.

ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ; ಓರ್ವ ವ್ಯಕ್ತಿ ಸಾವು

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ‌ ಬೊಮ್ಮನಜೋಗಿ ಗ್ರಾಮದ ಬಳಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಟ್ರ್ಯಾಕ್ಟರ್​ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನು ನಾಲ್ವರಿಗೆ ‌ಗಂಭೀರ ಗಾಯವಾಗಿದೆ. ಇದೇ ಮಾರ್ಗವಾಗಿ ಬಂದ ನಾಗಠಾಣ ಕ್ಷೇತ್ರದ ಜೆಡಿಎಸ್ ಶಾಸಕ ದೇವಾನಂದ ಚೌವ್ಹಾಣ ಗಾಯಾಳುಗಳಿಗೆ ಸಹಾಯ ಮಾಡುವ ಮೂಲಕ ಗಂಭೀರವಾಗಿ ಗಾಯಗೊಂಡವರನ್ನು ತುರ್ತಾಗಿ ಆಸ್ಪತ್ರಗೆ ರವಾನೆ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:Yadgiri Water Contamination: ಸ್ವಯಂಪ್ರೇರಿತರಾಗಿ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತರು; ತನಿಖೆಗೆ ಆದೇಶ

ನೀಲಗಿರಿ ಅರಣ್ಯಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು; ಅರಣ್ಯ ಸಿಬ್ಬಂದಿಗಳಿಂದ ಬೆಂಕಿ ನಂದಿಸಲು ಹರಸಾಹಸ

ಚಿಕ್ಕಮಗಳೂರು : ನೀಲಗಿರಿ ಅರಣ್ಯಕ್ಕೆ ಬೆಂಕಿ ಬಿದ್ದು ಹೊತ್ತಿ ಉರಿದಿರುವ ಘಟನೆ ತಾಲೂಕಿನ ಸಗನಿಪುರ ಗ್ರಾಮದ ಬಳಿ ನಡೆದಿದೆ. ಕಿಡಿಗೇಡಿಗಳು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಅರಣ್ಯದಲ್ಲಿದ್ದ ಅತ್ಯಮೂಲ್ಯ ಸಸ್ಯ, ನೀಲಗಿರಿ ಮರಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಗಾಳಿ ಹಾಗೂ ಬಿಸಿಲಿನ ತಾಪಕ್ಕೆ ಬೆಂಕಿಯ ಜ್ವಾಲೆ ಮತ್ತಷ್ಟು ಹೆಚ್ಚಾಗಿದ್ದು, ಸುಮಾರು ಅರ್ಧ ಕಿ.ಮೀ. ವರೆಗೂ ಹೊಗೆ ಆವರಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಬಂದಿದ್ದು ಬೆಂಕಿ ನಂದಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:30 pm, Tue, 28 February 23