ಬಿ.ಎಸ್. ಯಡಿಯೂರಪ್ಪ ಬಿಜೆಪಿಯ ಆಧಾರ ಸ್ತಂಭವಿದ್ದಂತೆ; ಬಿಎಸ್‌ವೈ ರಾಜೀನಾಮೆಯಿಂದ ನಮ್ಮ ಬಲ ಕುಸಿದ ಭಾವನೆ: ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ

ದಕ್ಷಿಣ ಭಾರತದಲ್ಲಿ ಬಿಜೆಪಿ ಹೆಸರೇಳುವವರಿಲ್ಲದಾಗ ಪಕ್ಷ ಕಟ್ಟಿದ್ದರು. ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ತಂದರು. ನಮ್ಮಂಥವರನ್ನು ಗೆಲ್ಲಿಸಲು ಯುವಕರಂತೆ ಪ್ರವಾಸ ಮಾಡಿದರು ಎಂದು ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಬಿಜೆಪಿಯ ಆಧಾರ ಸ್ತಂಭವಿದ್ದಂತೆ; ಬಿಎಸ್‌ವೈ ರಾಜೀನಾಮೆಯಿಂದ ನಮ್ಮ ಬಲ ಕುಸಿದ ಭಾವನೆ: ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ
ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ
Follow us
TV9 Web
| Updated By: ಆಯೇಷಾ ಬಾನು

Updated on: Jul 26, 2021 | 2:52 PM

ಚಿತ್ರದುರ್ಗ: ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ಘೋಷಣೆ ಬೆನ್ನಲ್ಲೆ ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಬಿಜೆಪಿಯ ಆಧಾರ ಸ್ತಂಭವಿದ್ದಂತೆ. ಬಿಎಸ್‌ವೈ ರಾಜೀನಾಮೆಯಿಂದ ನಮ್ಮ ಬಲ ಕುಸಿದ ಭಾವನೆ ಎಂದರು.

ಈ ವೇಳೆ ಮಾತನಾಡುತ್ತ ಅವರು, ದಕ್ಷಿಣ ಭಾರತದಲ್ಲಿ ಬಿಜೆಪಿ ಹೆಸರೇಳುವವರಿಲ್ಲದಾಗ ಪಕ್ಷ ಕಟ್ಟಿದ್ದರು. ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ತಂದರು. ನಮ್ಮಂಥವರನ್ನು ಗೆಲ್ಲಿಸಲು ಯುವಕರಂತೆ ಪ್ರವಾಸ ಮಾಡಿದರು.224ಕ್ಷೇತ್ರಗಳಲ್ಲಿ ಬಿಎಸ್ ವೈ ಸುಂಟರಗಾಳಿಯಂತೆ ತಿರುಗಿದರು. ಬಿಎಸ್ ವೈ ರಾಜೀನಾಮೆಯಿಂದ ವಿರೋಧಿಗಳಲ್ಲೂ ದುರದೃಷ್ಠ ಎಂಬ ಭಾವನೆ. ವೀರಶೈವ ಮಾತ್ರವಲ್ಲದೆ ಪ್ರತಿ ಮಠಗಳಿಗೂ ನೆರವು ನೀಡಿದ್ದಾರೆ. ಬಿಎಸ್ವೈರಂತ ಉನ್ನತ ಮಟ್ಟದ ನಾಯಕತ್ವ ನಮ್ಮ ಪಕ್ಷದಲ್ಲಿ ವಿರಳ. ಈಗ ಬಿಎಸ್ವೈ ಭೇಟಿ ಮಾಡಲು ತೆರಳುವೆ. ಇವರು ಪಕ್ಷಾತೀತ, ಜಾತ್ಯಾತೀತ ನಾಯಕ. ಬಿಎಸ್ ವೈ ರಾಜೀನಾಮೆ ಘೋಷಣೆ ವೇಳೆ ಸಹಜ ನೋವಾಗಿತ್ತು. ಪಕ್ಷ ಬೇರೆ ಉನ್ನತ ಸ್ಥಾನ ನೀಡಿ ಗೌರವಯುತವಾಗಿ ನಡೆಸಿಕೊಳ್ಳಲಿದೆ. ಮುಂದಿನ ಸಿಎಂ, ಸಚಿವ ಸಂಪುಟ ಬಗ್ಗೆ ರಾಷ್ಟ್ರೀಯ ನಾಯಕರಿಂದ ತೀರ್ಮಾನ ಮಾಡಲಾಗುತ್ತೆ. ಈ ವೇಳೆ ಸಚಿವ ಸ್ಥಾನದ ಬಗ್ಗೆ ಕೇಳುವುದು ಸಣ್ಣತನ ಆಗುತ್ತದೆ. ಪಕ್ಷದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದು ಹೇಳಿದರು.

ನಾನು ಶಾಸಕನಾಗುವುದಕ್ಕೆ ಯಡಿಯೂರಪ್ಪನವರೇ ಕಾರಣ ಇನ್ನು ಇದೇ ರೀತಿ ಮೈಸೂರಿನಲ್ಲಿ ಬಿಜೆಪಿ ಶಾಸಕ ಎಲ್.ನಾಗೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. BSY ರಾಜೀನಾಮೆಯಿಂದ ನನಗೆ ವೈಯಕ್ತಿಕವಾಗಿ ನೋವಾಗಿದೆ. ನಾನು ಶಾಸಕನಾಗುವುದಕ್ಕೆ ಯಡಿಯೂರಪ್ಪನವರೇ ಕಾರಣ. ನನ್ನ ಕೆಲಸ ಗಮನಿಸಿ ಬಿಎಸ್‌ವೈ ನನಗೆ ಟಿಕೆಟ್ ಕೊಡಿಸಿದ್ದರು. ರಾಜ್ಯದ ಅಭಿವೃದ್ಧಿಗೆ ಶ್ರಮವಹಿಸಿದ ನಾಯಕ ಯಡಿಯೂರಪ್ಪ. ಇಂತಹ ವಯಸ್ಸಿನಲ್ಲೂ ರಾಜ್ಯಾದ್ಯಂತ ಸಂಚಾರ ಮಾಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ‌. ಬಿಜೆಪಿ ಅಗ್ರಗಣ್ಯ ನಾಯಕ ಬಿಎಸ್ವೈ ಅವರ ಕೆಲಸಗಳನ್ನು ಮರೆಯಲು ಸಾಧ್ಯವಿಲ್ಲ. ಬಿಜೆಪಿ ಶಿಸ್ತಿನ ಪಕ್ಷ, ಹಾಗಾಗಿ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದರು.

ಇದನ್ನೂ ಓದಿ: ಯಡಿಯೂರಪ್ಪ ಭ್ರಷ್ಟ ಮುಖ್ಯಮಂತ್ರಿ ಹೇಳಿಕೆ ವಿಚಾರ: ಸಿದ್ದರಾಮಯ್ಯ ಹೇಳಿಕೆಗೆ ಶ್ರೀನಿವಾಸ ಪ್ರಸಾದ್ ಲೆಫ್ಟ್​​-ರೈಟ್​

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್