AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ಸಾವು

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಬೈರಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೊಲೆರೊದಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೊಳಕಾಲ್ಮೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ಸಾವು
ಅಪಘಾತImage Credit source: tv9 kannada
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:May 27, 2026 | 4:23 PM

Share

ಚಿತ್ರದುರ್ಗ, ಮೇ 27: ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ (accident) ಮೂವರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150Aದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೊಲೆರೋ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸದ್ಯ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ.

ಮುಖ್ಯಾಂಶಗಳು

  • ರಾಷ್ಟ್ರೀಯ ಹೆದ್ದಾರಿ 150Aರಲ್ಲಿ ನಡೆದ ಭೀಕರ ಅಪಘಾತ
  • ಬುಲೆರೋ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
  • ಮೃತರ ಗುರುತು ಪತ್ತೆ ಹಚ್ಚುತ್ತಿರುವ ಮೊಳಕಾಲ್ಮೂರು ಪೊಲೀಸರು

ವಿದ್ಯುತ್ ತಂತಿ ತುಳಿದು ರೈತ ಬಲಿ: ಮೆಸ್ಕಾಂ ನಿರ್ಲಕ್ಷ್ಯ ಆರೋಪ 

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಆಲದಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಪ್ರಸನ್ನ(40) ಮೃತ ರೈತ. ಮೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ದುರಂತ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸರಣಿ ಅಪಘಾತ: ವಾಹನಗಳು ಜಖಂ

ಇನ್ನು ಇತ್ತೀಚೆಗೆ ಕೋಲಾರ ತಾಲೂಕಿನ ಮಡೇರಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸರಣಿ ಅಪಘಾತ ಸಂಭವಿಸಿತ್ತು. ಎರಡು ಕ್ಯಾಂಟರ್ ವಾಹನಗಳು, ಮೂರು ಕಾರುಗಳು ಹಾಗೂ ಒಂದು ಬೈಕ್ ಜಖಂ ಆಗಿತ್ತು. ಕ್ಯಾಂಟರ್​ ಚಾಲಕನ ಅಜಾಕರೂಕತೆ ಹಾಗೂ ಅತೀ ವೇಗದಿಂದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ವಾಹನಗಳಿಗೂ ಹಾನಿಯಾಗಿತ್ತು. ಅಷ್ಟೇ ಅಲ್ಲದೆ ರಸ್ತೆ ಬದಿಯಲ್ಲಿ ಮಾರಾಟಕ್ಕೆ ಇಟ್ಟಿದ್ದ ಮಡಿಕೆ ಅಂಗಡಿಗಳು ಸಹ ಸಂಪೂರ್ಣ ಹಾನಿಯಾಗಿದ್ದವು.

ಇದನ್ನೂ ಓದಿ: ಕರ್ನಾಟಕದಲ್ಲಿ ಹಾವು ಕಡಿತದಿಂದ ಸಾವಿನ ಪ್ರಮಾಣ ಹೆಚ್ಚಳ:​ ನಿರ್ಲಕ್ಷ್ಯ ವಹಿಸದಂತೆ ಆರೋಗ್ಯ ಇಲಾಖೆ​ ಸೂಚನೆ

ಘಟನೆಯಲ್ಲಿ ಬೈಕ್​​ನಲ್ಲಿದ್ದ ಬಾಲಕನ ತಲೆಗೆ ಪೆಟ್ಟು ಬಿದ್ದಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಇನ್ನು ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಅಪಘಾತಕ್ಕೆ ಕಾರಣವಾದ ಈಚರ್ ವಾಹನ ಚಾಲಕನನ್ನ ವಶಕೆ ಪಡೆದು ವಿಚಾರಣೆ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:07 pm, Wed, 27 May 26

Follow Us
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?