ಹಿರಿಯೂರಿನ ಐಮಂಗಲ ಬಳಿ ಬಸ್​​ ಅಪಘಾತ: ಇಬ್ಬರು ಸಾವು; 26 ಮಂದಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಮತ್ತು ಕ್ಲೀನರ್ ಮೃತಪಟ್ಟಿದ್ದು, 26 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್​​ನಲ್ಲಿ ಗೋವಾಕ್ಕೆ ತೆರಳುತ್ತಿದ್ದವರು ಬೆಂಗಳೂರಿನ ಯುನಿವರ್ಸಲ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಎಂಬುದು ಗೊತ್ತಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಿರಿಯೂರಿನ ಐಮಂಗಲ ಬಳಿ ಬಸ್​​ ಅಪಘಾತ: ಇಬ್ಬರು ಸಾವು; 26 ಮಂದಿಗೆ ಗಾಯ
ಬಸ್​​ ಅಪಘಾತ
Image Credit source: Tv9 Kannada
Edited By:

Updated on: Aug 21, 2026 | 7:45 PM

ಮುಖ್ಯಾಂಶಗಳು

  • ಹಿರಿಯೂರಿನ ಐಮಂಗಲ ಬಳಿ ಭೀಕರ ಅಪಘಾತ
  • ಖಾಸಗಿ ಬಸ್​​ ಪ್ಲಟಿಯಾಗಿ ಮೂವರು ದಾರುಣ ಸಾವು
  • 26 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ

ಚಿತ್ರದುರ್ಗ, ಆಗಸ್ಟ್​ 21: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಮೃತಪಟ್ಇರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಬಸ್​​ ಬೆಂಗಳೂರಿಂದ ಗೋವಾಕ್ಕೆ ತೆರಳುತ್ತಿತ್ತು ಎನ್ನಲಾಗಿದ್ದು, ಅಪಘಾತದಲ್ಲಿ 26 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಐಮಂಗಲ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

26ನ ಮಂದಿಗೆ ಗಾಯ, 28 ಮಂದಿ ಸೇಫ್​​

ಇನ್ನು ಬಸ್​​ನಲ್ಲಿ ಗೋವಾಕ್ಕೆ ತೆರಳುತ್ತಿದ್ದವರು ಬೆಂಗಳೂರಿನ ಯುನಿವರ್ಸಲ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಎಂಬುದು ಗೊತ್ತಾಗಿದೆ. ಬಸ್ ಚಾಲಕ ಗುರು ಪ್ರಸಾದ್ ಮತ್ತು ಕ್ಲೀನರ್ ಶಂಕರ್ ಮೃತದುರ್ದೈವಿಗಳಾಗಿದ್ದಾರೆ. ಬಸ್​​ನಲ್ಲಿ ಒಟ್ಟು 56 ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಆ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. 26 ಮಂದಿಗೆ ಗಾಯಗಳಾಗಿದ್ದರೆ ಮತ್ತುಳಿದ 28 ಮಂದಿ ಸೇಫ್​​ ಆಗಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಬಂಡಾರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮುಂದಿನ ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿ: ಮಹಿಳೆ ಸಾವು, 8 ಮಂದಿ ಪ್ರಯಾಣಿಕರಿಗೆ ಗಾಯ

ಅಪಘಾತದ ಭೀಕರತೆ ಬಿಚ್ಚಿಟ್ಟ ವಿದ್ಯಾರ್ಥಿನಿ

ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ಬಸ್ ಅಪಘಾತದ ಬಗ್ಗೆ ಗಾಯಗೊಂಡ ವಿದ್ಯಾರ್ಥಿನಿಯೊಬ್ಬರು ಘಟನೆ ನಡೆದ ಕ್ಷಣವನ್ನು ವಿವರಿಸಿದ್ದಾರೆ. ರಾತ್ರಿ ಸುಮಾರು 10:30ರ ವೇಳೆಗೆ ಎಲ್ಲರೂ ಮಲಗಿದ್ದರು. ಏಕಾಏಕಿ ಭಾರಿ ಸದ್ದು ಕೇಳಿಸಿತು. ಬಸ್ ಡಿಕ್ಕಿ ಹೊಡೆದ ತಕ್ಷಣ ಎಲ್ಲರೂ ಕಿರುಚಲು ಆರಂಭಿಸಿದರು. ಬಳಿಕ ಸ್ಥಳೀಯರು ಬಂದು ಬಸ್‌ನ ಗಾಜು ಒಡೆದು ನಮ್ಮನ್ನು ಹೊರಗೆ ಬರಲು ಸಹಾಯ ಮಾಡಿದರು ಎಂದು ವಿದ್ಯಾರ್ಥಿನಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:36 pm, Fri, 21 August 26

ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Loading...
Unable to load recommendations.
Follow Us