AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಕಾರು-ಲಾರಿ ಮುಖಾಮುಖಿ ಡಿಕ್ಕಿ, ಇಬ್ಬರು ಪುರುಷರು, ಓರ್ವ ಮಹಿಳೆ ಸಾವು

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶ ಮೂಲದ ಇನೊವಾ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಹೊಳಲ್ಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಚಿತ್ರದುರ್ಗ: ಕಾರು-ಲಾರಿ ಮುಖಾಮುಖಿ ಡಿಕ್ಕಿ, ಇಬ್ಬರು ಪುರುಷರು, ಓರ್ವ ಮಹಿಳೆ ಸಾವು
ಹೊಳಲ್ಕೆರೆ ಬಳಿ ಅಪಘಾತ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:May 12, 2025 | 8:43 AM

Share

ಚಿತ್ರದುರ್ಗ, ಮೇ 12: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ (accident) ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು ಸೇರಿದಂತೆ ಓರ್ವ ಮಹಿಳೆ ಸಾವನ್ನಪ್ಪಿರುವಂತ (death) ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ. ಸುನೀತಾ(34), ಶ್ಯಾಂ ಬಾಬು(17), ಶಿವನಾಗಲಿ(55) ಮೃತರು. ಮೃತರನ್ನು ಆಂಧ್ರಪ್ರದೇಶದ ಗುಂಟೂರಿನ ವೆಂಕಟಪುರಂ ಮೂಲದವರು ಎಂದು ಗುರುತಿಸಲಾಗಿದೆ. ಆಂಧ್ರದಿಂದ ಶಿವಮೊಗ್ಗಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿದ್ದ ಕಾರಿಗೆ, ಹೊಳಲ್ಕೆರೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಟ್ರ್ಯಾಕ್ಟರ್​ಗೆ ಓಮ್ನಿ ಡಿಕ್ಕಿ: ಒಂದೂವರೆ ವರ್ಷದ ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವು

ಟ್ರ್ಯಾಕ್ಟರ್​ಗೆ ಓಮ್ನಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಆಂಜನೇಯ ದೇಗುಲ ಬಳಿ ನಡೆದಿದೆ. ಒಂದೂವರೆ ವರ್ಷದ ಮಗು ಲಕ್ಷ್ಮೀ ಮತ್ತು ದಾಕ್ಷಾಯಿಣಿ(50) ಮೃತ ದುರ್ದೈವಿಗಳು.

ಇದನ್ನೂ ಓದಿ
Image
ಟೆಲಿಗ್ರಾಮ್ ಆ್ಯಪ್​ನಲ್ಲಿ ಕೆಲಸ ಹುಡುಕುವವರು ಎಚ್ಚರ! 3.5 ಲಕ್ಷ ರೂ ವಂಚನೆ
Image
ಪೆಹಲ್ಗಾಮ್​​ ಕೇಂದ್ರದ ಪೂರ್ವ ನಿಯೋಜಿತ ಕೃತ್ಯ ಎಂದ ಮುನಿರ್​​ ವಿರುದ್ಧ ಕೇಸ್
Image
ಬೆಂಗಳೂರು: ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನನ್ನ ಅಪಹರಿಸಿ ಹತ್ಯೆ
Image
ಕೊಡಗು: ಕಾಫಿ ತೋಟದಲ್ಲಿ ಗುಂಡಿಕ್ಕಿ ವ್ಯಕ್ತಿಯ ಕೊಲೆ

ಇದನ್ನೂ ಓದಿ: ಟೆಲಿಗ್ರಾಮ್ ಆ್ಯಪ್​ನಲ್ಲಿ ಕೆಲಸ ಹುಡುಕುವವರು ಎಚ್ಚರ! 3.5 ಲಕ್ಷ ರೂ ಕಳೆದುಕೊಂಡ ಯುವಕ

ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್​ಗೆ ಓಮ್ನಿ ಡಿಕ್ಕಿಯಾಗಿದೆ. ಗಾಯಾಳುಗಳಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಟಾಟಾ ಏಸರ್ ವಾಹನ ಹಾಗೂ ಕಾರು ಮಧ್ಯೆ ಮುಖಾಮುಖ ಡಿಕ್ಕಿ 

ಓವರ್ ಟೇಕ್ ಮಾಡುವ ಭರದಲ್ಲಿ ಕಾರು ಹಾಗೂ ಎತ್ತುಗಳನ್ನು ಸಾಗಾಟ ಮಾಡುತ್ತಿದ್ದ ಟಾಟಾ ಏಸರ್ ವಾಹನ ಮಧ್ಯೆ ಮುಖಾಮುಖ ಡಿಕ್ಕಿ ಹೊಡೆದ ಘಟನೆ ಇತ್ತೀಚೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಕ್ರಾಸ್ ಬಳಿ ನಡೆದಿತ್ತು. ಡಿಕ್ಕಿಯ ರಭಸಕ್ಕೆ ಟಾಟಾ ಏಸರ್ ವಾಹನ ಪಲ್ಟಿಯಾಗಿತ್ತು.

ಕಾರು ಚಾಲಕ ಕಲಬುರಗಿ ಜಿಲ್ಲೆಯ ಅಫಜಲಫೂರ ತಾಲೂಕಿನ ಇಂಗಳಗಿ ಗ್ರಾಮದ ಮಲ್ಲು ಗೌರ್ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಇನ್ನು ಟಾಟಾ ಏಸರ್​ನಲ್ಲಿದ್ದ ಚಾಲಕ ಬಸವನಬಾಗೇವಾಡಿ ಪಟ್ಟಣದ ಮಶ್ಯಾಕ ಕೊರಬು ಹಾಗೂ ಕ್ಲೀನರ್ ಬಸವನಬಾಗೇವಾಡಿ ತಾಲೂಕಿನ ಜೈನಾಪೂರ ಗ್ರಾಮದ ಹನುಮಂತ ಕವಡಿಗೆ ಗಾಯಗಳಾಗಿದ್ದವು.

ಇದನ್ನೂ ಓದಿ: ಬೆಂಗಳೂರು: ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನನ್ನ ಅಪಹರಿಸಿ ಹತ್ಯೆ, ಕೊಲೆ ಸತ್ಯ ಬಿಚ್ಚಿಟ್ಟ ಆರೋಪಿ ಪುತ್ರಿ

ಇಬ್ಬರನ್ನು ಮುದ್ದೇಬಿಹಾಳ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ವಾಹನದಲ್ಲಿದ್ದ ಎತ್ತುಗಳಿಗೆ ಗಾಯಗಳಾಗಿಲ್ಲ. ಸ್ಥಳಕ್ಕೆ ಮುದ್ದೇಬಿಹಾಳ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದರು. ರಸ್ತೆಯಲ್ಲಿ ಪಲ್ಟಿಯಾಗಿದ್ದ ವಾಹನವನ್ನು ಎತ್ತಿ ಬದಿಗೆ ಸರಿಸಿದ್ದು ವಾಹನ ಸಂಚಾರಕ್ಕೆ ಅನಕೂಲ ಮಾಡಿಕೊಟ್ಟಿದ್ದರು. ಮುದ್ದೇಬಿಹಾಳ ಪೋಲಿಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:22 am, Mon, 12 May 25

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More