ಆರೋಪಗಳ ಸುರಿಮಳೆ; ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಅರೆಸ್ಟ್

ಮೂಡಲಗಿರಿಯಪ್ಪ ಅವರ ವಿರುದ್ಧ ನಕಲಿ ದಾಖಲೆ‌ ಸೃಷಿಸಿ ₹7 ಕೋಟಿ ಲಪಟಾಯಿಸಿದ ಆರೋಪ, ಬೇನಾಮಿ ವ್ಯಕ್ತಿಗಳ ಹೆಸರಲ್ಲಿ ಚೆಕ್ ನೀಡಿ ಹಣ ಗುಳುಂ ಆರೋಪ ಕೇಳಿ ಬಂದಿದೆ.

ಆರೋಪಗಳ ಸುರಿಮಳೆ; ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಅರೆಸ್ಟ್
ಮೂಡಲಗಿರಿಯಪ್ಪ
Edited By: ಆಯೇಷಾ ಬಾನು

Updated on: Aug 07, 2023 | 8:37 AM

ಚಿತ್ರದುರ್ಗ, ಆ.07: ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕನ(Nirmithi Kendra Former Project Director) ವಿರುದ್ಧ ಆರೋಪದ ಪಟ್ಟಿಯೇ ಕೇಳಿಬಂದಿದ್ದು ಚಿತ್ರದುರ್ಗ ಸಿಇಎನ್ ಠಾಣೆ‌ ಪೊಲೀಸರು(Chitradurga CEN Police Station) ಬಂಧಿಸಿದ್ದಾರೆ. ಮಾಜಿ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಅವರ ವಿರುದ್ಧ ವಿವಿಧ ಕಾಮಗಾರಿಗಳ ಹಣ ದುರ್ಬಳಕೆ ಆರೋಪ ಕೇಳಿ ಬಂದಿದೆ. ಸದ್ಯ ಪೊಲೀಸರು ಮೂಡಲಗಿರಿಯಪ್ಪನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮೂಡಲಗಿರಿಯಪ್ಪ ಅವರ ವಿರುದ್ಧ ನಕಲಿ ದಾಖಲೆ‌ ಸೃಷಿಸಿ ₹7 ಕೋಟಿ ಲಪಟಾಯಿಸಿದ ಆರೋಪ, ಬೇನಾಮಿ ವ್ಯಕ್ತಿಗಳ ಹೆಸರಲ್ಲಿ ಚೆಕ್ ನೀಡಿ ಹಣ ಗುಳುಂ ಆರೋಪ ಕೇಳಿ ಬಂದಿದೆ. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸತ್ಯನಾರಾಯಣರಾವ್ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು. ಬಳಿಕ ಚಿತ್ರದುರ್ಗದ ಸಿಇಎನ್ ಪೊಲೀಸ್ ಠಾಣೆಗೆ ಈ ಪ್ರಕರಣ ವರ್ಗಾವಣೆಯಾಗಿದ್ದು ಪೊಲೀಸರು ಮೂಡಲಗಿರಿಯಪ್ಪ ಅವರನ್ನು ಬಂಧಿಸಿದ್ದಾರೆ. ನಿರ್ಮಿತಿ ಕೇಂದ್ರದ ಹಣ ಲಪಟಾಯಿಸಿದ ಪ್ರಕರಣದಲ್ಲಿ ಮೂಡಲಗಿರಿಯವರು ವಜಾಗೊಂಡಿದ್ದರು. ತಿಂಗಳ ಹಿಂದಷ್ಟೇ ಕೆಲಸದಿಂದ ವಜಾಗೊಳಿಸಲಾಗಿತ್ತು. ನಿನ್ನೆ ಮೂಡಲಗಿರಿಯಪ್ಪ ವಿರುದ್ಧ ಮತ್ತೊಂದು ದೂರು ಹಿನ್ನೆಲೆ ಈಗ ಬಂಧಿಸಲಾಗಿದೆ.

ಇದನ್ನೂ ಓದಿ: ಆನೆ ನೋಡಿಕೊಂಡ ಬೊಮ್ಮನ್​-ಬೆಳ್ಳಿ ದಂಪತಿಗೆ ಇದೆಂಥಾ ಸ್ಥಿತಿ; ಸಿನಿಮಾ ತಂಡದವರಿಂದಲೇ ಮೋಸ

ಎರಡು ಕಾರುಗಳ ನಡುವೆ ಅಪಘಾತ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದ ಬಳಿ ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಡಿಕ್ಕಿಯಾಗಿದ್ದು ರಭಸಕ್ಕೆ ಕಾರು ಪಲ್ಟಿಯಾಗಿದೆ. ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ‌ಯಾಗಿದೆ. ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ‌ಗಳಾಗಿವೆ. ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ನಾಲ್ವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೇನುಬೈಲಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:36 am, Mon, 7 August 23

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us