ಪೋಕ್ಸೋ ಪ್ರಕರಣ: ಚಿತ್ರದುರ್ಗ ಮುರುಘಾಶ್ರೀ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ, ಶರಣರಿಗೆ ಜೈಲೇ ಗತಿ

ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾ ಮಠಶ್ರೀ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಇದರಿಂದ ಮತ್ತೆ ಜೈಲೇ ಗತಿಯಾಗಿದೆ.

ಪೋಕ್ಸೋ ಪ್ರಕರಣ: ಚಿತ್ರದುರ್ಗ ಮುರುಘಾಶ್ರೀ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ, ಶರಣರಿಗೆ ಜೈಲೇ ಗತಿ
ಮುರಘಾ ಮಠ ಸ್ವಾಮಿಜಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 21, 2022 | 3:58 PM

ಚಿತ್ರದುರ್ಗ: ಮಠದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ (pocso case) ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾಶ್ರೀ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಇದರಿಂದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಜೈಲೇ ಗತಿಯಾಗಿದೆ.

ಮುರುಘಾಶ್ರೀ ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಲಿದ್ದರಿಂದ ಇಂದು(ನವೆಂಬರ್ 21) ವಿಡಿಯೋ ಕಾನ್ಫರೆನ್ಸ್​ ಮೂಲಕ ಪೊಲೀಸರು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಿದರು. ಇದನ್ನು ವಿಚಾರಣೆ ನಡೆಸಿದ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ನವೆಂಬರ್ 25ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶಿಸಿದೆ.

ಎ1 ಆರೋಪಿ ಮುರುಘಾ ಶ್ರೀ, ಎ2 ವಾರ್ಡನ್ ರಶ್ಮಿ, ಎ3 ಮಠದ ಮ್ಯಾನೇಜರ್ ಪರಮಶಿವಯ್ಯಗೆ ನವೆಂಬರ್ 25ರ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಮುರುಘಾ ಶರಣರು, ಪರಮಶಿವಯ್ಯ ಚಿತ್ರದುರ್ಗ ಜೈಲಿನಲ್ಲಿದ್ದಾರೆ. ಇನ್ನು ಎ2 ಆರೋಪಿ ಹಾಸ್ಟೆಲ್​ ವಾರ್ಡನ್ ರಶ್ಮಿ ಶಿವಮೊಗ್ಗ ಸೆಂಟ್ರಲ್​ ಜೈಲಿನಲ್ಲಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:51 pm, Mon, 21 November 22