ಶಾಲೆಯಲ್ಲೇ ಕಾಮದಾಟ, ಪ್ರಕರಣ ಬಯಲಾಗದಿರಲು ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ್ದ ಗಣಿತ ಶಿಕ್ಷಕ! ಕೇಸ್ ದಾಖಲು

ಚಿತ್ರದುರ್ಗದ ಚಳ್ಳಕೆರೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಶಿಕ್ಷಕ ರಾಜಣ್ಣ ಎಂಬಾತ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾದಾಗ ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದಾನೆ. ಘಟನೆ ಬಗ್ಗೆ ಮಾಹಿತಿ ತಿಳಿದು ಮಕ್ಕಳ ರಕ್ಷಣಾಧಿಕಾರಿ ದೂರು ನೀಡಿದ್ದು, ಅದರ ಮೇರೆಗೆ ಶಿಕ್ಷಕ ಹಾಗೂ ಗರ್ಭಪಾತ ಮಾಡಿದ ವೈದ್ಯೆ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಶಾಲೆಯಲ್ಲೇ ಕಾಮದಾಟ, ಪ್ರಕರಣ ಬಯಲಾಗದಿರಲು ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ್ದ ಗಣಿತ ಶಿಕ್ಷಕ! ಕೇಸ್ ದಾಖಲು
ಆರೋಪಿ ಶಿಕ್ಷಕ ಹೆಚ್.ಒ. ರಾಜಣ್ಣ ಹಾಗೂ ಸಾಂದರ್ಭಿಕ ಚಿತ್ರ
Image Credit source: TV9 Network
Edited By:

Updated on: Apr 10, 2026 | 12:25 PM

ಚಿತ್ರದುರ್ಗ, ಏಪ್ರಿಲ್ 10: ಗುರು-ಶಿಷ್ಯ ಸಂಬಂಧಕ್ಕೇ ಕಳಂಕ ತರುವಂತಹ ಘಟನೆಯೊಂದು ಚಿತ್ರದುರ್ಗ (Chitradurga) ಜಿಲ್ಲೆಯಲ್ಲಿ ಜರುಗಿದೆ. 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಗಣಿತ ಶಿಕ್ಷಕನೊಬ್ಬ ಶಾಲೆಯ ತರಗತಿ ಕೊಠಡಿಯಲ್ಲೇ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಆರೋಪಿ ಶಿಕ್ಷಕ ಹಾಗೂ ಗರ್ಭಪಾತ ಮಾಡಿಸಿದ ವೈದ್ಯೆ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕ ಹೆಚ್.ಒ. ರಾಜಣ್ಣ ಎಂಬಾತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಈಕೃತ್ಯದಿಂದ ಬಾಲಕಿ ಗರ್ಭ ಧರಿಸಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆಯೇ ರಾಜಣ್ಣ, ಚಳ್ಳಕೆರೆಯ ಲಕ್ಷ್ಮೀ ಶ್ರೀನಿವಾಸ ನರ್ಸಿಂಗ್ ಆಸ್ಪತ್ರೆಯ ವೈದ್ಯೆ ಶಂಕರಲಕ್ಷ್ಮೀ ಅವರ ಸಹಾಯದಿಂದ ಬಾಲಕಿಗೆ ಗರ್ಭಪಾತ ಮಾಡಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೋಕ್ಸೋ ಅಡಿ ದೂರು ದಾಖಲು

ವಿಷಯ ತಿಳಿಯುತ್ತಿದ್ದಂತೆಯೇ ಮಕ್ಕಳ ರಕ್ಷಣಾಧಿಕಾರಿ ರೇಖಾ ಅವರು ಚಳ್ಳಕೆರೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕ ರಾಜಣ್ಣ ಮತ್ತು ಗರ್ಭಪಾತ ಮಾಡಿದ ವೈದ್ಯೆ ಶಂಕರಲಕ್ಷ್ಮೀ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಸಲಿಗೆ ಆಗಿದ್ದೇ ಬೇರೆ!

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us