ಚಿತ್ರದುರ್ಗ: ದುರ್ಗಾವರ ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಆತ್ಮಹತ್ಯೆಗೆ ಶರಣು, ವಾರದ ಬಳಿಕ ಶವ ಪತ್ತೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜನವರಿ 03ರಂದು ನಾಪತ್ತೆಯಾಗಿದ್ದ ನಾಗರಾಜ್ ಶವ ಚಿತ್ರದುರ್ಗ ಬಳಿ ರಾಷ್ಟ್ರೀಯ ಹೆದ್ದಾರಿ 4ರ ಜಮೀನೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಚಿತ್ರದುರ್ಗ, (ಜನವರಿ 12): ಜಿಲ್ಲೆ ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಿತ್ರದುರ್ಗ ನಗರದ ಕೆಳಗೋಟೆ ನಿವಾಸಿ ನಾಗರಾಜ್(45) ದುರ್ಗಾವರ ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿಯಾಗಿದ್ದ. ಆದ್ರೆ, ಏಕಾಏಕಿ ಕಳೆದ ವಾರದಿಂದ ನಾಪತ್ತೆಯಾಗಿದ್ದ. ಈ ಬಗ್ಗೆ ಜನವರಿ 3ರಂದು ಚಳ್ಳಕೆರೆ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಾಗಿತ್ತು. ಇದೀಗ ನಾಗರಾಜ್ ಶವ ಚಿತ್ರದುರ್ಗ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಜನವರಿ 03ರಂದು ನಾಪತ್ತೆಯಾಗಿದ್ದ ನಾಗರಾಜ್ ಶವ ಚಿತ್ರದುರ್ಗ ಬಳಿ ರಾಷ್ಟ್ರೀಯ ಹೆದ್ದಾರಿ 4ರ ಜಮೀನೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು ಏಳೆಂಟು ದಿನದ ಹಿಂದೆಯೇ ನೇಣಿಗೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ. ಅನಾರೋಗ್ಯದಿಂದ ಮನನೊಂದು ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.