ಚಿತ್ರದುರ್ಗ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ರೂಪಾ ಸಾವು, ಕಾಲು ಜಾರಿಬಿದ್ದು ಮೃತಪಟ್ಟರೇ?

ಚಿತ್ರದುರ್ಗ ಜಿಲ್ಲಾ ಕೃಷ್ಠರೋಗ ನಿವಾರಣಾಧಿಕಾರಿ ಡಾ.ರೂಪಾ ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಚಿತ್ರದುರ್ಗ ಜಿಲ್ಲಾ  ಕುಷ್ಠರೋಗ ನಿವಾರಣಾಧಿಕಾರಿ ಡಾ.ರೂಪಾ ಸಾವು, ಕಾಲು ಜಾರಿಬಿದ್ದು ಮೃತಪಟ್ಟರೇ?
ಚಿತ್ರದುರ್ಗ ಜಿಲ್ಲಾ ಕೃಷ್ಠರೋಗ ನಿವಾರಣಾಧಿಕಾರಿ ಡಾ.ರೂಪಾ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 05, 2022 | 9:42 PM

ಚಿತ್ರದುರ್ಗ: ಜಿಲ್ಲಾ ಕುಷ್ಠ ರೋಗ ನಿವಾರಣಾಧಿಕಾರಿ ಡಾ.ರೂಪಾ (dr roopa) ಅವರು ಸೋಮವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಇಂದು(ಡಿಸೆಂಬರ್ 05) ಚಿತ್ರದುರ್ಗ(chitradurga) ನಗರದ ವಿ.ಪಿ. ಎಕ್ಸ್​ಟೆನ್ಷನ್​​​​ ಬಡಾವಣೆ ನಿವಾಸದಲ್ಲಿ ಮನೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇಂದು(ಡಿಸೆಂಬರ್ 05)  ಮನೆಯಲ್ಲಿ ಕಾಲು ಜಾರಿ ಬಿದ್ದಾಗ ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದು, ರಸ್ತಸ್ರಾವವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ಎನ್ನಲಾಗಿದೆ.  ವಿ.ಪಿ. ಎಕ್ಸ್​ಟೆನ್ಷನ್​​​​ ಬಡಾವಣೆ ನಿವಾಸದಲ್ಲಿ ಡಾ.ರೂಪಾ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ, ಅಷ್ಟೊತ್ತಿಗಾಗಲೇ ರೂಪ ಅವರು ಮೃತಪಟ್ಟಿದ್ದರು ಎಂದು ಹೇಳಲಾಗಿದೆ.

ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಹೋಗುವ ಅವಸರದಲ್ಲಿ ಈ ಘಟನೆ ನಡೆದಿದೆ ಎಂದು ಪತಿ ಡಾ.ರವಿರಿಂದ ಅವರು ಪೊಲೀಸರಿಗೆ ಮಾಹಿತಿ ನಿಡಿದ್ದಾರೆ. ಸ್ಥಳಕ್ಕೆ ಚಿತ್ರದುರ್ಗ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆದರೆ, ಈ ಬಗ್ಗೆ ಪೊಲೀಸರು ಇನ್ನೂ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಬಿದ್ದಾಗ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೋ ಅಥವಾ ಘಟನೆಯಿಂದೆ ಏನಾದರೂ ನಡೆದಿದೆಯೋ ಎನ್ನುವ ಬಗ್ಗೆ ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:36 pm, Mon, 5 December 22

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ