ಚಿತ್ರದುರ್ಗ: ಜಿಲ್ಲಾ ಕುಷ್ಠ ರೋಗ ನಿವಾರಣಾಧಿಕಾರಿ ಡಾ.ರೂಪಾ (dr roopa) ಅವರು ಸೋಮವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಇಂದು(ಡಿಸೆಂಬರ್ 05) ಚಿತ್ರದುರ್ಗ(chitradurga) ನಗರದ ವಿ.ಪಿ. ಎಕ್ಸ್ಟೆನ್ಷನ್ ಬಡಾವಣೆ ನಿವಾಸದಲ್ಲಿ ಮನೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇಂದು(ಡಿಸೆಂಬರ್ 05) ಮನೆಯಲ್ಲಿ ಕಾಲು ಜಾರಿ ಬಿದ್ದಾಗ ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದು, ರಸ್ತಸ್ರಾವವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ಎನ್ನಲಾಗಿದೆ. ವಿ.ಪಿ. ಎಕ್ಸ್ಟೆನ್ಷನ್ ಬಡಾವಣೆ ನಿವಾಸದಲ್ಲಿ ಡಾ.ರೂಪಾ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ, ಅಷ್ಟೊತ್ತಿಗಾಗಲೇ ರೂಪ ಅವರು ಮೃತಪಟ್ಟಿದ್ದರು ಎಂದು ಹೇಳಲಾಗಿದೆ.
ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಹೋಗುವ ಅವಸರದಲ್ಲಿ ಈ ಘಟನೆ ನಡೆದಿದೆ ಎಂದು ಪತಿ ಡಾ.ರವಿರಿಂದ ಅವರು ಪೊಲೀಸರಿಗೆ ಮಾಹಿತಿ ನಿಡಿದ್ದಾರೆ. ಸ್ಥಳಕ್ಕೆ ಚಿತ್ರದುರ್ಗ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆದರೆ, ಈ ಬಗ್ಗೆ ಪೊಲೀಸರು ಇನ್ನೂ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಬಿದ್ದಾಗ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೋ ಅಥವಾ ಘಟನೆಯಿಂದೆ ಏನಾದರೂ ನಡೆದಿದೆಯೋ ಎನ್ನುವ ಬಗ್ಗೆ ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 2:36 pm, Mon, 5 December 22