ಚಿತ್ರದುರ್ಗದಲ್ಲಿ ಭೀಕರ ಬರಗಾಲ: ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟ್ ಆದ ಸರ್ಕಾರ, ಆಕ್ರೋಶಗೊಂಡ ರೈತರು

Chitradurga News: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಇಲ್ಲದೇ ಭೀಕರ ಬರಗಾಲ ತಾಂಡವವಾಡುತ್ತಿದೆ. ಹಾಗಾಗಿ ರೈತಾಪಿ ವರ್ಗ ಬಿತ್ತಿದ ಬೆಳೆ ಕೈಗೆ ಸಿಗದೆ ಕಂಗಾಲಾಗಿ ಕುಳಿತಿದ್ದಾರೆ. ಆದರೆ ಸರ್ಕಾರ ಮಾತ್ರ ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟಾಗಿರುವುದು ರೈತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಚಿತ್ರದುರ್ಗದಲ್ಲಿ ಭೀಕರ ಬರಗಾಲ: ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟ್ ಆದ ಸರ್ಕಾರ, ಆಕ್ರೋಶಗೊಂಡ ರೈತರು
ಶೇಂಗಾ ಬೆಳೆ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 02, 2023 | 1:58 PM

ಚಿತ್ರದುರ್ಗ, ಅಕ್ಟೋಬರ್​ 02: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ಬರಗಾಲ (drought) ತಾಂಡವವಾಡುತ್ತಿದೆ. ರೈತಾಪಿ ವರ್ಗ ಬಿತ್ತಿದ ಬೆಳೆ ಕೈಗೆ ಸಿಗದೆ ಕಂಗಾಲಾಗಿ ಕುಳಿತಿದೆ. ಜಮೀನಿನಲ್ಲೇ ಒಣಗಿ ಹೋದ ಬೆಳೆ ಜಾನುವಾರುಗಳ ಪಾಲಾಗಿವೆ. ಸಾಲಸೋಲ ಮಾಡಿ ಬಿತ್ತಿ ಬೆಳೆದ ಬೆಳೆ ಕೈಗೆ ಸಿಗದೆ ರೈತರು ಕಂಗಾಲಾಗಿದ್ದಾರೆ. ಹೂವು, ಶೇಂಗಾ, ರಾಗಿ, ಮೆಕ್ಕೆಜೋಳ ಬೆಳೆಗಳು ಹಾಳಾಗಿವೆ. ಆದರೆ ಸರ್ಕಾರ ಮಾತ್ರ ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟಾಗಿರುವುದು ರೈತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ, ನಲವತ್ತು ಸಾವಿರ ಹೆಕ್ಟೇರ್​ನಲ್ಲಿ ಮೆಕ್ಕೆಜೋಳ, ನೂರಾರು ಎಕರೆ ಪ್ರದೇಶದಲ್ಲಿ ಹೂವು, ರಾಗಿ ಮತ್ತಿತರೆ ಬೆಳೆ ಬೆಳೆಯಲಾಗುತ್ತದೆ. ಆದರೆ ಈ ವರ್ಷ ಭೀಕರ ಬರಗಾಲ ಎದುರಾಗಿದ್ದು, ಬಹುತೇಕ ಬೆಳೆಗಳು ಹಾನಿಗೊಳಗಾಗಿವೆ. ಸಾಲಸೋಲ ಕೃಷಿ ಕಾಯಕದಲ್ಲಿ ತೊಡಗಿದ್ದ ರೈತ ಮುಂದಿನ ಗತಿ ನೆನೆದು ಕಂಗಾಲಾಗಿದ್ದಾನೆ. ಬಿತ್ತಿದ ಬೆಳೆ ಹಾಳಾಗಿದ್ದು ಕುರಿ-ಮೇಕೆ, ಜಾನುವಾರುಗಳಿಗೆ ಆಹಾರವನ್ನಾಗಿಸಿ ಸಂಕಟ ಪಡುವ ಸ್ಥಿತಿ ರೈತನಿಗೆ ಎದುರಾಗಿದೆ.

ಇದನ್ನೂ ಓದಿ: ಗದಗ: ಚೆಂಡು ಹೂವು ಬೆಳೆದು ಮಗಳಿಗೆ ಬಿಇ ಓದಿಸುವ ರೈತನ ಕನಸು ನುಚ್ಚು ನೂರು

ಈಗಾಗಲೇ ಸರ್ಕಾರ ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿದೆ. ಜಿಲ್ಲೆಯ ಆರು ತಾಲೂಕುಗಳನ್ನ ಬರ ಪೀಡಿತ ಪ್ರದೇಶದ ಪಟ್ಟಿಗೆ ಸೇರಿಸಲಾಗಿದೆ. ಆದರೆ ಬರದ ಜಿಲ್ಲೆ ಎಂದು ಘೋಷಿಸಿದ್ದಷ್ಟೇ ಆಗಿದೆ. ಹೊರತು ಪರಿಹಾರ ಕ್ರಮದ ಪ್ರಕ್ರಿಯೆ ನಡೆದಿಲ್ಲ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬರ ಪೀಡಿತ ತಾಲೂಕಿನಿಂದ ಮುಂಡರಗಿ ಕೈ ಬಿಟ್ಟಿದ್ದಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ರೈತರು

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಭೀಕರ ಬರಗಾಲಕ್ಕೆ ತುತ್ತಾಗಿದೆ. ರೈತಾಪಿ ವರ್ಗದ ಸಂಕಟ ಹೇಳ ತೀರದಾಗಿದೆ. ಆದರೆ ಸರ್ಕಾರ ಮಾತ್ರ ಬರದ ಜಿಲ್ಲೆ ಎಂದು ಘೋಷಿಸಿ ಪರಿಹಾರ ಕ್ರಮ ಕೈಗೊಳ್ಳದಿರುವುದು ರೈತಾಪಿ ವರ್ಗದಲ್ಲಿ ಆಕ್ರೋಶ ಮೂಡಿಸಿದೆ.

ಕುಸಿದ ಸೇವಂತಿಗೆ ಬೆಲೆ, ಹೂವಿನ ತೋಟ ನಾಶ

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಮಳೆ ಕೊರತೆಯಿಂದಾಗಿ ಬರದ ಛಾಯೆ ಆವರಿಸಿದೆ. ರೈತರ ಮೇಲಿನ ಈ ಬರೆಯ ಮೇಲೆ ಬೆಲೆ ಕುಸಿತದ ಬರ ಬಿದ್ದಿದೆ. ಬೆಲೆ ಕುಸಿತಗೊಂಡ ಹಿನ್ನೆಲೆ ಕದಂಪೂರ ಗ್ರಾಮದ ರೈತರೊಬ್ಬರು ಸೇವಂತಿಗೆ ಹೂವಿನ ಕೃಷಿಯನ್ನು ನಾಶಗೊಳಿಸಿದ್ದಾರೆ.

ಹೂವಿನ ಬೆಲೆ ಮಾರುಕಟ್ಟೆಯಲ್ಲಿ ಪಾತಾಳಕ್ಕೆ ಕುಸಿದಿದ್ದು, ರೈತ ಅಕ್ಷರಶಃ ಕಂಗಾಲಾಗಿದ್ದಾನೆ. ಭೀಕರ ಬರಗಾಲ ಇದ್ದರೂ ಅಲ್ಪಸ್ವಲ್ಪ ನೀರಿನಲ್ಲಿ ಎರಡೂವರೆ ಎಕರೆ ಜಮೀನಿನಲ್ಲಿ ಸೇವಂತಿಗೆ ಹೂ ಬೆಳೆದಿದ್ದರು. ಆದರೆ, ಮಾರುಕಟ್ಟೆಯಲ್ಲಿ ಈ ಸೇವಂತಿಗೆ ಬೆಲೆ ಸಿಗುತ್ತಿಲ್ಲ. ‌ಹೀಗಾಗಿ ಮಾರುಕಟ್ಟೆಗೆ ಹೋದರೂ ಹತ್ತು ರೂಪಾಯಿ ಒಂದು ಕೆಜಿ ಸೇವಂತಿಗೆ ಮಾರಾಟವಾಗಿಲ್ಲ. ಇದೇ ಕಾರಣಕ್ಕೆ ಸಮೃದ್ಧವಾಗಿ ಬೆಳೆದ ಸೇವಂತಿಗೆ ಕೃಷಿಯನ್ನು ತಾನೇ ಟ್ರ್ಯಾಕ್ಟರ್ ಮೂಲಕ ನಾಶ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.