ಚಿತ್ರದುರ್ಗ: ಚುನಾವಣೆ ಕರ್ತವ್ಯ ನಿರ್ಲಕ್ಷ, 3 ಶಿಕ್ಷಕಿಯರು ಅಮಾನತು
ಲೋಕಸಭಾ ಚುನಾವಣೆ ಹಿನ್ನಲೆ ಎಲ್ಲೆಡೆ ಹದ್ದಿನ ಕಣ್ಣು ಇಡಲಾಗಿದ್ದು, ಯಾವುದೇ ಅಕ್ರಮ ನಡೆಯದಂತೆ ಚೆಕ್ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಅದರಂತೆ ಇದೀಗ ಚುನಾವಣೆ ಕರ್ತವ್ಯ ನಿರ್ಲಕ್ಷ ಹಿನ್ನಲೆ ಚಿತ್ರದುರ್ಗ ಜಿಲ್ಲಾ ಚುನಾವಣಾಧಿಕಾರಿ, ಡಿಸಿ ಟಿ.ವೆಂಕಟೇಶ್ 3 ಶಿಕ್ಷಕಿಯರು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಚಿತ್ರದುರ್ಗ, ಮಾ.21: ಚುನಾವಣೆ ಕರ್ತವ್ಯ ನಿರ್ಲಕ್ಷ ಹಿನ್ನಲೆ 3 ಶಿಕ್ಷಕಿಯರು ಅಮಾನತು(suspended) ಮಾಡಲಾಗಿದೆ. ಚಿಕ್ಕಪುರ ಗೊಲ್ಲರಹಟ್ಟಿ ಸರ್ಕಾರಿ ಶಾಲಾ ಶಿಕ್ಷಕಿ ಜಯಮ್ಮ ಕೆ ಬಿ, ತೋಪುರ ಮಾಳಿಗೆ ಶಾಲಾ ಶಿಕ್ಷಕಿ ರೂಪಾ ಎಸ್ ಹಾಗೂ ಮಠದ ಕುರುಬರಹಟ್ಟಿ ಶಾಲಾ ಶಿಕ್ಷಕಿ ಕೆ.ಗಿರಿಜಮ್ಮ ಎಂಬುವವರನ್ನ ಮತಗಟ್ಟೆ ಅಧಿಕಾರಿಗಳಾಗಿ (ಬಿಎಲ್ ಓ) ನೇಮಕಗೊಂಡಿದ್ದರು. ಆದರೆ, ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ ತೋರಿದ ಹಿನ್ನೆಲೆ ಚಿತ್ರದುರ್ಗ ಜಿಲ್ಲಾ ಚುನಾವಣಾಧಿಕಾರಿ, ಡಿಸಿ ಟಿ.ವೆಂಕಟೇಶ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಖಾಸಗಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 14ಲಕ್ಷ ನಗದು ಜಪ್ತಿ
ಬೆಳಗಾವಿ: ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ಪೋಸ್ಟ್ನಲ್ಲಿ ಖಾಸಗಿ ಬಸ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 14 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ. ಮುಂಬಯಿಯಿಂದ ಬೆಂಗಳೂರಿಗೆ ಹೊರಟ್ಟಿದ್ದ ನ್ಯಾಶನಲ್ ಟ್ರಾವೆಲ್ಸ್ ಬಸ್ನಲ್ಲಿ ಪ್ರಯಾಣಿಕರ ಸೊಗಿನಲ್ಲಿ ಸಯ್ಯದ್ ನಿಸಾರ್ ಎಂಬುವವರು ಹಣ ಸಾಗಿಸುತ್ತಿದ್ದರು. ಬೆಳಗಾವಿ ಮಹಾರಾಷ್ಟ್ರ ಗಡಿಯಲ್ಲಿರುವ ಚೆಕ್ ಪೋಸ್ಟ್ನಲ್ಲಿ ತಪಾಸಣೆ ನಡೆಸಿದ ವೇಳೆ ಬ್ಯಾಗ್ನಲ್ಲಿ ಹದಿನಾಲ್ಕು ಲಕ್ಷ ನಗದು ಪತ್ತೆಯಾಗಿದೆ. ಕೂಡಲೇ ನಿಸಾರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಕೇಸ್ ದಾಖಲಿಸಿಕೊಂಡು ಐಟಿ ಅಧಿಕಾರಿಗಳಿಗೆ ವರ್ಗಾಯಿಸಲಾಗಿದೆ.
ಇದನ್ನೂ ಓದಿ: ಕಲಬುರಗಿಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ಮಾಡಿಕೊಟ್ಟ 16 ಪರೀಕ್ಷಾ ಸಿಬ್ಬಂದಿ ಅಮಾನತ್ತು
ಹಣ ಸುಲಿಗೆ ಆರೋಪ ಹಿನ್ನಲೆ ಅಮಾನತುಗೊಂಡಿದ್ದ ನಾಲ್ವರು ಸಂಚಾರ ಪೊಲೀಸ್
ಇನ್ನು ಕಳೆದ ಫೆಬ್ರವರಿ 28 ರಂದು ಮಹಿಳೆಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಸಂಚಾರ ಪೊಲೀಸರನ್ನು ಅಮಾನತುಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದರು.ಜೀವನ್ ಭೀಮಾ ನಗರ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ವೆಂಕಟಾಚಲಪತಿ, ಹೆಡ್ ಕಾನ್ಸ್ಟೇಬಲ್ಗಳಾದ ಗಿರೀಶ್, ಹುಚ್ಚು ಸಾಬ್ ಮತ್ತು ಕಾನ್ಸ್ ಟೇಬಲ್ ಬಸಪ್ಪ ಇವರನ್ನು ಅಮಾನತುಗೊಂಡ ಅಧಿಕಾರಿಗಳು.ಇವರು ಇಸ್ರೋ ಜಂಕ್ಷನ್ ಬಳಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮದ್ಯಪಾನ ಮಾಡಿ ಚಾಲನೆ ಮಾಡಿರುವುದಾಗಿ ಆರೋಪಿಸಿ ಮಹಿಳೆಯನ್ನು ಬೆದರಿಸಿ 8 ಸಾವಿರ ರೂಪಾಯಿ ಸುಲಿಗೆ ಮಾಡಿದ ಆರೋಪ ವೆಂಕಟಾಚಲಪತಿ ಹಾಗೂ ಇತರರ ಮೇಲೆ ಕೇಳಿ ಬಂದಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:12 pm, Thu, 21 March 24