AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲ ಬೇಗೆಗೆ ಬಾಡುತ್ತಿರುವ ಹೂವುಗಳು; ಹೂ ಬೆಳೆ ಸಂರಕ್ಷಣೆಗೆ ಹಳೇ ಸೀರೆಗಳ ಮೊರೆ ಹೋದ ರೈತರು

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಟಿದೆ. ಪರಿಣಾಮ ಹೂವಿನ ಬೆಳೆಗಾರರು ಕಷ್ಟಪಟ್ಟು ಬೆಳೆದ ಹೂವು ಸಹ ಬಾಡುವಂತಾಗಿದೆ. ಹೀಗಾಗಿ, ಹೂವಿನ ಬೆಳೆ ರಕ್ಷಣೆಗೆ ರೈತಾಪಿ ವರ್ಗ ಹಳೇ ಸೀರೆಗಳ ಮೊರೆ ಹೋಗಿದೆ.

ಬಿಸಿಲ ಬೇಗೆಗೆ ಬಾಡುತ್ತಿರುವ ಹೂವುಗಳು; ಹೂ ಬೆಳೆ ಸಂರಕ್ಷಣೆಗೆ ಹಳೇ ಸೀರೆಗಳ ಮೊರೆ ಹೋದ ರೈತರು
ಚಿತ್ರದುರ್ಗದಲ್ಲಿ ಹೂ ಬೆಳೆ ಸಂರಕ್ಷಣೆಗೆ ಹಳೇ ಸೀರೆಗಳ ಮೊರೆ ಹೋದ ರೈತರು
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Mar 12, 2024 | 9:05 PM

Share

ಚಿತ್ರದುರ್ಗ, ಮಾ.12: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಿದೆ. 32 ಡಿಗ್ರಿ ಸೆಲ್ಸಿಯಸ್ ಇರಬೇಕಿದ್ದ ತಾಪಮಾನ 37ಡಿಗ್ರಿ ಸೆಲ್ಸಿಯಸ್ ದಾಟಿದೆ. ಹೀಗಾಗಿ, ಹೂವಿನ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ, ಮದಕರಿಪುರ, ದೊಡ್ಡ ಸಿದ್ದವ್ವನಹಳ್ಳಿ, ಗೋನೂರು ಭಾಗದಲ್ಲಿ ರೈತಾಪಿ ವರ್ಗ ಹೂವಿನ ಬೆಳೆ(flower crops) ಯನ್ನೇ ಅವಲಂಬಿಸಿ ಬದುಕು ಕಟ್ಟಿಕೊಂಡಿದ್ದಾರೆ. ಆದ್ರೆ, ಈವರ್ಷ ಕಷ್ಟಪಟ್ಟು ಕೊಳವೆಬಾವಿ ನೀರಿನ ಮೂಲಕ ಬೆಳೆ ಉಳಿಸಿಕೊಂಡರೂ ಸಹ ಸೂರ್ಯನ ಕೋಪಕ್ಕೆ ಹೂಬೆಳೆ ಬಾಡುವ ಸ್ಥಿತಿ ನಿರ್ಮಾಣ ಆಗಿದೆ. ಹೀಗಾಗಿ, ಹಳೇ ಸೀರೆಗಳನ್ನು ಸಂಗ್ರಹಿಸಿ ಹೂ ಬೆಳೆಗೆ ಹೊದಿಕೆ ಮಾಡಿಕೊಂಡು ಸಂರಕ್ಷಣೆಗೆ ರೈತರು ಹರಸಾಹಸ ಪಡುತ್ತಿದ್ದಾರೆ.

ಇನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಸೇವಂತಿಗೆ, ಮಲ್ಲಿಗೆ, ಕನಕಾಂಬರ ಸೇರಿದಂತೆ ವಿವಿಧ ಹೂವುಗಳನ್ನು ರೈತರು ಬೆಳೆಯುತ್ತಾರೆ. ಹಬ್ಬ ಹರಿದಿನ, ಮದುವೆ ಸೀಸನ್​ನಲ್ಲಿ ಹೂವಿನ ಬೆಳೆಗೆ ಬೇಡಿಕೆ ಇರುತ್ತದೆ. ಈ ವರ್ಷ ಮಳೆ ಇಲ್ಲದಿದ್ದರೂ ಸಹ ಕೆಲ ರೈತರು ಕಷ್ಟಪಟ್ಟು ಹೂವಿನ ಬೆಳೆ ತೆಗೆದಿದ್ದಾರೆ. ಆದ್ರೆ, ಹೆಚ್ಚಿದ ಬಿಸಿಲಿನ ತಾಪಮಾನದ ಪರಿಣಾಮ ಹೂಬೆಳೆ ಹಾಳಾಗುತ್ತಿದೆ. ಹೀಗಾಗಿ, ಸರ್ಕಾರ ಈ ಬಗ್ಗೆ ಗಮನಹರಿಸಿ ಸೂಕ್ತ ಪರಿಹಾರ ನೀಡಬೇಕೆಂದು ರೈತರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಹೆದ್ದಾರಿ ಡಿವೈಡರ್ ಮೇಲೆ ಈ ವಿಶೇಷ ಹೂವಿನ ಗಿಡ ಮಾತ್ರ ನೆಡಲಾಗುತ್ತದೆ ಯಾಕೆ ಗೊತ್ತಾ? ಇದರ ಹಿಂದಿದೆ ವೈಜ್ಞಾನಿಕ ಕಾರಣ 

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಹೂವಿನ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ನಿರ್ಮಾಣ ಆಗಿದೆ. ಹೀಗಾಗಿ, ಅನೇಕ ರೈತರು ಹೂಬೆಳೆ ಉಳಿಸಿಕೊಳ್ಳಲು ಸೀರೆಯ ಹೊದಿಕೆಯ ಮೊರೆ ಹೋಗಿದ್ದಾರೆ. ಹೀಗಾಗಿ, ಸರ್ಕಾರ ಹೂಬೆಳೆಗಾರರ ಸಂಕಷ್ಟ ಅರಿತು ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕೆಂಬುದು ರೈತರ ಆಗ್ರಹವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ