AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಗೋಲ್​​ಮಾಲ್

ಚಿತ್ರದುರ್ಗ ತಾಲೂಕು ಹಿಂದುಳಿವ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 2022-23ರಲ್ಲಿ ಭಾರೀ ಗೋಲ್​​ಮಾಲ್ ನಡೆದಿದೆ. ಒಟ್ಟು ಎಂಟು ಕೋಟಿ 36 ಲಕ್ಷ 1 ಸಾವಿರ 412 ರೂಪಾಯಿ ಸಮಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದು ಖರ್ಚು ಮಾಡಲಾಗಿದೆ. ಆ ಮೂಲಕ ಕೆ.ಟಿ.ಪಿ.ಪಿ ನಿಯಮವನ್ನು ಅಧಿಕಾರಿಗಳು ಉಲ್ಲಂಘಿಸಿದ್ದಾರೆ.

ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಗೋಲ್​​ಮಾಲ್
ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಗೋಲ್​​ಮಾಲ್
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Oct 21, 2023 | 6:06 PM

Share

ಚಿತ್ರದುರ್ಗ, ಅಕ್ಟೋಬರ್ 21: ಭ್ರಷ್ಟಾಚಾರ ರಹಿತ ಆಡಳಿತ ಎಂಬುದು ಕೇವಲ ಘೋಷಣೆಗೆ ಮಾತ್ರ ಸೀಮಿತವಾದಂತಾಗಿದೆ. ವಿವಿಧ ಇಲಾಖೆಗಳಲ್ಲಿ ಎಗ್ಗಿಲ್ಲದೆ ಬ್ರಹ್ಮಾಂಡ ಬ್ರಷ್ಟಾಚಾರ (Corruption) ನಡೆಯುತ್ತಲೇ ಇದೆ. ಈ ಮಾತಿಗೆ ಸಾಕ್ಷಿಯೆಂಬಂತೆ ಚಿತ್ರದುರ್ಗದಲ್ಲಿ (Chitradurga) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಡಳಿತಾತ್ಮಕ ಅನುಮೋದನೆ ಪಡೆಯದೆ ಎಂಟೂವರೆ ಕೋಟಿ ರೂಪಾಯಿ ಹಣ ಖರ್ಚು ಮಾಡಿದ್ದು ಹಣ ದುರ್ಬಳಕೆ ನಡೆಸಿದ ಆರೋಪ ಕೇಳಿ ಬಂದಿದೆ.

ಚಿತ್ರದುರ್ಗ ತಾಲೂಕು ಹಿಂದುಳಿವ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 2022-23ರಲ್ಲಿ ಭಾರೀ ಗೋಲ್​​ಮಾಲ್ ನಡೆದಿದೆ. ಒಟ್ಟು ಎಂಟು ಕೋಟಿ 36 ಲಕ್ಷ 1 ಸಾವಿರ 412 ರೂಪಾಯಿ ಸಮಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದು ಖರ್ಚು ಮಾಡಲಾಗಿದೆ. ಆ ಮೂಲಕ ಕೆ.ಟಿ.ಪಿ.ಪಿ ನಿಯಮವನ್ನು ಅಧಿಕಾರಿಗಳು ಉಲ್ಲಂಘಿಸಿದ್ದಾರೆ. ವಿದ್ಯಾರ್ಥಿ ನಿಲಯಗಳ ಆಹಾರ ವೆಚ್ಚ, ಮಾನವ ಸೇವೆ ಸಂಸ್ಥೆಗಳಿಗೆ ಬಿಲ್ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಖರ್ಚು ಮಾಡಲಾಗಿದೆ. ಆದ್ರೆ, ಅಧಿಕಾರಿಗಳು ವೈಯಕ್ತಿಕ ಖಾತೆಗೆ ಹಣ ಹಾಕಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಜಿಲ್ಲಾ ಪಂಚಾಯತಿ ಸಿಇಓ, ಜಿಲ್ಲಾಧಿಕಾರಿ ಮತ್ತು ಸರ್ಕಾರಕ್ಕೆ ದೂರು ಸಲ್ಲಿಸಿದ್ದೇನೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೆ ನಿರ್ಲಕ್ಷ ತೋರಿದ್ದು ಲೋಕಾಯುಕ್ತದ ಮೊರೆ ಹೋಗಿದ್ದೇನೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ಇನ್ನು ಈಗಾಗಲೇ ಕೋಟೆನಾಡು ಚಿತ್ರದುರ್ಗದಲ್ಲೇ ಕೇಂದ್ರ ಕಚೇರಿ ಹೊಂದಿರುವ ಬಯಲುಸೀಮೆ ಅಭಿವೃದ್ಧಿ ಮಂಡಳಿಯಲ್ಲೂ ಸಹ ಇದೇ ರೀತಿ ಪ್ರಕರಣ ನಡೆದಿತ್ತು. ಆಡಳಿತಾತ್ಮಕ ಅನುಮೋದನೆ ಪಡೆಯದೆ ನೂರಾರು ಕೋಟಿ ವೆಚ್ಚದ ವರ್ಕ್ ಆರ್ಡರ್ ನೀಡಿದ ಪ್ರಕರಣ ಭಾರೀ ಸುದ್ದಿ ಆಗಿತ್ತು. ಇದೀಗ ಚಿತ್ರದುರ್ಗದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ಇವ್ರ ಆಗ್ರಹ.

ಇದನ್ನೂ ಓದಿ: ಮೊಬೈಲ್ ಕಳೆದುಕೊಂಡ ಯುವಕ, ಹತ್ತು ದಿನ ಅದನ್ನು ಬಿಟ್ಟಿರಲಾರದೆ ನರಳಿ, ಕೋಟೆನಾಡಿನಲ್ಲಿ ಆತ್ಮಹತ್ಯೆಗೆ ಶರಣಾದ

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ತಾಲೂಕು ಹಿಂದುಳಿವ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಗೋಲ್ ಮಾಲ್ ನಡೆದಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಟಿವಿ9 ಜಿಲ್ಲಾಧಿಕಾರಿ ದಿವ್ಯಪ್ರಭು ಮತ್ತು ಜಿಲ್ಲಾ ಪಂಚಾಯತಿ ಸಿಇಓ ಸೋಮಶೇಖರ್ ಅವ್ರನ್ನು ಫೋನ್ ಮೂಲಕ ಸಂಪರ್ಕಿಸಿ ಕೇಳಿದಾಗ ದೂರು ಸ್ವೀಕರಿಸಿ ಪರಿಶೀಲಿಸಿದ್ದು ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ವರದಿ ಪರಿಶೀಲಿಸಿ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್