ವಿದ್ಯುತ್ ಬಿಲ್ ಪಾವತಿಗೆ ಗ್ರಾಮಸ್ಥರ ನಿರಾಕರಣೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯಲ್ಲ ಎಂದ ಜನ, ವಿಡಿಯೋ ವೈರಲ್
ಕಾಂಗ್ರೆಸ್ ಬಹುತಮ ಪಡೆದುಕೊಂಡಿದೆ. ಆದ್ರೆ, ಇನ್ನೂ ಸರ್ಕಾರ ರಚನೆಯಾಗಿಲ್ಲ. ಅದರಕ್ಕೂ ಮೊದಲೇ ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಅವಾಜ್ ಹಾಕಿದ್ದು, ಇದೀಗ ಆ ವಿಡಿಯೋ ವೈರಲ್ ಆಗಿದೆ.
ಚಿತ್ರದುರ್ಗ: ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ(Karnataka Assembly Elections 2023) ಗೆಲ್ಲಲೇಬೇಕೆಂದು ಕಾಂಗ್ರೆಸ್ ಹಲವು ಗ್ಯಾರಂಟಿಗಳು ಘೋಷಿಸಿದೆ. ಇದರಲ್ಲಿ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ (Free Electricity) ಪೂರೈಕೆಯೂ ಒಂದಾಗಿದ್ದು, ಜೂನ್ 1ರಿಂದ ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘಂಟಾಘೋಷವಾಗಿ ಹೇಳಿದ್ದರು. ಅದರಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುತದೊಂದಿಗೆ ಅಧಿಕಾರಕ್ಕೆ ಬಂದಿದೆ. ಆದ್ರೆ, ಸಿಎಂ ಯಾರು ಎನ್ನುವುದು ಕಗ್ಗಂಟಾಗಿದೆ. ನೂತನ ಮುಖ್ಯಮಂತ್ರಿ ಪ್ರಮಾಣ ವಚನಸ್ವೀಕರಿಸಿದ ಬಳಿಕ ಮೊದಲ ಸಚಿವ ಸಂಪುಟದಲ್ಲೇ ಗ್ಯಾರಂಟಿಗಳನ್ನು ಅಧಿಕೃತವಾಗಿ ಜಾರಿಗೊಳಿಸಲು ಕಾಂಗ್ರೆಸ್ ಮುಂದಾಗಿದೆ. ಅದರಕ್ಕೂ ಮೊದಲೇ ಈ ಹಳ್ಳಿಯಲ್ಲಿ ಗ್ರಾಮಸ್ಥರು ವಿದ್ಯುತ್ ಬಿಗ್ ಕಟ್ಟಲು ನಿರಾಕರಿಸಿದ್ದಾರೆ. ಹೌದು…ಚಿತ್ರದುರ್ಗದ ಜಾಲಿಕಟ್ಟೆಯಲ್ಲಿ ವಿದ್ಯುತ್ ಬಿಲ್ ಪಾವತಿಸಲು ಜನರು ನಿರಾಕರಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ಬಿಲ್ ಕಟ್ಟಲ್ಲ ಎಂದು ಬೆಸ್ಕಾಂ ಮೀಟರ್ ರೀಡರ್ ಗೆ ಗ್ರಾಮಸ್ಥರು ಆವಾಜ್ ಹಾಕಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೇಕಾರರಿಗೆ 10 ಹೆಚ್‌ಪಿವರೆಗೆ ಉಚಿತ ವಿದ್ಯುತ್: ಸಿದ್ದರಾಮಯ್ಯ ಘೋಷಣೆ
ವಿದ್ಯುತ್ ಫ್ರೀ ಎಂದು ಮೊದಲೇ ಕಾಂಗ್ರೆಸ್ ಘೋಷಿಸಿದೆ. ಈಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆಯಲ್ಲ. ಯಾಕೆ ವಿದ್ಯುತ್ ಬಿಲ್ ಕಟ್ಟಬೇಕೆಂದು ಮೀಟರ್ ರೀಡರ್ಗೆ ಜನರು ಪ್ರಶ್ನಿಸಿದ್ದಾರೆ. ಆದೇಶ ಬರುವವರೆಗೆ ಬಿಲ್ ಕಟ್ಟಬೇಕೆಂದ ಮೀಟರ್ ರೀಡರ್ ತಾಕೀತು ಮಾಡಿದ್ದಾರೆ. ಬಳಿಕ ಗ್ರಾಮಸ್ಥರು ಆದೇಶದ ಬಗ್ಗೆ ಕಾಂಗ್ರೆಸ್ ನವರಿಗೇ ಕೇಳಿ ಎಂದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಜೂನ್ 1ರಿಂದ ವಿದ್ಯುತ್ ಬಿಲ್ ಕಟ್ಟಬೇಡಿ ಎಂದಿದ್ದ ಡಿಕೆಶಿ
ಹೌದು…ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ಉಚಿತ ಎಂದು ಘೋಷಣೆ ಮಾಡಿತ್ತು. ಪ್ರಣಾಳಿಕೆಯಲ್ಲೂ ಸಹ ಇದನ್ನು ಉಲ್ಲೇಖಿಸಿತ್ತು. ಅಲ್ಲದೇ ಈ ಬಗ್ಗೆ ಗ್ಯಾರಂಟಿ ಕಾರ್ಡ್ ಅನ್ನು ಮನೆ-ಮನೆ ಹಂಚಿದ್ದರು. ಸಾಲದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಳವಳ್ಳಿಯಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡುವಗ ಜೂನ್ 1ರಿಂದ ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಹೇಳಿದ್ದರು. ಮೇ 15ರಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಜೂನ್ 1ರಿಂದ ಕರೆಂಟ್ ಬಿಲ್ ಕಟ್ಟುವಂತಿಲ್ಲ ಎಂದಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ಗೃಹಜ್ಯೋತಿ ಯೋಜನೆ; 200 ಯೂನಿಟ್ ಉಚಿತ ವಿದ್ಯುತ್ ಭರವಸೆ ಬಗ್ಗೆ ತಿಳಿಯಲೇಬೇಕಾದ ಮಾಹಿತಿ
ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ. ಇದು ಕಾಂಗ್ರೆಸ್ ಮೊದಲ ಗ್ಯಾರಂಟಿಯಾಗಿತ್ತು. ಈ ಮೂಲಕ ಜನಸಾಮಾನ್ಯರು ಹಾಗೂ ಬಡವರ ಗಮನ ಸೆಳೆಯುವ ಪ್ರಯತ್ನ ಕಾಂಗ್ರೆಸ್ ನಡೆಸಿತ್ತು. ಆದರೆ ಇದಕ್ಕೆ ಪರ ಹಾಗೂ ವಿರೋಧವಾದ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಇನ್ನು ಮಹಿಳೆಯರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಉಚಿತ ಸಾರಿಗೆ ಭರವಸೆ ನೀಡಿದ್ದು, ಈ ಬಗ್ಗೆ ಕೆಲ ಫನ್ನಿ ವಿಡಿಯೋಗಳು ವೈರಲ್ ಆಗುತ್ತಿವೆ.
ಇನ್ನು ಕಾಂಗ್ರೆಸ್ ಸಹ ಮೊದಲ ಸಚಿವ ಸಂಪುದಲ್ಲೇ ಗ್ಯಾರಂಟಿಗಳನ್ನು ಅಧಿಕೃತವಾಗಿ ಜಾರಿಗೊಳಿಸುವುದಾಗಿ ಹೇಳಿದೆ.
ವೈರಲ್ ಆಗುತ್ತಿರುವ ವಿಡಿಯೋ
Published On - 1:48 pm, Mon, 15 May 23