ಆಡಳಿತಾಧಿಕಾರಿ ನೇಮಕವಾಗಿದೆ; ಇನ್ನೇನು ಹಸ್ತಕ್ಷೇಪ ಮಾಡಬೇಡಿ -ಮುರುಘಾ ಶರಣಗೆ ಜಡ್ಜ್​​ ಕೋಮಲಾ ಖಡಕ್ ಆದೇಶ

Murugha Sharana Swamiji: ಮುರುಘಾಮಠದ ಪೀಠಾಧ್ಯಕ್ಷ, SJM ವಿದ್ಯಾಪೀಠದ ಅಧ್ಯಕ್ಷರಾಗಿರುವ ಮುರುಘಾಶ್ರೀ ಧಾರ್ಮಿಕ ಕೇಂದ್ರ ದುರ್ಬಳಕೆ 1988 ಕಾಯ್ದೆ ಅನ್ವಯಗೊಳಿಸದ ಹಿನ್ನೆಲೆ ಸರ್ಕಾರಿ ವಕೀಲೆ ನಾಗವೇಣಿ ವಾದ ಮಂಡಿಸಿದ್ದರು.

ಆಡಳಿತಾಧಿಕಾರಿ ನೇಮಕವಾಗಿದೆ; ಇನ್ನೇನು ಹಸ್ತಕ್ಷೇಪ ಮಾಡಬೇಡಿ -ಮುರುಘಾ ಶರಣಗೆ ಜಡ್ಜ್​​ ಕೋಮಲಾ ಖಡಕ್ ಆದೇಶ
murugha shree, NIA
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 15, 2022 | 4:48 PM

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ (POCSO) ಚಿತ್ರದುರ್ಗದ (Chitradurga) ಮುರುಘಾ ಸ್ವಾಮೀಜಿ (Murugha Sharana Swamiji) ಜೈಲುಪಾಲಾಗಿದ್ದು, ಮುರುಘಾ ಮಠದಲ್ಲಿ ಆಡಳಿತಾತ್ಮಕ ಸಮಸ್ಯೆ ತಲೆದೋರಬಾರದು ಎಂದು ಸರ್ಕಾರವು ಆಡಳಿತಾಧಿಕಾರಿಯನ್ನು ನೇಮಿಸಿದೆ. ಇದರ ಬೆನ್ನಿಗೆ ಮಠ ಮತ್ತು SJM ವಿದ್ಯಾಪೀಠದ ಆಡಳಿತದಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡದಂತೆ ಪ್ರಕರಣದ ಮೊದಲ ಆರೋಪಿ ಡಾ. ಶಿವಮೂರ್ತಿ ಮುರುಘಾ ಶರಣಗೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ವಿಚಾರಣೆ ಮುಗಿಯುವವರೆಗೂ ಹಸ್ತಕ್ಷೇಪ ಮಾಡದಂತೆ ಆದೇಶದಲ್ಲಿ ತಿಳಿಸಲಾಗಿದೆ. ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ.ಕೆ. ಕೋಮಲಾ (Judge BK Komala, IInd Addl District & Sessions Court ) ಅವರಿಂದ ಈ ಆದೇಶ ಹೊರಬಿದ್ದಿದೆ.

ಇದನ್ನೂ ಓದಿ:  ಮಹಿಳೆಯರಿಗಾಗಿ ಪ್ರತ್ಯೇಕ ‘ಆಯುಷ್ಮತಿ ಕ್ಲಿನಿಕ್‌ : ಆರೋಗ್ಯ ಸಚಿವ ಸುಧಾಕರ್‌ ಪ್ರಕಟ

ಮುರುಘಾಮಠದ ಪೀಠಾಧ್ಯಕ್ಷ (Murugha Sharana Swamiji), SJM ವಿದ್ಯಾಪೀಠದ ಅಧ್ಯಕ್ಷರಾಗಿರುವ ಮುರುಘಾಶ್ರೀ ಧಾರ್ಮಿಕ ಕೇಂದ್ರ ದುರ್ಬಳಕೆ 1988 ಕಾಯ್ದೆ ಅನ್ವಯಗೊಳಿಸಿದ ಹಿನ್ನೆಲೆ ಸರ್ಕಾರಿ ವಕೀಲೆ ನಾಗವೇಣಿ ವಾದ ಮಂಡಿಸಿದ್ದರು. ಮಠದ ಪೀಠಾಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ವಾದ ಮಂಡಿಸಿದ್ದಾರೆ.

ಮುರುಘಾ ಮಠ ಅಧೀನ ಸಂಸ್ಥೆ ಎಸ್​​ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಉದ್ಯಮಿ ಭರತ್ ನೇಮಕ

ಚಿತ್ರದುರ್ಗ ಮುರುಘಾ ಮಠದ ಅಧೀನ ಸಂಸ್ಥೆಯಾಗಿರುವ ಎಸ್​​ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್​ ಅವರನ್ನು ನೇಮಕ ಮಾಡಲಾಗಿದೆ. ವಿದೇಶದಲ್ಲಿ ಕಾರ್ಯ ನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿ ಬಸವಪ್ರಭು ಶ್ರೀಗಳು, ಎಸ್​​ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎಸ್​.ಬಿ.ವಸ್ತ್ರದಮಠ ಉಪಸ್ಥಿತರಿದ್ದರು.

ಮುರುಘಾಶ್ರೀ ವಜಾಕ್ಕೆ ಹೆಚ್ಚಿದ ಒತ್ತಡ

ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾಶ್ರೀಯನ್ನು ಚಿತ್ರದುರ್ಗ ಮುರುಘಾಮಠದ ಪೀಠಾದ್ಯಕ್ಷ ಸ್ಥಾನದಿಂದ‌‌ ವಜಾ ಮಾಡಲು ಒತ್ತಡ ಹೆಚ್ಚಾಗಿದೆ. ಹೀಗಾಗಿ ಇಂದು ಚಿತ್ರದುರ್ಗದಲ್ಲಿ ವೀರಶೈವ ಲಿಂಗಾಯತ ಸಮಾಜದ ಸಭೆ ನಡೆಯಲಿದೆ. ಮಾಜಿ ಸಚಿವ ಎಚ್.ಏಕಾಂತಯ್ಯ ನೇತೃತ್ವದಲ್ಲಿ ಚಿತ್ರದುರ್ಗ ತಾಲೂಕಿನ ಸಿಬಾರ ಬಳಿಯ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಸಭೆ ನಡೆಯಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:28 pm, Thu, 15 December 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ