AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಸ್ಥರಿಗೆ ಉದ್ಯೋಗ ನೀಡುವುದಾಗಿ ಸಿಎಂ ಭರವಸೆ

ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಆರು ಜನ ಮೃತಪಟ್ಟವರ ಕುಟುಂಬದವರಿಗೆ ಉದ್ಯೋಗ ನೀಡಲಾಗುವುದು. ಮತ್ತು ಕುಟುಂಬದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಸ್ಥರಿಗೆ ಉದ್ಯೋಗ ನೀಡುವುದಾಗಿ ಸಿಎಂ ಭರವಸೆ
ಸಿದ್ದರಾಮಯ್ಯ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Oct 06, 2023 | 1:49 PM

Share

ಚಿತ್ರದುರ್ಗ ಅ.06: ಇಲ್ಲಿನ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು (Polluted Water) ಸೇವಿಸಿ ಆರು ಜನ ಮೃತಪಟ್ಟವರ ಕುಟುಂಬದವರಿಗೆ ಉದ್ಯೋಗ ನೀಡಲಾಗುವುದು. ಮತ್ತು ಕುಟುಂಬದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಕವಾಡಿಗರಹಟ್ಟಿ ಬಡಾವಣೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಡವಾಣೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ನೀಡುತ್ತೇವೆ. ಕವಾಡಿಗರಹಟ್ಟಿ ನಿವಾಸಿಗಳಿಗೆ ಮೂರು ಎಕರೆ ಜಮೀನಿನಲ್ಲಿ ವಸತಿ ವ್ಯವಸ್ಥೆ ನೀಡುತ್ತೇವೆ. ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕಲುಷಿತ ನೀರು ಸೇವಿಸಿ 6 ಜನ ಸಾವು

ಆಗಸ್ಟ್​ 1 ರಂದು ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಮರಣ‌ ಮೃದಂಗವೇ ಬಾರಿಸಿತ್ತು. ಕಲುಷಿತ ನೀರು ಸೇವಿಸಿದ ಪರಿಣಾಮ ಈವರೆಗೆ ಆರು ಜನರು ಮೃತಪಟ್ಪಿದ್ದರು. ಅಲ್ಲದೆ ಓರ್ವ ಗರ್ಭಿಣಿಯ ಗರ್ಭಪಾತವಾಗಿತ್ತ. 206ಜನ ವಾಂತಿ ಬೇಧಿಯಿಂದ ಅಸ್ವಸ್ಥರಾಗಿ‌ ಚಿಕಿತ್ಸೆ ಪಡೆದಿದ್ದು 59ಜನ ಡಿಸ್ಚಾರ್ಜ್ ಆಗಿದ್ದರು.

ಆರು ಜನರ ಸಾವಿಗೆ ಹಳೇ ಧ್ವೇಷ ಕಾರಣ: ಆರೋಪ

ದಲಿತ ಯುವಕ ಸವರ್ಣಿಯ ಸಮುದಾಯದ ಬಾಲಕಿಯನ್ನು ಪ್ರೇಮಿಸಿದ್ದು ಫೋಕ್ಸೋ ಪ್ರಕರಣ ದಾಖಲಾಗಿತ್ತು. ಅದೇ ಕಾರಣಕ್ಕೆ ದ್ವೇಷದಿಂದ ನಿರಗಂಟಿ ಸುರೇಶ ಎಂಬಾತ ನೀರಿನ ಟ್ಯಾಂಕಿನಲ್ಲಿ ವಿಷ ಬೆರೆಸಿದ್ದನು. ಮೊದಲು ನೀರಗಂಟಿ ಸುರೇಶನ ಬಂಧಿಸಬೇಕೆಂದು ಮೃತ ಮಂಜುಳಾ ಅವರ ಮಾವ ರಾಮಣ್ಣ ಆರೋಪಿಸಿದ್ದರು.

ಕಾಲರಾ ಮಾದರಿಯ ಸೂಕ್ಷ್ಮಾಣು ಅಂಶ ಪತ್ತೆ

ಆಗಸ್ಟ 3 ರಂದು ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣಾ ಪ್ರಯೋಗಾಲಯದ ವರದಿ ಬಂದಿದ್ದು, ಕಾಲರಾ ಮಾದರಿಯ ಸೂಕ್ಷ್ಮಾಣು ಅಂಶ ಪತ್ತೆಯಾಗಿತ್ತು. ವಾಂತಿ, ಭೇದಿ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ಮಾಡಿದ್ದು, ಈ ನೀರು ಕುಡಿಯಲು ಯೋಗ್ಯವಲ್ಲವೆಂದು ವರದಿಯಲ್ಲಿ ಉಲ್ಲೇಖಿಸಿತ್ತು.

ವಿಧಿವಿಜ್ಞಾನ ಪ್ರಯೋಗಾಲಯದ ವರದಿ

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿದ್ದು, ನೀರಿನಲ್ಲಿ ಕಾಲರಾ ಮಾದರಿಯ ಬ್ಯಾಕ್ಟೀರಿಯ ಪತ್ತೆಯಾಗಿತ್ತು. ಆರು ಜನರ ಸಾವಿಗೆ ಕಾಲರಾ ಮಾದರಿಯ ಬ್ಯಾಕ್ಟೀರಿಯ ಕಾರಣ ಎಂದು ವದಿಯಲ್ಲಿ ಉಲ್ಲೇಖವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Fri, 6 October 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ