ಚಿತ್ರದುರ್ಗ ಅ.06: ಇಲ್ಲಿನ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು (Polluted Water) ಸೇವಿಸಿ ಆರು ಜನ ಮೃತಪಟ್ಟವರ ಕುಟುಂಬದವರಿಗೆ ಉದ್ಯೋಗ ನೀಡಲಾಗುವುದು. ಮತ್ತು ಕುಟುಂಬದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಕವಾಡಿಗರಹಟ್ಟಿ ಬಡಾವಣೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಡವಾಣೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ನೀಡುತ್ತೇವೆ. ಕವಾಡಿಗರಹಟ್ಟಿ ನಿವಾಸಿಗಳಿಗೆ ಮೂರು ಎಕರೆ ಜಮೀನಿನಲ್ಲಿ ವಸತಿ ವ್ಯವಸ್ಥೆ ನೀಡುತ್ತೇವೆ. ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಆಗಸ್ಟ್ 1 ರಂದು ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಮರಣ ಮೃದಂಗವೇ ಬಾರಿಸಿತ್ತು. ಕಲುಷಿತ ನೀರು ಸೇವಿಸಿದ ಪರಿಣಾಮ ಈವರೆಗೆ ಆರು ಜನರು ಮೃತಪಟ್ಪಿದ್ದರು. ಅಲ್ಲದೆ ಓರ್ವ ಗರ್ಭಿಣಿಯ ಗರ್ಭಪಾತವಾಗಿತ್ತ. 206ಜನ ವಾಂತಿ ಬೇಧಿಯಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆದಿದ್ದು 59ಜನ ಡಿಸ್ಚಾರ್ಜ್ ಆಗಿದ್ದರು.
ದಲಿತ ಯುವಕ ಸವರ್ಣಿಯ ಸಮುದಾಯದ ಬಾಲಕಿಯನ್ನು ಪ್ರೇಮಿಸಿದ್ದು ಫೋಕ್ಸೋ ಪ್ರಕರಣ ದಾಖಲಾಗಿತ್ತು. ಅದೇ ಕಾರಣಕ್ಕೆ ದ್ವೇಷದಿಂದ ನಿರಗಂಟಿ ಸುರೇಶ ಎಂಬಾತ ನೀರಿನ ಟ್ಯಾಂಕಿನಲ್ಲಿ ವಿಷ ಬೆರೆಸಿದ್ದನು. ಮೊದಲು ನೀರಗಂಟಿ ಸುರೇಶನ ಬಂಧಿಸಬೇಕೆಂದು ಮೃತ ಮಂಜುಳಾ ಅವರ ಮಾವ ರಾಮಣ್ಣ ಆರೋಪಿಸಿದ್ದರು.
ಆಗಸ್ಟ 3 ರಂದು ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣಾ ಪ್ರಯೋಗಾಲಯದ ವರದಿ ಬಂದಿದ್ದು, ಕಾಲರಾ ಮಾದರಿಯ ಸೂಕ್ಷ್ಮಾಣು ಅಂಶ ಪತ್ತೆಯಾಗಿತ್ತು. ವಾಂತಿ, ಭೇದಿ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ಮಾಡಿದ್ದು, ಈ ನೀರು ಕುಡಿಯಲು ಯೋಗ್ಯವಲ್ಲವೆಂದು ವರದಿಯಲ್ಲಿ ಉಲ್ಲೇಖಿಸಿತ್ತು.
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿದ್ದು, ನೀರಿನಲ್ಲಿ ಕಾಲರಾ ಮಾದರಿಯ ಬ್ಯಾಕ್ಟೀರಿಯ ಪತ್ತೆಯಾಗಿತ್ತು. ಆರು ಜನರ ಸಾವಿಗೆ ಕಾಲರಾ ಮಾದರಿಯ ಬ್ಯಾಕ್ಟೀರಿಯ ಕಾರಣ ಎಂದು ವದಿಯಲ್ಲಿ ಉಲ್ಲೇಖವಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:41 pm, Fri, 6 October 23